ಐಹೊಳೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು; ಆರು ಮಂದಿ ಗಾಯ

Date:

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಐಹೊಳೆ ಗ್ರಾಮದಲ್ಲಿ ಗುರುವಾರ ಸಂಜೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಎಂಟು ಮಂದಿಗೆ ಸಿಡಿಲು ಬಡಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಕುಷ್ಟಗಿ ತಾಲ್ಲೂಕಿನ ಕಟಾಪುರ ಗ್ರಾಮದ ಭರಮಪ್ಪ ಕಂಡೇಕರ್ ಮತ್ತು ಐಹೊಳೆ ಗ್ರಾಮದ ರಾಮವ್ವ ಹೋಳಗೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

- Advertisement -

ಗಾಯಗೊಂಡವರ ಪೈಕಿ ಕಟಾಪುರ ಗ್ರಾಮದ ಮುತ್ತಪ್ಪ ಕಂಡೇಕರ್, ಜ್ಯೋತಿ ಕಂಡೇಕರ್, ಐಹೊಳೆ ಗ್ರಾಮದ ಜ್ಯೋತಿ ಕುರಿ (32) ಹಾಗೂ ರೇಣವ್ವ ಸುಟ್ಟನ್ನವರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟಾಪುರ ಗ್ರಾಮದ ನಾಗವ್ವ ಕಂಡೇಕರ್ ಹಾಗೂ ಸಾವಂತ್ರವ್ವ ಕಂಡೇಕರ್ ಅವರು ಐಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗದಗ | ಬದುಕ ಬೆಳಗಿತು ಹಣತೆ: ಕುಂಬಾರಿಕೆಗೆ ಮರು...

ಆಧುನಿಕತೆಯ ಭರಾಟೆಯಲ್ಲಿ ಸಾಂಪ್ರದಾಯಿಕ ಕುಂಬಾರಿಕೆ ವೃತ್ತಿ ನಿಧಾನವಾಗಿ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ, ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಮಹಿಳೆಯೊಬ್ಬರು ತಮ್ಮ ಕುಟುಂಬದ ಕುಲಕಸುಬನ್ನೇ ಆದಾಯದ ಪ್ರಮುಖ ಮೂಲವನ್ನಾಗಿಸಿಕೊಂಡು ಸ್ವಾವಲಂಬಿ ಬದುಕಿನತ್ತ ಹೆಜ್ಜೆಯಿಟ್ಟಿದ್ದಾರೆ. ಸಂಜೀವಿನಿ...

ಬೆಳಕಿನ ಹಬ್ಬಕ್ಕೆ ಮಾಲಿನ್ಯದ ಕತ್ತಲು; ದೆಹಲಿ ಜನ ಪಾಠ...

ವರ್ಷಕ್ಕೊಮ್ಮೆ ಬರುವ ದೀಪಾವಳಿ ಹಬ್ಬವನ್ನು ಕೇವಲ ದೀಪಗಳ ಹಬ್ಬವೆಂದು ನೋಡದೆ, ಬೆಳಕಿನ ಸಂಭ್ರಮದ ಪ್ರತೀಕವಾಗಿಯೂ ಪರಿಗಣಿಸಲಾಗಿದೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಹಬ್ಬ ಪ್ರತಿವರ್ಷವೂ 'ಉಸಿರುಗಟ್ಟಿಸುವ ನರಕಯಾತನೆ'ಯಾಗಿ ಬದಲಾಗುತ್ತಿರುವುದು ಕಟು ಸತ್ಯ....

NCPಯನ್ನು ಒಡೆದಿದ್ದ ಬಿಜೆಪಿಯೇ ಅದನ್ನು ಕೂಡಿಸಲು ಹೊರಟಿದೆ; ರಾಜಕೀಯ...

ವಿರೋಧ ಪಕ್ಷಗಳ ಸಾಲಿನಲ್ಲಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಶರದ್ ಪವಾರ್ ನಡುವಿನ ಸೌಹಾರ್ದ ಸಂಬಂಧ ಮುಂದುವರಿದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪವಾರ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ಮತ್ತು ದೆಹಲಿಯಲ್ಲಿ...

ಜಿಲ್ಲಾ ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳನ್ನು ಜಿಲ್ಲಾಧಿಕಾರಿ ಸಂಗಪ್ಪ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ವೈದ್ಯರಿಂದ ಗಾಯಾಳುಗಳ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಪಡೆದ ಅವರು, ಚಿಕಿತ್ಸೆಯಲ್ಲಿ ಯಾವುದೇ ಕೊರತೆಯಾಗದಂತೆ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಹಾಗೂ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ನಿರ್ದೇಶನ ನೀಡಿದರು.

ಸಿಡಿಲು ಬಡಿದ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ಮೃತಪಟ್ಟವರ ಕುಟುಂಬಸ್ಥರು ಹಾಗೂ ಗಾಯಾಳುಗಳ ಕುಟುಂಬಸ್ಥರಿಗೆ ಅಧಿಕಾರಿಗಳು ಅಗತ್ಯ ನೆರವು ಒದಗಿಸುವ ಕ್ರಮ ಕೈಗೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಪೆರಂಪಳ್ಳಿ ಚರ್ಚ್ ವೃತ್ತದಲ್ಲಿ ಅಪಘಾತ ತಡೆಗೆ 6 ಬ್ಯಾರಿಕೇಡ್ ಅಳವಡಿಕೆ

ಪೆರಂಪಳ್ಳಿ ಚರ್ಚ್ ವೃತ್ತದ ಬಳಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ...

ದೀಪಾವಳಿ ಸಂಭ್ರಮದ ನಡುವೆ ಅಂದರ್-ಬಾಹರ್ ಜೂಜಾಟ: ಹೊನ್ನಾವರ, ಹಳಿಯಾಳದಲ್ಲಿ 10 ಮಂದಿ ವಶಕ್ಕೆ

ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಜಿಲ್ಲೆಯ ಹೊನ್ನಾವರ ಮತ್ತು ಹಳಿಯಾಳ ತಾಲೂಕುಗಳಲ್ಲಿ...

ಮೋದಿ, ಶಾ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ: ಪ್ರಧಾನಿಯ ‘ವೈಚಾರಿಕ ನಕ್ಸಲರು’ ಹೇಳಿಕೆಗೆ ಬಘೇಲ್ ತಿರುಗೇಟು

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ವಿರುದ್ಧ...

ಹಾಸನ | ಸಚಿವ ಎಚ್‌.ಡಿ ಕುಮಾರಸ್ವಾಮಿ ಸುಳ್ಳು ಆರೋಪ ಮಾಡಿದ್ದಾರೆ; ಡಿಸಿ ಲತಾ ಕುಮಾರಿ

ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಾಟ್ಸ್‌ಆಯಪ್‌ ಚಾಟ್‌ಗಳನ್ನು ಕೇಂದ್ರ ಸಚಿವರು ಮಾಧ್ಯಮಗಳ...