ಬಾಗಲಕೋಟೆ | ಜಿಲ್ಲಾಧಿಕಾರಿ ಕಚೇರಿಯಲ್ಲಿ ನೀರು ಪೋಲು; ಸಿಬ್ಬಂದಿ ಮೇಲೆ ಸ್ಥಳೀಯರ ಬೇಸರ

Date:

ಬಾಗಲಕೋಟೆ ಜಿಲ್ಲೆ ಬರದಿಂದ ತತ್ತರಿಸಿಹೋಗಿದೆ. ಜಿಲ್ಲಾಡಳಿತ ಬರ ನಿರ್ವಹಣೆಗೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಆದರೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಯೇ ಪ್ರತೀ ದಿನ ನೀರು ಪೋಲಾಗುತ್ತಿದ್ದರೂ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಕಂಡೂಕಾಣದಂತಿದ್ದಾರೆ.

ಬಾಗಲಕೋಟೆ ಬರಪೀಡಿತ ಜಿಲ್ಲೆಯಾಗಿದ್ದು, ರೈತರು ಸೇರಿದಂತೆ ಎಲ್ಲ ವರ್ಗದ ಜನರು ಒಂದಿಲ್ಲೊಂದು ಸಮಸ್ಯೆ ಎದುರಿಸುತ್ತಿದ್ದಾರೆ. ನೀರಿನ ಮೂಲಗಳು ಬತ್ತುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಹನಿ ನೀರಿಗೂ ಪರಿದಾಡುವ ಸ್ಥಿತಿ ನಿರ್ಮಾಣವಾಗುವ ಭೀತಿ ಇದೆ. ಈ ಮಧ್ಯೆ ರೈತರು ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಟ್ಯಾಂಕರ್‌ಗಳ ಮೊರೆಹೋಗಿದ್ದು, ಬೆಳೆ ರಕ್ಷಣೆ ಮಾಡಿಕೊಳ್ಳುತ್ತಿದ್ದಾರೆ.

ಈಗಾಗಲೇ ಆದೆಷ್ಟೊ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು ಜನರು ನೀರಿಗಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಹೀಗಿರುವಾಗ, ಜಿಲ್ಲಾಧಿಕಾರಿಗಳ ಕಚೇರಿಯ ಅದೊಂದು ಸ್ಥಳದಲ್ಲಿ, ನಲ್ಲಿ ನೀರು 24ತಾಸು ಬೇಕಾಬಿಟ್ಟಿಯಾಗಿ ಹರಿಯುತ್ತಿರುವುದು ಕಂಡುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜಿಲ್ಲಾಧಿಕಾರಿ ಕಚೇರಿಯಲ್ಲಿರುವಂತ ಪುರುಷರ ಶೌಚಾಲಯದಲ್ಲಿ ಈ ಮಟ್ಟಿಗೆ ನೀರು ನಿರಂತರವಾಗಿ ಹರಿದು ಪೋಲಾಗುತ್ತದೆ. ಶೌಚಾಲಯದಲ್ಲಿ ಕೈ ತೊಳೆಯುವ ಸಿಂಕ್‌ ನಲ್ಲಿ ನೀರು 24 ಗಂಟೆಯೂ ಹರಿಯುತ್ತಿದೆ. ನಲ್ಲಿ ದುರಸ್ತಿಯ ಅಗತ್ಯವಿದ್ದರೂ ರಿಪೇರಿ ಮಾಡಿಸಿಲ್ಲ. ಬದಲಾಗಿ ನಲ್ಲಿ ಮೇಲೊಂದು ಕಲ್ಲಿಟ್ಟಿದ್ದಾರೆ.

ಎರಡು ತಿಂಗಳಿಂದ ಇದೇ ರೀತಿ ಸಮಸ್ಯೆ ಇದ್ದರೂ ಕಡಿಮೆ ಕರ್ಚಿನಲ್ಲಿ ರಿಪೇರಿ ಆಗುವ ಈ ಕೆಲಸವನ್ನು ಹಣ ಕೊಟ್ಟು ರಿಪೇರಿ ಮಾಡಿಸಲು ಜಿಲ್ಲಾಡಳಿತ ಭವನ ಸಿಬ್ಬಂದಿ ಮನಸ್ಸು ಮಾಡದೇ ಇರುವುದು ವಿಪರ್ಯಾಸ. ಜಿಲ್ಲಾಡಳಿತ ಸಿಬ್ಬಂದಿಗಳ ಈ ಬೇಜವಾಬ್ದಾರಿತನಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪಾರ್ಕ್‌ನಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಪಾಲಿಕೆ ಚಿಂತನೆ; ನಿವಾಸಿಗಳ ಪ್ರತಿಭಟನೆ

ದಾವಣಗೆರೆ ಮಹಾನಗರ ಪಾಲಿಕೆಯು 41ನೇ ವಾರ್ಡ್‌ನಲ್ಲಿರುವ ಉದ್ಯಾನವನದಲ್ಲಿ ಕಸ ವಿಲೇವಾರಿ ಘಟಕ...

ನೀಟ್ ಹಗರಣ ಖಂಡಿಸಿ ಎಐಡಿಎಸ್‌ಓ ಪ್ರತಿಭಟನೆ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಖಂಡಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿ-ಯುವಜನರು...

ವಿಜಯಪುರ | ಇಂಗಳಗಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ...

ಬೆಂಗಳೂರು | ಗಗನಕ್ಕೇರಿದ ದಿನಸಿ, ತರಕಾರಿ ಬೆಲೆ; ₹50ಕ್ಕೇರಿದ ಟೊಮೆಟೊ ದರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಸೇರಿದಂತೆ ನಿತ್ಯ...