ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

Date:

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿರುವುದನ್ನು ಬಾಗಲಕೋಟೆ ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷ ಮುತ್ತಣ್ಣ ಮೇತ್ರಿ ಸ್ವಾಗತಿಸಿದ್ದಾರೆ.

- Advertisement -

ಅರಣ್ಯ ಹಾಗೂ ಪೊಲೀಸ್ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.3ರಷ್ಟು ಮೀಸಲಾತಿ ಕಲ್ಪಿಸಿರುವ ಕ್ರಮವೂ ಸ್ವಾಗತಾರ್ಹವಾಗಿದ್ದು, ಸರ್ಕಾರದ ಈ ನಿರ್ಧಾರದಿಂದ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಯುವಕರಿಗೆ ಸರ್ಕಾರಿ ಉದ್ಯೋಗದ ಹೊಸ ಅವಕಾಶಗಳು ತೆರೆದುಕೊಂಡಂತಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ) ನೇಮಕಾತಿ (ತಿದ್ದುಪಡಿ) ನಿಯಮಗಳು–2026ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ ಬಳಿಕ ಇದೀಗ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅಥ್ಲೆಟಿಕ್ಸ್, ಆರ್ಚರಿ, ಬಾಸ್ಕೆಟ್‌ಬಾಲ್, ಬಾಕ್ಸಿಂಗ್, ಸೈಕ್ಲಿಂಗ್, ಫುಟ್‌ಬಾಲ್, ಹಾಕಿ, ಕಬಡ್ಡಿ, ಶೂಟಿಂಗ್, ವಾಲಿಬಾಲ್, ಕ್ರಿಕೆಟ್, ಬ್ಯಾಡ್ಮಿಂಟನ್ ಸೇರಿದಂತೆ 20ಕ್ಕೂ ಹೆಚ್ಚು ಕ್ರೀಡಾ ವಿಭಾಗಗಳನ್ನು ಮೀಸಲಾತಿ ವ್ಯಾಪ್ತಿಗೆ ಒಳಪಡಿಸಲಾಗಿದೆ.

ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಪದಕ ಅಥವಾ ಗಮನಾರ್ಹ ಸಾಧನೆ ಮಾಡಿರುವ ಅರ್ಹ ಕ್ರೀಡಾಪಟುಗಳಿಗೆ ಈ ಮೀಸಲಾತಿಯ ಪ್ರಯೋಜನ ದೊರೆಯಲಿದೆ. ಇದರಿಂದ ಕ್ರೀಡಾಪಟುಗಳಿಗೆ ತಮ್ಮ ಕ್ರೀಡಾ ಬದುಕಿನೊಂದಿಗೆ ಭವಿಷ್ಯದ ಉದ್ಯೋಗದ ಭದ್ರತೆಯೂ ದೊರೆಯುವಂತಾಗಿದೆ ಎಂದು ಮೇತ್ರಿ ಅಭಿಪ್ರಾಯಪಟ್ಟಿದ್ದಾರೆ.

ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಕಲ್ಪಿಸಬೇಕೆಂಬುದು ರಾಜ್ಯದ ವಿವಿಧ ಕ್ರೀಡಾ ಸಂಘ-ಸಂಸ್ಥೆಗಳ ಹಲವು ವರ್ಷಗಳ ಬೇಡಿಕೆಯಾಗಿತ್ತು. ಕಳೆದ ಐದು–ಆರು ವರ್ಷಗಳಿಂದ ವಿವಿಧ ಕ್ರೀಡಾ ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಈ ಬೇಡಿಕೆ ಈಡೇರಿಸಲು ನಿರಂತರವಾಗಿ ಪ್ರಯತ್ನ ನಡೆಸಿದ್ದರು.

ಇದೀಗ ಸರ್ಕಾರ ಮೀಸಲಾತಿ ಕುರಿತು ಅಧಿಕೃತ ಆದೇಶ ಹೊರಡಿಸಿರುವುದು ಕ್ರೀಡಾಪಟುಗಳ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದಂತಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ಪ್ರತಿಭೆ ಹೊಂದಿರುವ ಯುವಕರು ಇನ್ನಷ್ಟು ಉತ್ಸಾಹದಿಂದ ತರಬೇತಿ ಪಡೆದು ರಾಜ್ಯ ಹಾಗೂ ದೇಶವನ್ನು ಪ್ರತಿನಿಧಿಸಲು ಈ ಕ್ರಮ ಪ್ರೇರಣೆ ನೀಡಲಿದೆ ಎಂದು ಮುತ್ತಣ್ಣ ಮೇತ್ರಿ ಹೇಳಿದ್ದಾರೆ.

ಅರಣ್ಯ ಮತ್ತು ಪೊಲೀಸ್ ಇಲಾಖೆಗಳ ನೇಮಕಾತಿಯಲ್ಲಿ ಶೇ.3ರಷ್ಟು ಮೀಸಲಾತಿ ನೀಡಿರುವಂತೆಯೇ ಉಳಿದ ಎಲ್ಲ ಸರ್ಕಾರಿ ಇಲಾಖೆಗಳಲ್ಲಿಯೂ ಕ್ರೀಡಾಪಟುಗಳಿಗೆ ಶೇ.3ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ಸರ್ಕಾರ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಕ್ರೀಡಾ ಸಚಿವರಲ್ಲಿ ಮನವಿ ಮಾಡಿದ್ದಾರೆ.

ಕ್ರೀಡಾಪಟುಗಳ ಭವಿಷ್ಯಕ್ಕೆ ಉತ್ತೇಜನ ನೀಡುವ ಈ ಮಹತ್ವದ ನಿರ್ಧಾರಕ್ಕೆ ಸಹಕರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಅಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಗಳಿಗೂ ಮುತ್ತಣ್ಣ ಮೇತ್ರಿ ಅವರು ಧನ್ಯವಾದ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಶಾಲೆ ಮಾನವೀಯ ಮೌಲ್ಯ ಬೆಳೆಸುವ ಸ್ಫೂರ್ತಿಯ ಕೇಂದ್ರ

ಶಿಕ್ಷಣವೆಂಬುದು ಕೇವಲ ಶಾಲೆಯಲ್ಲಿ ಕಲಿಯುವ ಪಾಠಗಳಿಗೆ ಸೀಮಿತವಾಗದೆ, ಸಂಗೀತ, ಸಾಹಿತ್ಯ, ಅಭಿನಯ...

ಬಾಗೇಪಲ್ಲಿ | ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ:- ಚೇತನ್ ನಾಯ್ಡು ಫೌಂಡೇಷನ್ ಅಧ್ಯಕ್ಷ ಬಿ.ಆರ್.ನರಸಿಂಹ ನಾಯ್ಡು

ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ ಪ್ರಕೃತಿಯಿಂದ ಹಲವು ರೀತಿಯ ಪ್ರಯೋಜನಗಳನ್ನು...

ಕೊಡಗು | ₹25 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಜಿಲ್ಲಾ ವಿಮಾ ಅಧಿಕಾರಿ

ಮೃತ ಪೊಲೀಸ್ ಪೇದೆಯ ಕುಟುಂಬಕ್ಕೆ ಬರಬೇಕಿದ್ದ ಕರ್ನಾಟಕ ಸರ್ಕಾರಿ ನೌಕರರ ವಿಮಾ...

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...