ಬಾಗಲಕೋಟೆ | ನಿಲ್ದಾಣಗಳಿದ್ದರೂ ರಸ್ತೆಯಲ್ಲೇ ಬಸ್‌ ನಿಲುಗಡೆ; ಟ್ರಾಫಿಕ್ ಕಿರಿಕಿರಿಗೆ ಪ್ರಯಾಣಿಕರು ಹೈರಾಣ

Date:

ಬಾಗಲಕೋಟೆ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಬಸ್‌ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಪ್ರಯಾಣಿಕರು ಬಿಸಿಲು, ಮಳೆಯಿಂದ ರಕ್ಷಣೆ ಪಡೆಯಲು ಆಸನ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಬಸ್‌ಗಳು ನಿಲುಗಡೆಗೊಳ್ಳಲು ಪ್ರತ್ಯೇಕ ಜಾಗವನ್ನೂ ಗುರುತಿಸಲಾಗಿದೆ. ಆದರೆ, ಬಸ್‌ಗಳು ಮಾತ್ರ ನಿಲ್ದಾಣಕ್ಕೆ ಬರುವುದಿಲ್ಲ! ರಸ್ತೆ ಬದಿಯಲ್ಲೇ ನಿಂತು ಪ್ರಯಾಣಿಕರನ್ನು ಇಳಿಸಿ, ಹತ್ತಿಸಿಕೊಂಡು ಮುಂದೆ ಸಾಗುತ್ತವೆ. ಪರಿಣಾಮ, ಟ್ರಾಫಿಕ್‌ ಜಾಮ್‌, ಪ್ರಯಾಣಿಕರಿಗೆ ಗೊಂದಲ, ಅಪಘಾತದ ಆತಂಕ ಇವೆಲ್ಲವೂ ಬಾಗಲಕೋಟೆ ನಗರದ ನಿತ್ಯದ ಸಮಸ್ಯೆಗಳಾಗಿವೆ.

ಜಿಲ್ಲಾ ಕೇಂದ್ರದಲ್ಲಿ ಪ್ರತಿದಿನ ನೂರಾರು ಬಸ್‌ಗಳು ಸಂಚರಿಸುತ್ತಿದ್ದರೂ, ಅವುಗಳನ್ನು ನಿಗದಿತ ನಿಲ್ದಾಣಗಳಲ್ಲಿ ನಿಲ್ಲಿಸುವ ವ್ಯವಸ್ಥೆ ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ವಾಕರಸಾ) ಬಸ್‌ಗಳ ಅನಿಯಮಿತ ನಿಲುಗಡೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಿದ ನಿಲ್ದಾಣಗಳೇ ಬಳಕೆಯಾಗದೆ ಉಳಿದಿರುವುದು ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯ ಬಗ್ಗೆ ಪ್ರಶ್ನೆ ಮೂಡಿಸಿದೆ.

- Advertisement -

ನಿಲ್ದಾಣವೊಂದು, ಸಮಸ್ಯೆಗಳು ಹಲವು!

ನಗರದ ವೇಗವಾಗಿ ಬೆಳೆಯುತ್ತಿರುವ ಪ್ರದೇಶಗಳಲ್ಲಿ ಒಂದಾದ ವಿದ್ಯಾಗಿರಿಯಲ್ಲಿ ಬಸ್‌ಗಳ ನಿಲುಗಡೆ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಎಂಜಿನಿಯರಿಂಗ್ ಕಾಲೇಜು ವೃತ್ತದ ಬಳಿ ಬಿಟಿಡಿಎ ವತಿಯಿಂದ ಸುಸಜ್ಜಿತ ಬಸ್‌ ನಿಲ್ದಾಣ ನಿರ್ಮಿಸಲಾಗಿದೆ. ರಸ್ತೆಯ ಎರಡೂ ಬದಿಗಳಲ್ಲಿ ನಿಲ್ದಾಣಗಳಿದ್ದು, ಪ್ರಯಾಣಿಕರಿಗೆ ಕುಳಿತುಕೊಳ್ಳುವ ವ್ಯವಸ್ಥೆ, ಬಸ್‌ಗಳು ನಿಲ್ಲಲು ಅಗತ್ಯವಾದ ಸ್ಥಳಾವಕಾಶವೂ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು, ವಿದ್ಯಾರ್ಥಿಗಳು ಹಾಗೂ ವೃತ್ತಿಪರ ಪತ್ರಕರ್ತರ ಮೇಲೆ ಪೊಲೀಸರು ಕನಿಕರವಿಲ್ಲದೆ ಮೃಗಗಳಂತೆ ಎರಗಿಬೀಳುತ್ತಿದ್ದಾರೆ. ಎಸ್‌ಐಆರ್‌ ವಿರುದ್ಧದ ಹೋರಾಟದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು...

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ...

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸುವುದಷ್ಟೇ ಅಲ್ಲ. ಶಿಕ್ಷಣದ ನಿಜವಾದ ಉದ್ದೇಶ ಮಗುವಿನ ಜ್ಞಾನ, ಚಿಂತನಾ ಶಕ್ತಿ, ಸೃಜನಶೀಲತೆ, ಆತ್ಮವಿಶ್ವಾಸ, ಸಾಮಾಜಿಕ ಪ್ರಜ್ಞೆ...

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ಒಂದು ನಿಲ್ದಾಣದ ಸುತ್ತಲೂ ಬಸ್‌ಗಳ ನಿಲುಗಡೆಗೆ ಸಾಕಷ್ಟು ಜಾಗವಿದೆ. ಮತ್ತೊಂದು ನಿಲ್ದಾಣದ ಎದುರು ಬ್ಯಾರಿಕೇಡ್‌ ಅಳವಡಿಸಿ ಬಸ್‌ ನಿಲುಗಡೆ ನಿಲ್ದಾಣ ಎಂದು ಗುರುತಿಸಲಾಗಿದೆ. ಹೀಗಿದ್ದರೂ, ನಿಲ್ದಾಣಗಳನ್ನು ಸಮರ್ಪಕವಾಗಿ ಬಳಸುವ ಬದಲು ರಸ್ತೆ ಮಧ್ಯೆ ಅಥವಾ ನಿಲ್ದಾಣಕ್ಕಿಂತ ಮೊದಲೇ ಬಸ್‌ಗಳನ್ನು ನಿಲ್ಲಿಸಲಾಗುತ್ತಿದೆ ಎಂಬುದು ಪ್ರಯಾಣಿಕರ ಅಳಲು.

ಹುಬ್ಬಳ್ಳಿ, ಬೆಳಗಾವಿ ಹಾಗೂ ವಿಜಯಪುರ ಕಡೆಯಿಂದ ಬರುವ ಕೆಲವು ಬಸ್‌ಗಳು ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸದೆ ಮುಂದುವರಿಯುತ್ತಿವೆ. ನವನಗರ ಹಾಗೂ ಹಳೆಯ ಬಾಗಲಕೋಟೆ ಕಡೆಗೆ ತೆರಳುವ ಬಸ್‌ಗಳು ವಿದ್ಯಾಗಿರಿ ವೃತ್ತದ ಮುಂಚೆಯೇ ನಿಲ್ಲುವುದರಿಂದ ಪ್ರಯಾಣಿಕರು ಇಳಿಯಲು ಮತ್ತು ವಾಹನಗಳು ಸಂಚರಿಸಲು ತೊಂದರೆಯಾಗುತ್ತಿದೆ.

300 ಮೀಟರ್‌ ಮೊದಲೇ ಬಸ್‌ ನಿಲುಗಡೆ!

ನಿಗದಿತ ನಿಲ್ದಾಣಕ್ಕೆ ತಲುಪುವ ಮುನ್ನವೇ ಸುಮಾರು 300 ಮೀಟರ್‌ ದೂರದಲ್ಲಿ ಬಸ್‌ಗಳನ್ನು ನಿಲ್ಲಿಸಲಾಗುತ್ತಿದೆ. ಇದರಿಂದ 19ನೇ ಕ್ರಾಸ್‌ ರಸ್ತೆಯಲ್ಲಿ ವಾಹನಗಳ ಸಾಲು ಉದ್ದವಾಗುತ್ತಿದೆ. ಒಂದೇ ಸಮಯದಲ್ಲಿ ಮೂರು-ನಾಲ್ಕು ಬಸ್‌ಗಳು ಸಾಲಾಗಿ ನಿಂತರೆ, ರಸ್ತೆಯಲ್ಲಿ ಸಂಚರಿಸುವ ಇತರ ವಾಹನಗಳಿಗೆ ದಾರಿ ಸಿಗದ ಪರಿಸ್ಥಿತಿ ನಿರ್ಮಾಣವಾಗುತ್ತದೆ.ಇನ್ನೊಂದೆಡೆ, ಜಿಲ್ಲಾಸ್ಪತ್ರೆ ಹಾಗೂ ಬಸ್‌ ನಿಲ್ದಾಣಕ್ಕೆ ತೆರಳಬೇಕಾದ ಪ್ರಯಾಣಿಕರಿಗೆ ಅನಾನುಕೂಲವಾಗುತ್ತಿದೆ. ಬಸ್‌ ನಿಲ್ದಾಣದಲ್ಲಿ ಇಳಿಯಬೇಕಾದವರು ಮುಂಚೆಯೇ ಇಳಿಯಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಬಸ್‌ ಎಲ್ಲಿ ನಿಲ್ಲುತ್ತದೆ ಎಂಬ ಸ್ಪಷ್ಟತೆ ಇಲ್ಲದೆ ಪ್ರಯಾಣಿಕರು ಗೊಂದಲಕ್ಕೀಡಾಗುತ್ತಿದ್ದಾರೆ.

19ನೇ ಕ್ರಾಸ್‌ ರಸ್ತೆಯಲ್ಲಿ ಬಸ್‌ಗಳ ಅನಿಯಮಿತ ನಿಲುಗಡೆಯಿಂದ ಉಂಟಾಗುವ ಸಂಚಾರದ ಒತ್ತಡಕ್ಕೆ ರಸ್ತೆ ಗುಂಡಿಗಳ ಸಮಸ್ಯೆಯೂ ಸೇರಿದೆ. ವಾಹನ ಸವಾರರು ಗುಂಡಿಗಳನ್ನು ತಪ್ಪಿಸಿಕೊಂಡು ಸಾಗಬೇಕಾದ ಅನಿವಾರ್ಯತೆ ಎದುರಾಗುತ್ತಿದೆ. ಈ ವೇಳೆ ಬಸ್‌ಗಳು ರಸ್ತೆ ಬದಿಯಲ್ಲಿ ನಿಂತಿದ್ದರೆ ಸಂಚಾರ ಮತ್ತಷ್ಟು ಕಷ್ಟವಾಗುತ್ತದೆ.

ಬಸ್‌ಗಳಿಂದ ಇಳಿಯುವ ಪ್ರಯಾಣಿಕರು ರಸ್ತೆ ಮಧ್ಯೆಯೇ ಸಾಗಬೇಕಾದ ಪರಿಸ್ಥಿತಿ ಎದುರಾಗುತ್ತಿರುವುದರಿಂದ ಅಪಘಾತದ ಆತಂಕವೂ ಹೆಚ್ಚಿದೆ. ಬಸ್‌ ಚಾಲಕರು ಹಾಗೂ ಇತರ ವಾಹನ ಸವಾರರ ನಡುವೆ ನಿಲುಗಡೆ ವಿಚಾರವಾಗಿ ವಾಗ್ವಾದಗಳು ನಡೆದಿರುವ ಘಟನೆಗಳೂ ವರದಿಯಾಗಿವೆ. ಪ್ರಯಾಣಿಕರ ಸುರಕ್ಷತೆ ಹಾಗೂ ವಾಹನಗಳ ಸುಗಮ ಸಂಚಾರ ಎರಡಕ್ಕೂ ಈ ಅವ್ಯವಸ್ಥೆ ಧಕ್ಕೆಯುಂಟುಮಾಡುತ್ತಿದೆ.

ಜಿಲ್ಲಾಸ್ಪತ್ರೆ ವೃತ್ತದಲ್ಲೂ ಇದೇ ಕಥೆ!

ಸಮಸ್ಯೆ ವಿದ್ಯಾಗಿರಿಗೆ ಮಾತ್ರ ಸೀಮಿತವಾಗಿಲ್ಲ. ಜಿಲ್ಲಾಸ್ಪತ್ರೆ ವೃತ್ತದಲ್ಲಿಯೂ ಇದೇ ರೀತಿಯ ಪರಿಸ್ಥಿತಿ ಕಂಡುಬರುತ್ತಿದೆ. ಆಸ್ಪತ್ರೆ ರಸ್ತೆಯ ಎದುರು ಬಸ್‌ ನಿಲ್ದಾಣವಿದ್ದರೂ, ಕೆಲವು ಬಸ್‌ಗಳು ನಿಲ್ದಾಣಕ್ಕಿಂತ ಮುಂಚೆಯೇ ನಿಲ್ಲುತ್ತವೆ. ಈ ಪ್ರದೇಶದಲ್ಲಿ ವಾಹನ ಸಂಚಾರದ ಒತ್ತಡ ಹೆಚ್ಚಿರುವುದರಿಂದ ಬಸ್‌ಗಳ ಅನಿಯಮಿತ ನಿಲುಗಡೆ ಸಂಚಾರಕ್ಕೆ ಅಡ್ಡಿಯಾಗುತ್ತಿದೆ.

ಆಸ್ಪತ್ರೆಗೆ ತೆರಳುವ ರೋಗಿಗಳು, ಅವರ ಸಂಬಂಧಿಕರು, ಸಾರ್ವಜನಿಕರು ಹಾಗೂ ಇತರ ವಾಹನ ಸವಾರರು ಈ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಜನದಟ್ಟಣೆ ಹೆಚ್ಚಿರುವ ಇಂತಹ ಪ್ರದೇಶಗಳಲ್ಲಿ ಬಸ್‌ಗಳ ನಿಲುಗಡೆಗೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸುವ ಅಗತ್ಯವಿದೆ.

ಕಂಟ್ರೋಲರ್ ನೇಮಕವೇ ಶಾಶ್ವತ ಪರಿಹಾರವಲ್ಲ!

ಬಸ್‌ಗಳು ನಿಗದಿತ ನಿಲ್ದಾಣಗಳಲ್ಲಿ ನಿಲ್ಲದಿರುವ ದೂರುಗಳು ಕೇಳಿಬಂದಾಗ ವಾಕರಸಾ ಸಂಸ್ಥೆಯು ಕಂಟ್ರೋಲರ್‌ಗಳನ್ನು ನೇಮಿಸಿ ವ್ಯವಸ್ಥೆ ಸರಿಪಡಿಸುವ ಪ್ರಯತ್ನ ಮಾಡುತ್ತದೆ. ಆದರೆ, ಕೆಲವೇ ದಿನಗಳಲ್ಲಿ ಮತ್ತೆ ಹಳೆಯ ಸಮಸ್ಯೆ ಮರುಕಳಿಸುತ್ತಿದೆ. ಅಂದರೆ, ತಾತ್ಕಾಲಿಕ ಮೇಲ್ವಿಚಾರಣೆಯಿಂದ ಸಮಸ್ಯೆಗೆ ಪೂರ್ಣವಿರಾಮ ಹಾಕಲು ಸಾಧ್ಯವಾಗುತ್ತಿಲ್ಲ.

ನಿಲ್ದಾಣಗಳಿರುವಾಗ ರಸ್ತೆ ಮಧ್ಯೆ ಬಸ್‌ ನಿಲ್ಲಿಸುವ ಅಗತ್ಯವೇನು? ಪ್ರಯಾಣಿಕರನ್ನು ಹತ್ತಿಸಿಕೊಳ್ಳದಿದ್ದರೂ ನಿಗದಿತ ನಿಲ್ದಾಣದಲ್ಲಿ ಬಸ್‌ ನಿಲ್ಲಿಸುವ ನಿಯಮ ಪಾಲನೆಯಾಗಬಾರದೇ? ಬಸ್‌ಗಳ ಸಂಚಾರ ಮಾರ್ಗ, ನಿಲುಗಡೆ ಸ್ಥಳ ಹಾಗೂ ಪ್ರಯಾಣಿಕರ ಸುರಕ್ಷತೆ ಕುರಿತು ಸ್ಪಷ್ಟ ವ್ಯವಸ್ಥೆ ರೂಪಿಸಬೇಕಲ್ಲವೇ? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ಪರಿಶೀಲಿಸಿ ಕ್ರಮದ ಭರವಸೆ:

ನಿಲ್ದಾಣಗಳಲ್ಲಿ ಬಸ್‌ಗಳು ನಿಲ್ಲದಿರುವ ಸಮಸ್ಯೆಯ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬಾಗಲಕೋಟೆ ಸಂಚಾರ ಅಧಿಕಾರಿ ಹಾಗೂ ವಾಕರಸಾ ಸಂಸ್ಥೆಯ ಕೆ.ಕೆ. ಲಮಾಣಿ ತಿಳಿಸಿದ್ದಾರೆ.

ಆದರೆ, ಇಂತಹ ಭರವಸೆಗಳು ಕೇವಲ ತಾತ್ಕಾಲಿಕ ಕ್ರಮಗಳಿಗೆ ಸೀಮಿತವಾಗದೆ, ಶಾಶ್ವತ ಪರಿಹಾರಕ್ಕೆ ದಾರಿ ಮಾಡಿಕೊಡಬೇಕಿದೆ. ನಿಗದಿತ ನಿಲ್ದಾಣಗಳಲ್ಲಿ ಬಸ್‌ಗಳ ನಿಲುಗಡೆ ಕಡ್ಡಾಯಗೊಳಿಸುವುದು, ನಿಯಮ ಉಲ್ಲಂಘಿಸುವ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುವುದು ಹಾಗೂ ಪ್ರಮುಖ ವೃತ್ತಗಳಲ್ಲಿ ನಿರಂತರ ಮೇಲ್ವಿಚಾರಣೆ ನಡೆಸುವುದು ಅಗತ್ಯವಾಗಿದೆ.

ಜನರ ಅನುಕೂಲಕ್ಕಾಗಿ ನಿರ್ಮಿಸಿದ ಬಸ್‌ ನಿಲ್ದಾಣಗಳು ಬಳಕೆಯಾಗದೆ, ರಸ್ತೆಯಲ್ಲೇ ಬಸ್‌ಗಳ ನಿಲುಗಡೆಯಿಂದ ಜನರು ಪರದಾಡಬೇಕಾದರೆ ಮೂಲಸೌಕರ್ಯ ನಿರ್ಮಾಣದ ಉದ್ದೇಶವಾದರೂ ಏನು? ಬಾಗಲಕೋಟೆಯ ಸಂಚಾರ ವ್ಯವಸ್ಥೆಗೆ ಶಿಸ್ತು ತರುವ ಹೊಣೆಗಾರಿಕೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಗಂಭೀರವಾಗಿ ನಿಭಾಯಿಸಬೇಕಿದೆ.

WhatsApp Image 2025 02 05 at 18.09.20 1
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪರಿಶಿಷ್ಟ ಜಾತಿ, ಪಂಗಡದ ಅನುದಾನ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಸೂಚನೆ

ಉತ್ತರ ಕನ್ನಡ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ವಿವಿಧ...

ಬೀಳಗಿ | ಅ.18ರಂದು ‘ಬಸವ-ಭೀಮ ಸಂಗಮ’ ಸಮಾವೇಶ

ಜಾತ್ಯತೀತ ಹಾಗೂ ಬಹುತ್ವದ ಕರ್ನಾಟಕದ ಸಂಕಲ್ಪದೊಂದಿಗೆ ಸರ್ವಜಾತಿ-ಸರ್ವಧರ್ಮ ಸಹೋದರತ್ವ ಸಾರುವ ‘ಬಸವ-ಭೀಮ...

ಗೋಕರ್ಣ | ಹಾಪ್‌ಮೂನ್ ಬೀಚ್‌ನಲ್ಲಿ ಎರಡು ಬೋಟ್‌ಗಳಿಗೆ ಹಾನಿ: ₹1.80 ಲಕ್ಷ ನಷ್ಟ

ಗೋಕರ್ಣ: ಹಾಪ್‌ಮೂನ್ ಬೀಚ್‌ನ ದಡದಲ್ಲಿ ನಿಲ್ಲಿಸಿದ್ದ ಜಲಸಾಹಸ ಕ್ರೀಡೆಗಳಿಗೆ ಬಳಸುವ ಎರಡು...