ದನಕರುಗಳಿಗೆ ಮೇವು ಇಲ್ಲದೆ ಸಂಕಷ್ಟ ಎದುರಾಗಿ ರೈತ ಕಾರ್ಮಿಕರ ಬದುಕು ದುಸ್ತರವಾಗಿದೆ. ಕೂಡಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಂತ್ರಸ್ರರಿಗೆ ಪರಿಹಾರ ಒದಗಿಸಬೇಕು ಎಂದು ರೈತರು ಒತ್ತಾಯಿಸಿದರು.
ಮುಧೋಳ ಪ್ರವಾಹ ಸಂತ್ರಸ್ತರ ಪರಿಹಾರಕ್ಕೆ ಆಗ್ರಹಿಸಿ ಗುರುವಾರ ಸಂಸದ ಪಿ.ಸಿ.ಗದ್ದಿಗೌಡರ ಅವರಿಗೆ ರೈತರು ಮತ್ತು ಸಂತ್ರಸ್ಥರು ಮನವಿ ಪತ್ರ ಸಲ್ಲಿಸಿದರು.
2024ರಲ್ಲಿ ಉಂಟಾದ ಪ್ರವಾಹದಿಂದಾಗಿ ಉತ್ತರ ಕರ್ನಾಟಕ ಭಾಗದ ರೈತರ ಬೆಳೆಗಳು ಸಂಪೂರ್ಣ ಹಾಳಾಗಿದೆ. ಕೃಷಿ ಪಂಪ್ ಸೆಟ್‌ಗಳು ನಾಶವಾಗಿವೆ. ದನಕರುಗಳಿಗೆ ಮೇವು ಇಲ್ಲದೆ ಸಂಕಷ್ಟ ಎದುರಾಗಿದೆ. ಆದರೆ ಪ್ರವಾಹದಿಂದ ಬೆಳೆ ಕಳೆದುಕೊಂಡ ರೈತರಿಗೆ ಇದುವರೆಗೆ ಯಾವುದೇ ಪರಿಹಾರ ನೀಡಲಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಶೀಘ್ರವೇ ಜಂಟಿಯಾಗಿ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕುʼ ಎಂದು ಆಗ್ರಹಿಸಿದರು.
ರೈತ ಮುಖಂಡ ಸುಭಾಷ ಮಾತನಾಡಿ, ʼಮುಧೋಳ ತಾಲೂಕಿನ 37 ಹಳ್ಳಿಯ ರೈತರ ಬೆಳೆ ಘಟಪ್ರಭಾ ನದಿ ಪ್ರವಾಹದಿಂದ ಸಂಪೂರ್ಣ ನಾಶವಾಗಿದೆ. 2019 ರಿಂದ ಪದೇ ಪದೇ ಪ್ರವಾಹಕ್ಕೆ ತುತ್ತಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕೊಡಬೇಕುʼ ಎಂದು ಒತ್ತಾಯಿಸಿದರು.
ʼಪ್ರವಾಹದಿಂದ ಬೆಳೆ ಕಳೆದುಕೊಂಡು ಆರ್ಥಿಕ ಸಂಕಷ್ಟ ಅನುಭವಿಸುತ್ತಿರುವ ರೈತರಿಗೆ ಎಸ್‌ಡಿಆರ್‌ಎಫ್ ಹಾಗೂ ಎನ್‌ಡಿಆರ್‌ಎಫ್ ಪರಿಹಾರ ಅಲ್ಲದೇ ಅದಕ್ಕಿಂತ ಹೆಚ್ಚಿನ ಪರಿಹಾರ ನೀಡಬೇಕುʼ ಎಂದು ಉತ್ತರ ಕರ್ನಾಟಕ ಮುಳುಗಡೆ ಮತ್ತು ಪ್ರವಾಹ ಸಂತ್ರಸ್ತರ ರಕ್ಷಣಾ ಸಮಿತಿ ಅಧ್ಯಕ್ಷ ನಾಗೇಶ ಗೋಲಶೆಟ್ಟಿʼ ಒತ್ತಾಯಿಸಿದರು.
ಇದನ್ನು ಓದಿದ್ದೀರಾ? ಅಂಗನವಾಡಿ ಅವ್ಯವಸ್ಥೆ | ಸಿಂಧಗಿ ; ಬಾಡಿಗೆ ಕಟ್ಟಡದಿಂದ ಮುಕ್ತಿ ಪಡೆಯಬಹುದೇ ತಾಲೂಕಿನ 66 ಅಂಗನವಾಡಿ ಕೇಂದ್ರಗಳು?
ಈ ಸಂದರ್ಭದಲ್ಲಿ ಪ್ರಮುಖರಾದ ವೈ.ಜಿ. ಪಾಟೀಲ್, ಯಲ್ಲಪ್ಪ ಮಸಗುಪ್ಪಿ, ಗಂಗಪ್ಪ ತಳವಾರ್, ಡಿ.ಎಸ್.ಪಾಟೀಲ್, ತಮ್ಮಣ್ಣ ಕೊರಡ್ಡಿ, ಅಹ್ಮದ್ ಮುಲ್ಲಾ, ಕರಿಯಪ್ಪ ಕಾಂಬಳೆ, ಕಾಮಣ್ಣ ಕುರುಬರ, ರಾಜೇಶ್ವರಿ ಮಠಪತಿ, ಕೃಷ್ಣ ಜೋಶಿ ಇದ್ದರು.