ದುರ್ಗಾ ದೌಡ್: ಸಂಘಪರಿವಾರದ ಕಾರ್ಯಕರ್ತನಂತೆ ಕೇಸರಿ ಧ್ವಜ ಹಿಡಿದು ಸಾಗಿದ ಮುಧೋಳ ಪಿಎಸ್‌ಐ!

Date:

ಪೊಲೀಸ್ ಇಲಾಖೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಸಂಘಪರಿವಾರದ ಕಾರ್ಯಕರ್ತರು ತುಂಬಿಕೊಳ್ಳುತ್ತಿದ್ದಾರೆ ಎಂಬ ಆರೋಪಕ್ಕೆ ಪುಷ್ಠಿ ನೀಡುವಂತಹ ಬೆಳವಣಿಗೆಗಳು ಆಗ್ಗಾಗ್ಗೆ ರಾಜ್ಯದಲ್ಲಿ ನಡೆಯುತ್ತಿದೆ.

- Advertisement -

ಇತ್ತೀಚೆಗಷ್ಟೇ ಗಣೇಶೋತ್ಸವದ ಮೆರವಣಿಗೆಯ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ ನೇಲೋಗಿ ಪೊಲೀಸ್ ಠಾಣೆಯ ಪಿಎಸ್‌ಐ ಚಿದಾನಂದ ಸವದಿ ಎಂಬುವವರು ಡಿಜೆ ಹಾಡಿಗೆ ಸಮವಸ್ತ್ರದಲ್ಲೇ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದೀಗ ಮತ್ತೊಂದು ಹೊಸ ಬೆಳವಣಿಗೆ ನಡೆದಿದ್ದು, ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಸಂಘಪರಿವಾರ ಹಮ್ಮಿಕೊಂಡಿದ್ದ ‘ದುರ್ಗಾ ಮಾತಾ ದೌಡ್’ ಎಂಬ ಮೆರವಣಿಗೆಯಲ್ಲಿ ಪಿಎಸ್‌ಐ ಒಬ್ಬರು, ಸಂಘಪರಿವಾರದ ಕಾರ್ಯಕರ್ತನಂತೆ ಕೇಸರಿ ಧ್ವಜ ಹಿಡಿದು ಸಾಗಿರುವ ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗಿದೆ.

ಪಿಎಸ್‌ಐ ಮುಧೋಳ

ಬಾಗಲಕೋಟೆ ಜಿಲ್ಲೆಯ ಮುಧೋಳ ಪೊಲೀಸ್ ಠಾಣೆಯ ಪಿಎಸ್ಐ ಆಗಿ ಕರ್ತವ್ಯದಲ್ಲಿರುವ ಅಜಿತ್ ಹೊಸಮನಿ ಎಂಬುವವರು ದುರ್ಗಾ ಮಾತಾ ದೌಡ್ ಎಂಬ ಮೆರವಣಿಗೆಯಲ್ಲಿ ಸಮವಸ್ತ್ರದಲ್ಲಿರುವಾಗಲೇ ಕೇಸರಿ ಧ್ವಜ ಹಿಡಿದು ಸಾಗಿರುವ ಫೋಟೋ ಸದ್ಯ ಹರಿದಾಡಿದ್ದು, ಇವರ ವಿರುದ್ಧ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಗೃಹ ಇಲಾಖೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಗಣೇಶ ವಿಸರ್ಜನೆ ಮೆರವಣಿಗೆ: ಸಮವಸ್ತ್ರದಲ್ಲೇ ಡಿಜೆ ಹಾಡಿಗೆ ಡ್ಯಾನ್ಸ್ ಮಾಡಿದ ಪಿಎಸ್‌ಐ!

ಮುಧೋಳದಲ್ಲಿ ಸಂಘಪರಿವಾರದ ಕಾರ್ಯಕರ್ತರೇ ಕಟ್ಟಿಕೊಂಡಿರುವ ಶಿವ ಪ್ರತಿಷ್ಠಾಣ ಹಿಂದುಸ್ತಾನ ಎಂಬ ಸಂಘಟನೆಯ ನೇತೃತ್ವದಲ್ಲಿ ಗೋವಿಂದಪುರ ಗಲ್ಲಿಯ ದುರ್ಗಾದೇವಿ ದೇವಸ್ಥಾನದಿಂದ ಅಕ್ಟೋಬರ್ 10ರಂದು ‘ದೇಶ, ಧರ್ಮ ರಕ್ಷಣೆಗಾಗಿ, ಅಖಂಡ ಹಿಂದೂ ರಾಷ್ಟ್ರಕ್ಕಾಗಿ ಸಂಕಲ್ಪ ಮಾಡೋಣ’ ಎಂಬ ಧ್ಯೇಯವಾಕ್ಯದಡಿ ತಲವಾರು, ತ್ರಿಶೂಲ ಸಹಿತ ಇತರೆ ಆಯುಧಗಳನ್ನೆಲ್ಲ ಪ್ರದರ್ಶಿಸಿಕೊಂಡು ‘ದುರ್ಗಾ ಮಾತಾ ದೌಡ್’ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.

ಮುಧೋಳ 2
‘ದುರ್ಗಾಮಾತಾ ದೌಡ್’ ಮೆರವಣಿಗೆಯ ಪೋಸ್ಟರ್

ಈ ವೇಳೆ ಕರ್ತವ್ಯ ನಿರತರಾಗಿದ್ದ ಮುಧೋಳ ಪೊಲೀಸ್ ಠಾಣೆಯ ಪಿಎಸ್‌ಐ ಅಜಿತ್ ಹೊಸಮನಿ ಎಂಬುವವರು ಮೆರವಣಿಗೆಯಲ್ಲಿ ಪೊಲೀಸ್ ಶೂ, ಟೋಪಿ ಕಳಚಿ, ತಲೆಯಲ್ಲಿ ಬಿಳಿ ಟೋಪಿ ಧರಿಸಿ ಭಾಗವಹಿಸಿದ್ದಲ್ಲದೇ, ಕೇಸರಿ ಧ್ವಜ ಹಿಡಿದು ಮೆರವಣಿಗೆಯಲ್ಲಿ ಸಾಗಿದ್ದಾರೆ. ಆ ಮೂಲಕ ಕರ್ತವ್ಯ ಲೋಪವೆಸಗಿದ್ದಾರೆ.

ದೌಡು 1
ಪುಟ್ಟ ಬಾಲಕಿಯರ ಕೈಯ್ಯಲ್ಲಿ ‘ಲವ್ ಜಿಹಾದ್’ ಬಗ್ಗೆ ಪ್ಲೆಕಾರ್ಡ್‌

ಸದ್ಯ ಈ ಫೋಟೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, ಮುಧೋಳ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಅಜಿತ್ ಹೊಸಮನಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಸೇರಿದಂತೆ ಹಲವು ಮಂದಿ ಆಗ್ರಹಿಸಿದ್ದಾರೆ. ಈ ದುರ್ಗಾ ದೌಡ್ ಮೆರವಣಿಗೆಯಲ್ಲಿ ಪುಟ್ಟ ಬಾಲಕಿಯರ ಕೈಯ್ಯಲ್ಲಿ ‘ಲವ್ ಜಿಹಾದ್’ ಬಗ್ಗೆ ಪ್ಲೆಕಾರ್ಡ್‌ ಕೂಡ ನೀಡಿ, ಪ್ರದರ್ಶಿಸಲಾಗಿತ್ತು.

ಈ ಬಗ್ಗೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಅವರನ್ನು ಈ ದಿನ.ಕಾಮ್ ಕಚೇರಿಯಿಂದ ಸಂಪರ್ಕಿಸಲಾಯಿತಾದರೂ, ಕರೆ ಸ್ವೀಕರಿಸಿಲ್ಲ.

ಈ ಬಗ್ಗೆ ಟ್ವೀಟ್ ಮಾಡಿರುವ ಎಸ್‌ಡಿಪಿಐ ರಾಜ್ಯ ಮುಖಂಡ ರಿಯಾಝ್ ಕಡಂಬು,”ಕರ್ನಾಟಕದ ಡಿಜಿಪಿಯವರಿಗೆ ಇದೆಲ್ಲ ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವೇ? ಕರ್ತವ್ಯ ನಿರತನಾಗಬೇಕಾದ ವ್ಯಕ್ತಿ ಧರ್ಮದ್ವೇಷ ಹರಡುವ ದುರ್ಗಾ ದೌಡು ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್‌ ನಾಯಕರಂತೆ ಪೊಲೀಸ್ ಇಲಾಖೆಯ ಸಮವಸ್ತ್ರ ಧರಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ಪಿಎಸ್ಐ ಭಾಗವಹಿಸಿ ಕರ್ತವ್ಯ ಲೋಪವೆಸಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಸೂಕ್ತ ಕ್ರಮಕ್ಕೆ ಆದೇಶಿಸಿ” ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...