ಬಾಗಲಕೋಟೆ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ: ಸೆ.5ರಿಂದ ಪ್ರಜಾ ಸೇವಾ ಆಂದೋಲನ

Date:

ಜಿಲ್ಲೆಯ ಜನರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸೆ.5ರಿಂದ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾ ಸೇವಾ ಆಂದೋಲನ ಆರಂಭಿಸಲಾಗುತ್ತಿದೆ.

- Advertisement -

ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಮಾರ್ಗದರ್ಶನದಲ್ಲಿ ನಡೆಯಲಿರುವ ಆಂದೋಲನದಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತರಬಹುದಾಗಿದೆ. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿಯೇ ಅಹವಾಲುಗಳನ್ನು ಸ್ವೀಕರಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ತಾಲೂಕು ಮಟ್ಟದಲ್ಲಿ ನಾಲ್ಕು ಸಭೆ: ಸೆ.5ರಂದು ಬೆಳಗ್ಗೆ 10.30ಕ್ಕೆ ಜಿಪಂ ಸಭಾಭವನದಲ್ಲಿ ನಡೆಯುವ ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಉಮೇಶ ಮೇಟಿ ನೇತೃತ್ವ ವಹಿಸಲಿದ್ದಾರೆ. ಸೆ.12ರಂದು ಮುಧೋಳದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯುವ ಸಭೆಗೆ ಶಾಸಕ ಆರ್.ಬಿ.ತಿಮ್ಮಾಪೂರ ಅಧ್ಯಕ್ಷತೆ ವಹಿಸಲಿದ್ದಾರೆ. ಸೆ.19ರಂದು ಇಳಕಲ್‌ನಲ್ಲಿ ನಡೆಯುವ ಸಭೆಗೆ ಸಚಿವ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆ ವಹಿಸಲಿದ್ದಾರೆ. ಸೆ.26ರಂದು ಬೀಳಗಿ ತಾಲೂಕು ಆಡಳಿತ ಸೌಧದ ಆವರಣದಲ್ಲಿ ನಡೆಯುವ ಸಭೆಗೆ ಶಾಸಕ ಜೆ.ಟಿ.ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.

ಹೋಬಳಿ ಮಟ್ಟಕ್ಕೂ ವಿಸ್ತರಣೆ ಹೋಬಳಿ ಮಟ್ಟದಲ್ಲಿಯೂ ಸಾರ್ವಜನಿಕರ ಅಹವಾಲು ಸ್ವೀಕರಿಸಲು ಸಭೆಗಳನ್ನು ಆಯೋಜಿಸಲಾಗಿದೆ. ಸೆ.5ರಂದು ಲೋಕಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜಮಖಂಡಿಯ ಗುರುದೇವ ರಾನಡೆ ಭವನ, ಪಿ.ಬಿ. ಹೈಸ್ಕೂಲ್, ಗುಳೇದಗುಡ್ಡದ ಕರನಂದಿ ಕಲ್ಯಾಣ ಮಂಟಪ, ತೇರದಾಳ ಪುರಸಭೆ ಕಚೇರಿ ಹಾಗೂ ಅನಗವಾಡಿಯ ಬಸವೇಶ್ವರ ಸಭಾಭವನದಲ್ಲಿ ಸಭೆಗಳು ನಡೆಯಲಿವೆ.

ಸೆ.12ರಂದು ಸಾವಳಗಿಯ ಮಾಳಿ ಸಭಾಭವನ, ಹೊಸೂರ ಗ್ರಾಪಂ ಸಭಾಭವನ, ಗಿರಿಸಾಗರದ ರುದ್ರಮುನಿ ಸ್ವಾಮಿ ಕಲ್ಯಾಣ ಮಂಟಪ ಹಾಗೂ ರಾಂಪೂರ ಗ್ರಾಪಂ ಸಭಾಭವನದಲ್ಲಿ ಸಭೆಗಳು ನಡೆಯಲಿವೆ. ಸೆ.19ರಂದು ಬೆಳಗಲಿ ಮಹಾಲಿಂಗೇಶ್ವರ ದೇವಸ್ಥಾನದ ಆವರಣ, ಮರೇಗುದ್ದಿ ಗ್ರಾಪಂ ಕಾರ್ಯಾಲಯದ ಸಭಾಭವನ, ಹಳದೂರ ಗ್ರಾಪಂ ಸಭಾಭವನ, ತೇರದಾಳ ಪುರಸಭೆ ಕಚೇರಿ, ಸಿದ್ದಾಪೂರ ವಾಲ್ಮೀಕಿ ಸಮುದಾಯ ಭವನ ಹಾಗೂ ತಿಮ್ಮಾಪೂರದ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅಹವಾಲು ಸ್ವೀಕರಿಸಲಾಗುತ್ತದೆ.

ಸೆ.26ರಂದು ಮಂಟೂರು ಗ್ರಾಪಂ ಆವರಣ, ಗೋರೆ ಅಂಬೇಡ್ಕರ್ ಭವನ, ಕುಳಗೇರಿ ಕ್ರಾಸ್ ಬಸವ ಭವನ, ರಬಕವಿ-ಬನಹಟ್ಟಿ ತಹಸೀಲ್ದಾರ್ ಕಚೇರಿ ಹಾಗೂ ಬೆಣ್ಣೂರ ಗ್ರಾಪಂ ಕಚೇರಿ ಆವರಣದಲ್ಲಿ ಸಭೆಗಳು ನಡೆಯಲಿವೆ.

ಹಲವು ಇಲಾಖೆಗಳ ಸಮಸ್ಯೆಗೆ ಸ್ಪಂದನೆ: ಕಂದಾಯ, ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು, ವಸತಿ, ರಸ್ತೆ, ವಿದ್ಯುತ್, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಭದ್ರತೆ ಸೇರಿದಂತೆ ವಿವಿಧ ಇಲಾಖೆಗಳ ಸಮಸ್ಯೆಗಳನ್ನು ಸಾರ್ವಜನಿಕರು ಆಂದೋಲನದಲ್ಲಿ ನೇರವಾಗಿ ಅಧಿಕಾರಿಗಳ ಗಮನಕ್ಕೆ ತರಬಹುದಾಗಿದೆ.

ಸಭೆಗಳಲ್ಲಿ ಸ್ವೀಕರಿಸುವ ಅಹವಾಲುಗಳ ಕುರಿತು ಸಂಬಂಧಿಸಿದ ಅಧಿಕಾರಿಗಳು ತ್ವರಿತವಾಗಿ ಕ್ರಮ ಕೈಗೊಂಡು ಪರಿಹಾರ ಕಲ್ಪಿಸುವಂತೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...