ಬಾಗೇಪಲ್ಲಿ| ಮತದಾರರ ಪಟ್ಟಿ ಪರಿಷ್ಕರಣೆಗೆ 2.00,939 ಲಕ್ಷ ಅರ್ಜಿ ವಿತರಣೆ

Date:

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ಕ್ಕೆ ಸಂಬಂಧಿಸಿದಂತೆ ಈಗಾಗಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜೂನ್ 30ರಿಂದ ಜುಲೈ 29ವರೆಗೆ ಮತಗಟ್ಟೆಗಳ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲಿದ್ದು, ಅರ್ಜಿ ನಮೂನೆಗಳನ್ನು ವಿತರಿಸುತ್ತಾರೆ. ಮತದಾರರು ಅರ್ಜಿಯನ್ನು ತುಂಬಿ ಬೂತ್ ಮಟ್ಟದ ಅಧಿಕಾರಿಗಳಿಗೆ ತಲುಪಿಸಬೇಕು ಎಂದು ಬಾಗೇಪಲ್ಲಿ ವಿಧಾನ ಸಭೆ ಕ್ಷೇತ್ರದ ನೊಂದಣಿ ಅಧಿಕಾರಿಗಳಾದ ಅತೀಕ್ ಭಾಷಾ ತಿಳಿಸಿದರು.

ಬಾಗೇಪಲ್ಲಿ ಹಾಗೂ ಚೇಳೂರು ತಾಲ್ಲೂಕಿನಲ್ಲಿ ಒಟ್ಟು 267 ಮತಗಟ್ಟೆಗಳಿದ್ದು, ಒಟ್ಟು 267ಬಿ.ಎಲ್. ಓ ಗಳು ಕೆಲಸ ನಿರ್ವಹಿಸುತ್ತದ್ದು ಬಾಗೇಪಲ್ಲಿ ತಾಲ್ಲೂಕಿನಲ್ಲಿ
ಒಟ್ಟು 2,04,413 ಮತದಾರರಿದ್ದಾರೆ. ಈಗಾಗಲೇ 2,00,939 ಲಕ್ಷ ಅರ್ಜಿ ನಮೂನೆಗಳನ್ನು ಬೂತ್ ಮಟ್ಟದ ಅಧಿಕಾರಿಗಳು ವಿತರಿಸಿದ್ದಾರೆ. ಇದರಲ್ಲಿ 59960 ನಮೂನೆಗಳನ್ನು ಗಣಕೀಕರಣ ಮಾಡಲಾಗಿದೆ. ಸಂಗ್ರಹಿಸಿದ ನಮೂನೆಗಳನ್ನು ಜುಲೈ 29ರೊಳಗೆ ಗಣಕೀಕರಣ ಮಾಡಲಾಗುವುದು. ಹಾಗಾಗಿ ಬೂತ್ ಮಟ್ಟದ ಅಧಿಕಾರಿಗಳು ಮನೆಗಳಿಗೆ ಬಂದಾಗ ಸೂಕ್ತ ದಾಖಲೆಗಳನ್ನು ನೀಡುವ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು.

- Advertisement -

ತಾಲ್ಲೂಕು ಕಳೆದ ಎಂಟು ದಿನಗಳಲ್ಲಿ ಶೇ. 98.30 ರಷ್ಟು ಅರ್ಜಿಗಳ ವಿತರಣೆ ಪೂರ್ಣಗೊಂಡಿದ್ದು, ಜುಲೈ 29ರವರೆಗೂ ಅರ್ಜಿಗಳ ಸ್ವೀಕಾರ ಪ್ರಕ್ರಿಯೆ ಮುಂದುವರಿಯಲಿದೆ. ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟ ಆಗಲಿದೆ ಎಂದು ಹೇಳಿದರು.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ತಾಲ್ಲೂಕು ಪ್ರಗತಿಯಲ್ಲಿದೆ. ಆರಂಭದಲ್ಲಿ ಅರ್ಜಿಗಳ ವಿತರಣೆಗೆ ಒತ್ತು ನೀಡಲಾಗಿದೆ. ಕರಡು ಪಟ್ಟಿಯಲ್ಲಿ ನ್ಯೂನತೆಗಳಿದ್ದರೆ ಸೆಪ್ಟೆಂಬರ್ 4ರವರೆಗೂ ದೂರು ಸ್ವೀಕಾರ ಮಾಡಲಾಗುತ್ತದೆ. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ ಆಗುತ್ತದೆ ಎಂದು ತಿಳಿಸಿದರು.
ಬಾಗೇಪಲ್ಲಿ ಹಾಗೂ ಚೇಳೂರು ಒಟ್ಟು 267 ಚುನಾವಣಾ ಮತಗಟ್ಟೆಗಳಿದ್ದು, ಅಷ್ಟೇ ಸಂಖ್ಯೆಯ ಬೂತ್‌ಮಟ್ಟದ ಅಧಿಕಾರಿ(ಬಿಎಲ್‌ಒ)ಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಜೂ.29ರಿಂದ ಮತದಾರರಿಗೆ ಅರ್ಜಿ ವಿತರಣೆ ಕಾರ್ಯ ಆರಂಭವಾಗಿದೆ. ಅರ್ಜಿ ವಿತರಣೆಗೆ ಹೆಚ್ಚು ಒತ್ತು ನೀಡಲಾಗಿದೆ. ಇನ್ನು ಮೂರು ನಾಲ್ಕು ದಿನಗಳಲ್ಲಿ ಅರ್ಜಿ ವಿತರಣೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ತಾಲ್ಲೂಕಿನಲ್ಲಿ ಒಟ್ಟು2,04,413 ಮತದಾರರಿದ್ದು, ಇದುವರೆಗೆ 2,00,939 ಅರ್ಜಿ ವಿತರಿಸಲಾಗಿದೆ. ಕೆಲವೆಡೆ ಬಿಎಲ್‌ಒಗಳು ಅರ್ಜಿ ಸ್ವೀಕಾರ ಮಾಡಿ ಆನ್‌ಲೈನ್‌ಗೆ ಭರ್ತಿ ಕೂಡ ಮಾಡಿದ್ದಾರೆ ಎಂದರು. ಯಾವುದೇ ಅರ್ಹ ನಾಗರಿಕರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಚುನಾವಣಾ ಆಯೋಗದ ಪ್ರಮುಖ ಉದ್ದೇಶವಾಗಿದೆ. ಶೇ.100ರಷ್ಟು ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಕೈಗೊಂಡಿರುವ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಗೊಳಿಸಲು ರಾಜಕೀಯ ಪಕ್ಷಗಳು ಸಕ್ರಿಯವಾಗಿ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ..?ಕೋಲಾರ | ಬಾಲಕಿಯರ ಹಾಸ್ಟೆಲ್‌ಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ದಿಢೀರ್ ಭೇಟಿ, ವ್ಯವಸ್ಥೆ ಪರಿಶೀಲನೆ – ಈ ದಿನ.ಕಾಮ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಈ ಸಂದರ್ಭದಲ್ಲಿ ಬಾಗೇಪಲ್ಲಿ ತಾಲ್ಲೂಕು ತಹಶಿಲ್ದಾರ್ ಮನೀಷಾ ಎನ್ ಪತ್ರಿ, ಚೇಳೂರು ತಾಲ್ಲೂಕು ತಹಶಿಲ್ದಾರ್ ಶ್ವೇತಾ.ಬಿ.ಕೆ,ಗುಡಿಬಂಡೆ ತಹಶಿಲ್ದಾರ್ ಸಿಗಬತ್ತುಲ್ಲಾ ,ಬಿಇಓ ಎನ್.ವೆಂಕಟೇಶಪ್ಪ, ತಾಲ್ಲೂಕು ಪಂಚಾಯತಿ ಇಓ ರಮೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರಾಮಚಂದ್ರಪ್ಪ,, ಚುನಾವಣೆ ಅಧಿಕಾರಿಗಳು,ಹಾಗೂ ರಾಜಕೀಯ ಪಕ್ಷಗಳ ಮುಖಂಡರಾದ ಮದ್ದಿಲೇಟಿರೆಡ್ಡಿ,ಡಿ.ಟಿ.ಮುನಿಸ್ವಾಮಿ, ಲೋಕೇಶ್ ಇನ್ನೂ ಮುಂತಾದವರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...