ಬಾಗೇಪಲ್ಲಿ: ನಾಡಪ್ರಭು ಕೆಂಪೇಗೌಡರ 517 ನೇ ಜಯಂತಿ

Date:

ತಾಲ್ಲೂಕಿನಲ್ಲಿ ನಾಡಪ್ರಭು ಕೆಂಪೇಗೌಡರ 517 ನೇ ಜಯಂತಿ ಕಾರ್ಯಕ್ರಮವನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ಅತ್ಯಂತ ಯಶಸ್ವಿಯಾಗಿ ಮತ್ತು ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಭಾಗಗಳಿಂದ ನೂರಾರು ಸಾರ್ವಜನಿಕರು ಹಾಗೂ ಮುಖಂಡರು ಭಾಗವಹಿಸಿ, ನಾಡಪ್ರಭುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಉಗ್ರಾಣ ಮಂಡಳಿ ಅಧ್ಯಕ್ಷರು ಹಾಗೂ ಬಾಗೇಪಲ್ಲಿ ಮಾಜಿ ಶಾಸಕರಾದ ಎನ್. ಸಂಪಂಗಿ ಅವರು, ತಾಲ್ಲೂಕಿನ ಪ್ರಸಿದ್ಧ ಗಂಟಲಮಲ್ಲಮ್ಮ ಕಣಿವೆ ಮತ್ತು ಬಾಗೇಪಲ್ಲಿ ಭಾಗಕ್ಕೆ ಕೈಗಾರಿಕೆಗಳನ್ನು ತರುತ್ತಿರುವುದು ಅತ್ಯಂತ ಶ್ಲ್ಯಾಘನೀಯವಾದ ಕೆಲಸವಾಗಿದೆ ಎಂದರು. ಇದೇ ವೇಳೆ ಅವರು ಹಾಲಿ ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ ರವರು ಬಾಗೇಪಲ್ಲಿಯಲ್ಲಿ ಹಗಲಿರುಳು ಒಳ್ಳೆಯ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದು, ತಾಲ್ಲೂಕಿನ ಸಮಗ್ರ ಪ್ರಗತಿಗಾಗಿ ಅಂಥವರನ್ನು ನಾವೆಲ್ಲರೂ ಒಗ್ಗಟ್ಟಾಗಿ ಬೆಂಬಲಿಸಬೇಕು ಎಂದು ಕರೆ ನೀಡಿದರು.

- Advertisement -

ಬಳಿಕ ಮಾತನಾಡಿದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರು, ಬಾಗೇಪಲ್ಲಿಯಲ್ಲಿ ಕೆಂಪೇಗೌಡ ಜಯಂತಿಯನ್ನು ಇಷ್ಟು ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ತುಂಬಾ ಸಂತೋಷ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಹಾಗೆಯೇ, ಈ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲು ಶ್ರಮಿಸಿದ ಮತ್ತು ಒಗ್ಗಟ್ಟಿನಿಂದ ಕೆಲಸ ಮಾಡಿದಂತಹ ಒಕ್ಕಲಿಗ ಸಮಾಜದ ಎಲ್ಲಾ ಮುಖಂಡರಿಗೂ ಹಾಗೂ ಸಾರ್ವಜನಿಕರಿಗೂ ಶಾಸಕರು ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದೇ ಸಂದರ್ಭದಲ್ಲಿ ಸಮುದಾಯ ಹಾಗೂ ವಿದ್ಯಾರ್ಥಿಗಳ ಅಭಿವೃದ್ಧಿಗೆ ದೊಡ್ಡ ಭರವಸೆ ನೀಡಿದ ಶಾಸಕರು, ಒಕ್ಕಲಿಗ ಸಮುದಾಯದ ವಿದ್ಯಾರ್ಥಿ ನಿಲಯ (ಹಾಸ್ಟೆಲ್) ನಿರ್ಮಾಣ ಮಾಡಲು ಅಗತ್ಯವಿರುವ ಸೂಕ್ತ ಜಾಗವನ್ನು ಕೊಡಿಸುವುದರ ಜೊತೆಗೆ ಭವ್ಯವಾದ ಬಿಲ್ಡಿಂಗ್ ಕಟ್ಟಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಅಲ್ಲದೆ, ತಮ್ಮದೇ ಶಾಸಕತ್ವದ ಅವಧಿಯಲ್ಲಿ ಒಕ್ಕಲಿಗ ಭವನ ನಿರ್ಮಾಣಕ್ಕೂ ಸಹ ಅಗತ್ಯವಿರುವ ಜಾಗವನ್ನು ಮಂಜೂರು ಮಾಡಿಸಿಕೊಡುವುದಾಗಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರು ಮಹತ್ವದ ವಾಗ್ದಾನ ಮಾಡಿದರು.

ಇದನ್ನು ಓದಿದ್ದೀರಾ..? ಕೋಲಾರ | ಕೇಂದ್ರದಂತೆ ರಾಜ್ಯ ಸರ್ಕಾರವು ಮಾವಿಗೆ ಬೆಂಬಲ ಬೆಲೆ ಘೋಷಣೆಗೆ ರೈತ ಸಂಘ ಒತ್ತಾಯ

ಈ ಸಂದರ್ಭದಲ್ಲಿ ತಹಶಿಲ್ದಾರ್ ಮನೀಷಾ ಎನ್ ಪತ್ರಿ,ಬಿಇಓ ಎನ್.ವೆಂಕಟೇಶಪ್ಪ, ಅಜಯ್‌ ಸಾರಥಿ,ಎಂ.ಶ್ರೀನಿವಾಸ್, ವೈ.ಶ್ರೀನಿವಾಸ್ ರೆಡ್ಡಿ, ನರಸಿಂಹಾ ರೆಡ್ಡಿ, ಆರ್.ಹನುಮಂತ ರೆಡ್ಡಿ, ಭಾಸ್ಕರ ರೆಡ್ಡಿ, ಪಿ.ಮಂಜುನಾಥ್ ರೆಡ್ಡಿ, ವೆಂಕಟೇಶ್,ಹಾಗೂ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...