ಬಾಗೇಪಲ್ಲಿ | ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಬೈಕ್‌ ರ‍್ಯಾಲಿ ಮೂಲಕ ಜಾಗೃತಿ

Date:

ತಾಲ್ಲೂಕಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭಗೊಂಡಿದ್ದು, ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಅಗತ್ಯ ಮಾಹಿತಿ ನೀಡುವ ಮೂಲಕ ಜನರು ಸಹಕರಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಎಂ.ಶ್ರೀನಿವಾಸ್ ಕೋರಿದರು.

- Advertisement -

ಪಟ್ಟಣದ ತಾಲ್ಲೂಕು ಪಂಚಾಯತಿ ಮುಂದೆ ಹಮ್ಮಿಕೊಂಡಿದ್ದ ಎಸ್‌ಐಆರ್ ವಿಶೇಷ ಜಾಥಾ ಹಾಗೂ ಜಾಗೃತಿ ಬೈಕ್ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿ ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದೇ ಎಸ್‌ಐಆರ್‌ ಉದ್ದೇಶ. ಮತಪಟ್ಟಿ ಪರಿಷ್ಕರಣೆಗೆ ನಿಯೋಜಿಸಲ್ಪಟ್ಟ ಬಿಎಲ್‌ಓಗಳು ಜುಲೈ 29ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರ ಪರಿಶೀಲಿಸಲಿದ್ದಾರೆ. ಈ ವೇಳೆ ಮತದಾರರು ಅರ್ಜಿಯನ್ನು ಭರ್ತಿ ಮಾಡಿ, ಸಹಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಬಿಇಓ ಎನ್. ವೆಂಕಟೇಶಪ್ಪ ಮಾತನಾಡಿ ಮತದಾರರ ಪಟ್ಟಿಯಲ್ಲಿರುವ ಹೆಸರು ಪರಿಶೀಲನೆ, ತಿದ್ದುಪಡಿ, ಹೊಸ ಮತದಾರರ ಹೆಸರು ಸೇರ್ಪಡೆ, ಮೃತಪಟ್ಟವರು ಹಾಗೂ ಸ್ಥಳಾಂತರಗೊಂಡವರ ಹೆಸರು ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆಯೂ ಇದೇ ಅವಧಿಯಲ್ಲಿ ನಡೆಯಲಿದೆ. ಎರಡು ಕಡೆ ಹೆಸರು ಇದ್ದಲ್ಲಿ ಒಂದು ಕಡೆ ಮಾತ್ರ ಉಳಿಸುವ ಪ್ರಕ್ರಿಯೆಯೂ ಸಹ ನಡೆಯುತ್ತದೆ. ಜೊತೆಗೆ ಗುರುತಿನ ಚೀಟಿಯಲ್ಲಿ ಏನಾದರೂ ದೋಷಗಳು ಇದ್ದಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಲು ಕೂಡ ಅವಕಾಶವಿರುತ್ತದೆ ಎಂದರು.

ಈ ಸಂದರ್ಭದಲ್ಲಿ ಶಿಕ್ಷಕರು ಹಾಗೂ ಅಧಿಕಾರಿಗಳು ಅತ್ಯಂತ ಉತ್ಸಾಹದಿಂದ ರ‍್ಯಾಲಿಯಲ್ಲಿ ಭಾಗವಹಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವುದು, ಅಗತ್ಯ ತಿದ್ದುಪಡಿಗಳನ್ನು ಮಾಡಿಸುವುದು ಹಾಗೂ ಪ್ರತಿಯೊಬ್ಬ ಅರ್ಹ ನಾಗರಿಕರೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳುವಂತೆ ಘೋಷಣೆಗಳನ್ನು ಕೂಗಿ ಜಾಗೃತಿ ಫಲಕಗಳನ್ನು ಹಿಡಿದು ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸಿದರು.

ಇದನ್ನು ಓದಿದ್ದೀರಾ..?ಕೋಲಾರ | ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸ್ಕೀಮ್ ನೌಕರರಿಂದ ಡಿಸಿ ಕಛೇರಿ ಮುಂದೆ ಬೃಹತ್ ಪ್ರತಿಭಟನೆ

ಈ ಸಂದರ್ಭದಲ್ಲಿ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ನಿರ್ದೇಶಕ ರಾಮಚಂದ್ರಪ್ಪ,ಶಿಕ್ಷಣ ಸಮನ್ವಯಾಧಿಕಾರಿಗಳಾದ ಆರ್.ವೆಂಕಟರಾಮ್, ನೌಕರರ ಸಂಘದ ಅಧ್ಯಕ್ಷ ಆರ್.ಹನುಮಂತ ರೆಡ್ಡಿ, ಟಿ.ಪಿ.ಓ ರಂಗನಾಥ್,ಜಿ.ಆರ್.ರಮೇಶ್, ಶಿವಪ್ಪ, ಗೂಳೂರು ಪಿಡಿಓ ಕೃಷ್ಣಮೂರ್ತಿ,ಕುಶಲ್ ಕುಮಾರ್, ವೈ.ಎ.ಮಂಜುನಾಥ್, ಹಾಗೂ ಎಲ್ಲಾ ಬಿ.ಎಲ್.ಓ ಗಳು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...