ಪಟ್ಟಣದ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು 2026ರ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಬ್ಯಾನರ್ ಹಿಡಿದು ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಪಟ್ಟಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತಿ,ಪುರಸಭೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಶಾಲಾ ಕಾಲೇಜು ಮಕ್ಕಳಿಂದ
ಮತದಾರರ ಸಮಗ್ರ ಪರಿಷ್ಕರಣೆ ಪ್ರಯುಕ್ತ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಹಶಿಲ್ದಾರ್ ಮನೀಷಾ ಎನ್ ಪತ್ರಿ ಮಾತನಾಡಿ, ‘ಚುನಾವಣಾ ಆಯೋಗ ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಆರಂಭಿಸಿದೆ. ನಾವುಗಳು ಅರ್ಹ ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ಮೃತಪಟ್ಟವರ ಅಥವಾ ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಯಿಂದ ತೆಗೆದುಹಾಕುವ ಕಾರ್ಯ ನಡೆಯುತ್ತಿದೆ. ಅರ್ಹ ಮತದಾರರು ನಮೂನೆ 6,7,8 ಭರ್ತಿ ಮಾಡಿ ಆಯಾ ಬಿಎಲ್‌ಒಗಳಿಗೆ ನೀಡಬೇಕು ಎಂದು ಹೇಳಿದರು.
ತಾಲ್ಲೂಕು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಮೇಶ್ ಮಾತನಾಡಿ ಮತದಾದ ಹಕ್ಕು ಪ್ರಜಾಪ್ರಭುತ್ವದ ಮೂಲ ಅಡಿಪಾಯವಾಗಿದೆ. ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು. ಮತದಾರರ ಮ್ಯಾಪಿಂಗ್ ಕಾರ್ಯವನ್ನು ಬಿಎಲ್‌ಒಗಳು ನಿರಂತರವಾಗಿ ಮಾಡುತ್ತಿದ್ದಾರೆ. ಎಸ್‌ಐಆರ್ ಯಶಸ್ವಿಯಾದರೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಾಗಲಿದೆ. ಒಬ್ಬ ಮತದಾರರ ಹೆಸರು ಮೂರು ನಾಲ್ಕು ಕಡೆ ದಾಖಲಿಸುವುದು ಕಾನೂನು ಬಾಹಿರವಾಗಲಿದೆ’ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ..?ಕೋಲಾರ |ವಿಧ್ಯಾರ್ಥಿಗಳಿಗೆ ಉತ್ತಮ ವ್ಯಕ್ತಿತ್ವ ಹಾಗೂ ಮನುಷ್ಯತ್ವ ಬೆಳೆಸಿಕೊಳ್ಳುವ ಶಿಕ್ಷಣದ ಅಗತ್ಯವಿದೆ: ವಿ.ಎಸ್ ಉಗ್ರಪ್ಪ
ಈ ಸಂದರ್ಭದಲ್ಲಿ ಬಿಇಓ ವೆಂಕಟೇಶಪ್ಪ .ಎನ್, ಆರ್.ಹನುಮಂತ ರೆಡ್ಡಿ, ಪುರಸಭೆ ಮುಖ್ಯಾಧಿಕಾರಿ ಎಂ.ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಾದ ರಾಮಚಂದ್ರಪ್ಪ,ಟಿ.ಪಿ.ಓ ಎನ್.ರಂಗನಾಥ್,ಶಿಕ್ಷಣ ಸಂಯೋಜಕ ಆರ್ ವೆಂಕಟರಾಮ್, ವಿವಿಧ ಶಾಲಾ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಶಿಕ್ಷಕರು, ಹಾಗೂ ವಿಧ್ಯಾರ್ಥಿಗಳು ಹಾಜರಿದ್ದರು.




