ಬಾಗೇಪಲ್ಲಿ | ಯೋಗ ದಿನಾಚರಣೆಗಷ್ಟೇ ಸೀಮಿತವಾಗದಿರಲಿ: ಜೆ.ಎಂ.ಎಫ್.ಸಿ ಸಿವಿಲ್ ನ್ಯಾಯಾಧೀಶೆ ಎಸ್.ರಂಜಿತಾ

Date:

ಯೋಗವು ಕೇವಲ ಒಂದು ದಿನದ ಆಚರಣೆಯಲ್ಲ, ಬದಲಿಗೆ ಆರೋಗ್ಯಕರ ಮತ್ತು ನೆಮ್ಮದಿಯ ಜೀವನಶೈಲಿಯಾಗಬೇಕು. ದಿನಕ್ಕೆ ಕೇವಲ 10 ರಿಂದ 15 ನಿಮಿಷಗಳನ್ನು ಮೀಸಲಿಟ್ಟು ಯೋಗ ಮಾಡುವುದರಿಂದ ದೈಹಿಕ ಸಾಮರ್ಥ್ಯ ಹೆಚ್ಚುತ್ತದೆ, ಒತ್ತಡ ಕಡಿಮೆಯಾಗುತ್ತದೆ ಮತ್ತು ಮನಸ್ಸಿನ ಏಕಾಗ್ರತೆ ವೃದ್ಧಿಸುತ್ತದೆ ಎಂದು ಬಾಗೇಪಲ್ಲಿ ಪಟ್ಟಣದ ಗೌರವಾನ್ವಿತ ಸಿವಿಲ್ ನ್ಯಾಯಾಧೀಶರು , ತಾಲ್ಲೂಕಿನ ಕಾನೂನು ಸೇವಾ ಸಮಿತಿ, ಜೆ.ಎಂ.ಎಫ್.ಸಿ ಸದಸ್ಯ ಕಾರ್ಯದರ್ಶಿಗಳಾದ ಎಸ್.ರಂಜಿತಾ ಅವರು ಉದ್ಘಾಟನೆ ಮಾಡಿ ಮಾತನಾಡಿದರು.

- Advertisement -

ಪಟ್ಟಣದ ತಾಲ್ಲೂಕು ವಕೀಲರ ಸಂಘ,ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಬಾಗೇಪಲ್ಲಿ ತಾಲ್ಲೂಕು ಶಾಖೆ ವತಿಯಿಂದ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಹಾಗೂ ಯೋಗ ಯೋಗಾಭ್ಯಾಸದಲ್ಲಿ ಪಾಲ್ಗೊಂಡು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಯೋಗ ದಿನಾಚರಣೆಗಷ್ಟೇ ಸೀಮಿತವಾಗದಿರಲಿ ಯೋಗಾಭ್ಯಾಸ ಒಂದು ದಿನದ ಆಚರಣೆಗೆ ಸೀಮಿತವಾಗದೇ ನಿತ್ಯದ ಬದುಕಿನ ಭಾಗವಾಗಬೇಕಿದೆ ನಿಯಮಿತ ಯೋಗಾಭ್ಯಾಸವು ಆರೋಗ್ಯಕರ ಜೀವನಶೈಲಿಗೆ ಪೂರಕವಾಗಿದ್ದು, ಒತ್ತಡ ಮುಕ್ತ ಮತ್ತು ಆರೋಗ್ಯಕರ ಜೀವನಕ್ಕಾಗಿ ಯೋಗ ಸಾಧನೆ ಅನಿವಾರ್ಯವಾಗಿದೆ’ ಎಂದು ಹೇಳಿದರು.ಸಮಾಜದಲ್ಲಿ ಹಣ ಹಾಗೂ ವಸ್ತುಗಳನ್ನು ಎರವಲು ಪಡೆಯಬಹುದು ಆದರೆ ಆರೋಗ್ಯವನ್ನು ಎರವಲು ಪಡೆಯಲು ಅಸಾಧ್ಯ ಆದ್ದರಿಂದ ಯೋಗ ದಿನನಿತ್ಯದ ಚಟುವಟಿಕೆ ಹಾಗೂ ಜೀವನದ ಭಾಗವಾಗಬೇಕು ಎಂದು ಹೇಳಿದರು.

ಯೋಗ ಗುರುಗಳಾದ ಯಂಗ್ ಇಂಡಿಯಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಯೋಗ ಶಿಕ್ಷಕರಾದ ರಾಮಾಂಜಿ ವಕೀಲರಿಗೆ ಯೋಗದ ಮಹತ್ವವನ್ನು ತಿಳಿಸಿ ವಿವಿಧ ಯೋಗದ ಭಂಗಿಗಳನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಿದರು.

ಈ ಸಂದರ್ಭದಲ್ಲಿ ವಕೀಲರಾದ ನಾಗಭೂಷಣ ಅವರು ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಯೋಗಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಮಾನ್ಯತೆ ದೊರೆತಿದ್ದು, ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಭಾರತೀಯ ಯೋಗ ಪರಂಪರೆಯ ಮಹತ್ವವನ್ನು ವಿಶ್ವದಾದ್ಯಂತ ಸಾರಲಾಗಿದೆ ಎಂದು ಹೇಳಿದರು.

ಇಂದು 180ಕ್ಕೂ ಹೆಚ್ಚು ದೇಶಗಳಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಇದು ಭಾರತದ ಸಾಂಸ್ಕೃತಿಕ ಪರಂಪರೆಗೆ ದೊರೆತ ಜಾಗತಿಕ ಗೌರವವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನು ಓದಿದ್ದೀರಾ..? ಕೋಲಾರ | ಸುಳ್ಳು ಹೇಳುವವರ ಬಾಯಿ ಲೌಡ್ ಸ್ಪೀಕರ್ ಆಗಿದೆ, ಸತ್ಯ ಹೇಳುವವರ ಬಾಯಿಗೆ ಲಕ್ವಾ ಹೊಡೆದಿದೆ : ರಮೇಶ್ ಕುಮಾರ್

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಜಿ.ಎನ್.ಮಂಜುನಾಥ್, ಉಪಾಧ್ಯಕ್ಷ ಸಿ ರವಿ, ಕಾರ್ಯದರ್ಶಿಗಳಾದ ಜಯಪ್ಪ ಖಜಾಂಚಿ ಬಿಂದುಕುಮಾರಿ,ಬಾಲುನಾಯಕ್,ಮಲ್ಲಿಕಾರ್ಜುನ, ಸುಧಾಕರ್,ಲಕ್ಷ್ಮೀತಿ,ವೆಂಕಟರವಣಪ್ಪ ಹಾಗೂ ಸಾರ್ವಜನಿಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...