ಬಾಗೇಪಲ್ಲಿ | ಡಾ. ಬಿ ಆರ್ ಅಂಬೇಡ್ಕರ್ ಸೇನೆಯ ತಾಲೂಕು ಪದಾಧಿಕಾರಿಗಳ ಆಯ್ಕೆ

Date:

Advertisements

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಮಹಾನಾಯಕ ಡಾ. ಬಿ ಆರ್‌ ಅಂಬೇಡ್ಕರ್ ಸೇನೆ (ರಿ)ಯ ತಾಲೂಕು ಮಟ್ಟದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಪಟ್ಟಣದಲ್ಲಿರುವ ಅಂಬೇಡ್ಕರ್ ಭವನದಲ್ಲಿ‌ ರಾಜ್ಯಾಧ್ಯಕ್ಷ ಡಿ.ವಿ.ನಾರಾಯಣ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ತಾಲೂಕು ಅಧ್ಯಕ್ಷರಾಗಿ ನಾರಾಯಣ ಸ್ವಾಮಿ, ಉಪಾಧ್ಯಕ್ಷರಾಗಿ ಶ್ರೀನಿವಾಸ, ಕಾರ್ಯದರ್ಶಿಯಾಗಿ ಅರುಣ್ ಕುಮಾರ್ ಹಾಗೂ ಪದಾಧಿಕಾರಿಗಳಾಗಿ ನರಸಿಂಹಪ್ಪ , ವೆಂಕಟೇಶ್, ಮಲ್ಲಿಕಾರ್ಜುನ, ಸೋಮಶೇಖರ್, ರಾಮು, ಬಾಬು, ಫೈರೋಜ್ ಭಾಷಾ, ಮಲ್ಲೇಶಪ್ಪ, ವೆಂಕಟಾದ್ರಿ, ಶ್ರೀನಾಥ್, ನರಸಿಂಹಪ್ಪ ರಾಮಕೃಷ್ಣ, ಚಿನ್ನಾ, ಆದಿ , ಶ್ರೀನಾಥ್ ತಾಲ್ಲೂಕು ಮಹಿಳಾ ಘಟಕ ಅದ್ಯಕ್ಷ ಗಂಗುಲಮ್ಮ, ನಾಗರತ್ನಮ್ಮ ಜಿಲ್ಲಾ ಮಹಿಳಾ ಉಪಾಧ್ಯಕ್ಷೆ, ಜ್ಯೋತಿ ಮಹಿಳಾ ಕಾರ್ಯಾದ್ಯಕ್ಷೆ ಹಾಗೂ ಪದಾಧಿಕಾರಿಗಳಾದ ವನಜಾ, ರೂಪಾ, ಅರುಣಮ್ಮ, ರಾಧಮ್ಮ, ರಮಾದೇವಿ, ಭೂದೇವಿ ಹಾಗೂ ಕಾರ್ಮಿಕ ಘಟಕ ಅದ್ಯಕ್ಷರಾಗಿ ಗಂಗರಾಜು ಹಾಗೂ ಪದಾಧಿಕಾರಿಗಳಾದ ಬಾಬಾ ಪಕೃದ್ದೀನ್,ನರಸಿಂಹಪ್ಪ ಶಿವಾ,ಅನಿಲ್ ಶಾತಾಜ್ ಗಂಗಾಧರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ನೂತನ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಡಿ.ವಿ.ನಾರಾಯಣ ಸ್ವಾಮಿ, “ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಆಶಯದಂತೆ ಸಂಘಟನೆಯು ಸರ್ವರಿಗೂ ಸಮಬಾಳು, ಸಮಪಾಲು ನೀಡುವ ಯೋಜನೆಗಳನ್ನು ಹಾಕಿಕೊಂಡಿದ್ದು, ಸಾಮಾಜಿಕ ನ್ಯಾಯ ನೀಡಲು ರಾಜ್ಯಾದ್ಯಂತ ಶಾಖೆಗಳನ್ನು ಆರಂಭಿಸುವ ಮೂಲಕ ಸಂಘಟನೆಯ ಶಕ್ತಿ ಹೆಚ್ಚಿಸಲು ಪ್ರಯತ್ನಿಸುತ್ತಿದೆ” ಎಂದರು.

ಆರಕ್ಷಕ ವೃತ್ತ ನಿರೀಕ್ಷ ಪ್ರಶಾಂತ್ ವರ್ಣಿ ಮಾತನಾಡಿ, ಡಾ.ಅಂಬೇಡ್ಕರ್ ಅವರು ಭಾರತಕ್ಕೆ ಸುಭದ್ರ ಸಂವಿಧಾನ ರಚಿಸಿ ತಳ ಸಮುದಾಯದ ಜನರ ಏಳಿಗೆಗೆ ಮತ್ತು ಮಹಿಳೆಯರನ್ನು ಮುಖ್ಯವಾಹಿನಿಗೆ ತರಲು ಅವಕಾಶ ಮಾಡಿಕೊಡುವ ಮೂಲಕ `ಮಹಾನಾಯಕ’ರಾಗಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಬಾಗೇಪಲ್ಲಿ | ಶಾಲಾ-ಕಾಲೇಜು ಮೈದಾನದಲ್ಲಿ ಗುರುಭವನ ನಿರ್ಮಾಣಕ್ಕೆ ಆಕ್ಷೇಪ

ಚಿನ್ನ ಕೈವಾರಮಯ್ಯ ಮಾತನಾಡಿ, “ಅಂಬೇಡ್ಕರ್ ಅವರು ಬೆಳೆದು ಬಂದ ಹಾದಿ, ಶೋಷಿತ ಸಮುದಾಯದ ಉದ್ಧಾರಕ್ಕಾಗಿ ಅವರು ನಡೆಸಿದ ಹೋರಾಟ ಹಾಗೂ ದೇಶಕ್ಕೆ ನೀಡಿದ ಕೊಡುಗೆಗಳು ಅಪಾರ. ಅಂಬೇಡ್ಕರ್ ಅವರು ಬಡತನವನ್ನು ಮೆಟ್ಟಿ ನಿಂತು ವಿದ್ಯಾಭ್ಯಾಸ ಮಾಡದೆ ಹೋಗಿದ್ದರೆ ಅಖಂಡ ಭಾರತದಲ್ಲಿ ಮರೆಯಲಾಗದ ಚೇತನವೊಂದು ಸೃಷ್ಟಿಯಾಗುತ್ತಿರಲಿಲ್ಲ. ಅವರು ಎಲ್ಲರಿಗೂ ಸ್ಫೂರ್ತಿದಾಯಕ. ಸಮ ಸಮಾಜ ನಿರ್ಮಾಣದ ಅಂಬೇಡ್ಕರ್ ಕನಸು ನನಸು ಮಾಡಲು ಎಲ್ಲರೂ ಶ್ರಮಿಸಬೇಕು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ವೆಂಕಟಸ್ವಾಮಿ, ಮೂರ್ತಿ ಗೌರಿಬಿದನೂರು ಹಾಗೂ ಸಂಗಡಿಗರು ಕ್ರಾಂತಿ ಗೀತೆಗಳನ್ನು ಹಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ತಿಮ್ಮರಾಜು, ಪೋಲಿಸ್ ಸಾದಪ್ಪ, ಕರವೇ ಸ್ವಾಭಿಮಾನ ಬಣ ಉಪಾಧ್ಯಕ್ಷ ಜಬೀವುಲ್ಲಾ, ಹಾಗೂ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಸೇನೆ ಪದಾಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X