ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿರುವ ಯಂಗ್ ಇಂಡಿಯಾ ಶಾಲೆಯಲ್ಲಿ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಚತಾ ಅಭಿಯಾನ ಹಾಗೂ ಗಿಡಗಳ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಯಂಗ್ ಇಂಡಿಯಾ ಶಾಲೆಯ ಮುಖ್ಯಸ್ಥ ಡಿ.ಶಿವಣ್ಣ ಮಾತನಾಡಿ, ವಿದ್ಯಾರ್ಥಿ ದೆಸೆಯಿಂದಲೇ ಪರಿಸರವನ್ನು ಸಂರಕ್ಷಣೆ ಮಾಡುವಂತಹ ಕೆಲಸಕ್ಕೆ ಮುಂದಾಗುವಂತೆ ಗಾಂಧೀಜಿ ಕನಸು ಕಂಡಿದ್ದರು. ಹೀಗಾಗಿ ಸ್ವಚ್ಛ ಭಾರತದ ಸಂಕಲ್ಪದ ಕನಸನ್ನು ನನಸು ಮಾಡುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಗಾಂಧಿ ಜಯಂತಿ ಅಂಗವಾಗಿ ಶಾಲೆಯ ಸುತ್ತಮುತ್ತಲಿನ ಪ್ರದೇಶಗಳನ್ನು ವಿದ್ಯಾರ್ಥಿಗಳು ಸ್ವಚ್ಛಗೊಳಿಸಿದರು. ಈ ಸಂದರ್ಭದಲ್ಲಿ ಶಾಲೆಯ ಸಂಸ್ಥಾಪಕರಾದ ಪ್ರೊ.ಡಿ.ಶಿವಣ್ಣ, ಬೆಂಗಳೂರು ಸತ್ಯಸಾಯಿ ಕರ್ನಾಟಕ ಸಂಸ್ಥೆ ಹಾಗೂ ಬಾಗೇಪಲ್ಲಿ ಪಟ್ಟಣದ ಸತ್ಯಸಾಯಿ ವಿಧ್ಯಾ ನಿಕೇತನ್ ಮುಖ್ಯಸ್ಥ ವೈ.ಶ್ರೀನಿವಾಸ್ ರೆಡ್ಡಿ ನೇತೃತ್ವದಲ್ಲಿ ವಿತರಣೆ ಮಾಡಿದ್ದ ವಿವಿಧ ಜಾತಿಯ 400 ಗಿಡಗಳನ್ನು ವಿತರಿಸಲಾಯಿತು.
ಇದನ್ನು ಓದಿದ್ದೀರಾ? ‘ಅವರು ಹಿಂಗಂದ್ರು, ನೀವೇನು ಹೇಳ್ತೀರಾ’ ಅಂತ ಮೈಕ್ ಹಿಡಿಯೋದು ಪತ್ರಿಕೋದ್ಯಮವೇ: ಸಿದ್ದರಾಮಯ್ಯ ಪ್ರಶ್ನೆ
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಕಲ್ಪನಾ ಆರ್, ಶ್ರೀಲಕ್ಷ್ಮೀ ಸೇರಿದಂತೆ ಶಿಕ್ಷಕರು ಹಾಗೂ ಶಾಲೆಯ ಸಿಬ್ಬಂದಿ ಇದ್ದರು.
