ಬಾಗೇಪಲ್ಲಿ | ಬೇರೆ ಬೇರೆ ಭಾಷೆಯಿಂದ ಕನ್ನಡ ಮರೆಯಾಗುತ್ತಿರುವುದು ನೋವಿನ ಸಂಗತಿ : ಚಿನ್ನ ಕೈವಾರಮಯ್ಯ

Date:

ಕನ್ನಡ ಉಳಿಗಾಗಿ ನಾವು ಒಂದಾಗಬೇಕಿದ್ದು, ಬೇರೆ ಬೇರೆ ಭಾಷೆಯಿಂದ ಕನ್ನಡ ಮರೆಯಾಗುತ್ತಿರುವುದು ನೋವಿನ ಸಂಗತಿ. ಆದಕ್ಕಾಗಿ ಪ್ರತಿಯೊಬ್ಬರೂ ಪ್ರತಿಜ್ಞೆ ಮಾಡಿ, ಕನ್ನಡ ಉಳಿವಿಗಾಗಿ ಹೋರಾಟ ಮಾಡಬೇಕು ಎಂದು ಬಾಗೇಪಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಿನ್ನ ಕೈವಾರಮಯ್ಯ ಹೇಳಿದರು.

- Advertisement -

ಪಟ್ಟಣದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಛೇರಿಯಲ್ಲಿ ನಡೆದ 112ನೇ ಕಸಾಪ ಸಂಸ್ಥಾಪನಾ ದಿನಾಚರಣೆಕಾರ್ಯಕ್ರಮವನ್ಮು ಉದ್ಘಾಟಿಸಿ ಮಾತನಾಡಿದರು ಕರ್ನಾಟಕದ ಗಡಿ ತಾಲ್ಲೂಕು ತೆಲುಗು ಭಾಷೆಯಲ್ಲಿ ಮಾತಾಡುತ್ತಿದ್ದ ತಾಲ್ಲೂಕಿನಲ್ಲಿ ಕನ್ನಡ ಕಲಾ ಸಂಘ, ಕನ್ನಡ ಸಾಹಿತ್ಯ ಪರಿಷತ್‍ನ ಮೂಲಕ ಎಸ್.ವಿ.ಕೃಷ್ಣಮೂರ್ತಿ, ಉದಯ್‍ಕುಮಾರ್, ನಾಗರಾಜ್, ನಯಾಜ್‍ ಅಹಮದ್, ಶ್ರೀರಾಮ ಚಂದ್ರ ಮೂರ್ತಿ, ಕರವೇ ಚಂದ್ರಶೇಖರ್ ಸೇರಿದಂತೆ ಅನೇಕ ಕಲಾವಿದರು, ನಾಟಕಕಾರರು, ಸಾಹಿತಿಗಳು, ಹೋರಾಟಗಾರರು ಕನ್ನಡ ಭಾಷೆ ಉಳಿಸಿ ಬೆಳೆಸಿದ್ದಾರೆ. ಕನ್ನಡದ ನಾಟಕ ಪ್ರದರ್ಶನ ಮಾಡಿ ಜನಜಾಗೃತಿ ಮೂಡಿಸಿದ್ದಾರೆ. ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ, ಬ್ಯಾಂಕ್‌ಗಳಲ್ಲಿ ಮತ್ತು ಮನೆಗಳಲ್ಲಿ ಸಾರ್ವಜನಿಕರು ಕನ್ನಡ ಭಾಷೆಯಲ್ಲಿ ವ್ಯವಹರಿಸುವಂತೆ ಮನವಿ ಮಾಡಿದರು.

ಕನ್ನಡ ನಾಡು, ನುಡಿ, ಸಾಹಿತ್ಯ ಮತ್ತು ಸಂಸ್ಕøತಿಯ ಸಂರಕ್ಷಣೆಗಾಗಿ ಜನ್ಮತಾಳಿದ ಏಕೈಕ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು. ಸುಮಾರು ಒಂದು ಶತಮಾನಕ್ಕೂ ಅಧಿಕ ಇತಿಹಾಸ ಇರುವ ಈ ಸಂಸ್ಥೆಯು ಕೇವಲ ಒಂದು ಕಟ್ಟಡವಲ್ಲ, ಅದು ಏಳು ಕೋಟಿಕನ್ನಡಿಗರ ಭಾವನಾತ್ಮಕಕೇಂದ್ರವಾಗಿದೆ. 1915ರ ಮೇ 5ರಂದು ಸ್ಥಾಪನೆಯಾದ ಈ ಪರಿಷತ್ತು ಅಂದು ಹಾಕಿದ ಅಡಿಪಾಯ ಇಂದು ಮಹಾವೃಕ್ಷವಾಗಿ ಬೆಳೆದು ನಿಂತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಚ್.ಆರ್.ಸುಬ್ರಮಣ್ಯಂ ಮಾತನಾಡಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಈ ಸಂಸ್ಥೆಯ ಮುಖ್ಯಗುರಿಯಾಗಿದೆ.ಇದು ಪ್ರತಿ ವರ್ಷ ಅಖಿಲ ಭಾರತಕನ್ನಡ ಸಾಹಿತ್ಯ ಸಮ್ಮೇಳನವನ್ನು ನಾಡಿನ ವಿವಿಧೆಡೆ ಆಯೋಜಿಸುತ್ತದೆ. ಹೊಸ ಬರಹಗಾರರನ್ನು ಪ್ರೋತ್ಸಾಹಿಸುವುದು ಹಳೆಯ ಅಮೂಲ್ಯ ಕೃತಿಗಳನ್ನು ಮರುಮುದ್ರಣ ಮಾಡುವುದು ಮತ್ತು ಕನ್ನಡ ನಾಡು-ನುಡಿಗೆ ಸಂಬಂಧಿಸಿದ ಚಳುವಳಿಗಳಿಗೆ ಬೆಂಬಲ ನೀಡುವುದು ಪರಿಷತ್ತಿನ ಪ್ರಮುಖಕಾರ್ಯವಾಗಿದೆಎಂದರು.

ಶಿಕ್ಷಕಿ ವಿ.ಸುಕನ್ಯಾ, ನಿವೃತ್ತ ಶಿಕ್ಷಕ ಪಿ.ಜಿ.ಶಿವಶಂಕರಾಚಾರಿ ಕನ್ನಡ ಗೀತೆಗಳನ್ನು ಮತ್ತು ಚನ್ನರಾಯಪ್ಪ ಕ್ರಾಂತಿಗೀತೆ ಹಾಡಿದರು.

ಇದನ್ನು ಓದಿದ್ದೀರಾ..? ಚಿಂತಾಮಣಿ | ಕಾಗತಿ ಗ್ರಾಮದಲ್ಲಿ ರೈತರಿಗೆ ಒಂದು ದಿನದ ತೋಟಗಾರಿಕೆ ತರಬೇತಿ ಕಾರ್ಯಕ್ರಮ

ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಲಿಭಾಷ, ಪರಿಷತ್‍ನ ಗೌರವ ಕಾರ್ಯದರ್ಶಿ ಬಾಣಾಲಪಲ್ಲಿ ಶ್ರೀನಿವಾಸ್, ಈಶ್ವರಪ್ಪ, ಚೌಡಪ್ಪ, ಶ್ರೀನಿವಾಸತಂತ್ರಿ, ರಾಜರಾಜೇಶ್ವರಿ, ಕರವೇ ಜಬೀವುಲ್ಲಾ, ಬಾಬಾಜಾನ್, ಸಾಯಿಜ್ಯೋತಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...