ಬಾಗೇಪಲ್ಲಿ | ಶಿಕ್ಷಕಿ ವಿ.ಸುಕನ್ಯಾ ರಚಿಸಿದ ಸಪ್ತವರ್ಣ ಕವನಸಂಕಲನ ಬಿಡುಗಡೆ ಕಾರ್ಯಕ್ರಮ

Date:

ಪಟ್ಟಣದ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಸರ್ಕಾರಿ ಬಾಲಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ವಿ.ಸುಕನ್ಯಾ ರಚಿಸಿದ ‘ಸಪ್ತವರ್ಣ’ ಕವನಸಂಕಲನ ಬಿಡುಗಡೆ ಕಾರ್ಯಕ್ರಮ ನಡೆಯಿತು.

- Advertisement -

ತಾಲ್ಲೂಕು ಕ್ಷೇತ್ರಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ ಮಾತನಾಡಿ, ಕನ್ನಡ ಸಾಹಿತ್ಯದ ಮಹತ್ವ, ಮಾನವೀಯತೆಯ ಮುಖವನ್ನು ತಿಳಿಸುತ್ತದೆ. ಸಾಹಿತ್ಯ ಮತ್ತು ಸಾಹಿತಿಗಳ ಬರಹಗಳು ಸಮಾಜ ಮುಖಿ ಆಗಿರಬೇಕು ಮತ್ತು ಜನರ ಕಷ್ಟಗಳಿಗೆ ಧ್ವನಿಯಾಗಬೇಕು. ಸಾಹಿತ್ಯದಲ್ಲಿ ಕನ್ನಡ ಭಾಷೆಗೆ ತನ್ನದೇ ಸ್ಥಾನ ಪಡೆದುಕೊಂಡಿದೆ. ಸಾಹಿತ್ಯ, ಸಂಸ್ಕೃತಿ, ಕಲೆಯನ್ನು ಹೆಚ್ಚಿಸುವ ಕನ್ನಡದ ಕಾರ್ಯಕ್ರಮಗಳು ನಿರಂತರವಾಗಿ ಆಗಬೇಕು. ಸಪ್ತವರ್ಣ ಕವನ ಸಂಕಲನದಲ್ಲಿ ವಿ.ಸುಕನ್ಯಾ ರಚಿಸಿದ ಕವನಗಳು ಸಮಾಜದಲ್ಲಿನ ಏಳು-ಬೀಳುಗಳ ಮತ್ತು ವಾಸ್ತವಾಂಶಗಳು ಪ್ರಕಟಿಸಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ವಿ.ವೆಂಕಟಶಿವಾರೆಡ್ಡಿ ಮಾತನಾಡಿ, ಕನ್ನಡ ಸಾಂಸ್ಕೃತಿಕ, ಸಾಹಿತ್ಯವನ್ನು ಪ್ರತಿಯೊಬ್ಬರು ಓದಬೇಕು. ಶಿಕ್ಷಕರು ಸಾಹಿತ್ಯ ಬರವಣಿಗೆಯಲ್ಲಿ ತೊಡಗಿರುವುದು ಪ್ರಶಂಸನೀಯ. ವಿಶ್ವವಿದ್ಯಾಲಯಗಳಲ್ಲಿ ಸಾಹಿತ್ಯ ಕ್ಷೇತ್ರವನ್ನು ಬೆಳಸಬೇಕು. ಕನ್ನಡ ಸಾಹಿತ್ಯ ಸಂಪದ್ಭರಿತವಾಗಿದೆ. ಜನಪರ ಸಾಹಿತ್ಯದ ಅಗತ್ಯತೆ ಇದೆ. ಈ ಸಾಹಿತ್ಯವು ದಲಿತ, ದಮನಿತರ, ಕೃಷಿಕರ, ಕಾರ್ಮಿಕರ, ಮಹಿಳಾ ಪರವಾಗಿ ರಚನೆ ಮಾಡಿದರೆ, ಸಮಾಜದ ದಿಕ್ಕನ್ನು ಬದಲಿಸಲಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್‌ನ ತಾಲ್ಲೂಕು ಅಧ್ಯಕ್ಷ ಡಾ.ಚಿನ್ನಕೈವಾರಮಯ್ಯ ಮಾತನಾಡಿ, ತಾಲ್ಲೂಕಿನಲ್ಲಿ ಕವಿ, ಸಾಹಿತಿಗಳು, ಚುಟುಕುಸಾಹಿತಿಗಳು ತಮ್ಮದೇ ಆದ ರೀತಿಯಲ್ಲಿ ಕವಿತೆಗಳು, ಕವನಗಳು ರಚನೆ ಮಾಡಿದ್ದಾರೆ. ಕವನಗಳು ಸಮಾಜ ಮುಖಿಯಾಗಿದೆ. ಸಾಹಿತ್ಯ ಮತ್ತು ಸಾಹಿತಿಗಳು ಎರಡು ಕಣ್ಣುಗಳು ಇದ್ದಂತೆ. ಸಾಹಿತಿಗಳು ಸಾಹಿತ್ಯ ರಚನೆ ಮಾಡುವ ಮೂಲಕ ಸಮಾಜವನ್ನು ಕಟ್ಟುವಂತಹ ಕೆಲಸ ಮಾಡಬೇಕಾಗಿದೆ. ಸಮಾಜದಲ್ಲಿನ ಅನಿಷ್ಠಪದ್ಧತಿಗಳು, ಅನಾಚಾರ, ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗಗಳ ಮತ್ತು ಶೋಷಿತರ ಪರ ಧ್ವನಿಯಾಗಬೇಕು. ಗ್ರಾಮೀಣ ಭಾಗಗಳಲ್ಲಿ ಕನ್ನಡ ಭಾಷೆ ಮಾತನಾಡುವ ಮೂಲಕ ಕನ್ನಡವನ್ನು ಉಳಿಸಿ ಬೆಳಿಸಬೇಕು. ಕನ್ನಡ ಸರ್ಕಾರಿ ಶಾಲೆಗಳು ಉಳಿಯಬೇಕು ಎಂದು ತಿಳಿಸಿದರು.

ಶಿಕ್ಷಕಿ ವಿ.ಸುಕನ್ಯಾ ಮಾತನಾಡಿ, ಸಪ್ತವರ್ಣ ಕವನಸಂಕಲನ ರಚಿಸಲು ಅನೇಕರ ಮಾರ್ಗದರ್ಶನದಿಂದ ರಚಿಸಲಾಗಿದೆ. ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ಮಕ್ಕಳಿಗೆ ಸಾಹಿತ್ಯ, ಸಂಗೀತ ಕಲಿಸುತ್ತಿದ್ದೇನೆ. ಪ್ರಾಥಮಿಕ ಶಿಕ್ಷಣದಿಂದಲೇ ಮಕ್ಕಳು ಸಾಹಿತ್ಯ, ಸಂಗೀತ ಕಲಿಯಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ದೇವನಹಳ್ಳಿ ಕನ್ನಡ ಉಪನ್ಯಾಸಕಿ ಎಲ್.ಗೀತಾಲಕ್ಷ್ಮೀ ಆಂಧ್ರಪ್ರದೇಶದ ಜಾನಪದ ಅಕಾಡೆಮಿ ಅಧ್ಯಕ್ಷ ಪೊಟ್ಲೂರಿಹರಿಕೃಷ್ಣರವರು ‘ಸಪ್ತವರ್ಣ’ ಕವನಸಂಕಲನದ ಬಗ್ಗೆ ವಿಶ್ಲೇಷಿಸಿದರು.

ಇದನ್ನು ಓದಿದ್ದೀರಾ..?ಚಿಂತಾಮಣಿ | ಓವರ್ ಟೇಕ್ ಮಾಡಲು ಹೋಗಿ ಮರಕ್ಕೆ ಗುದ್ದಿದ ಪೆಟ್ರೋಲ್ ತುಂಬಿದ ಲಾರಿ.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ನಿಕಟಪೂರ್ವ ಅಧ್ಯಕ್ಷ ಎ.ಜಿ.ಸುಧಾಕರ್, ಕಾರ್ಯದರ್ಶಿ ಬಾಣಾಲಪಲ್ಲಿಶ್ರೀನಿವಾಸ್, ನಿವೃತ್ತ ತಹಶೀಲ್ದಾರ್ ಎಸ್.ಮುನಿರಾಮಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಪಿ.ವೆಂಕಟರವಣಪ್ಪ, ನಿವೃತ್ತ ಶಿಕ್ಷಕರಾದ ವೀರಾಚಾರಿ, ಪಿ.ಜಿ.ಶಿವಶಂಕರಚಾರಿ, ಉಪನ್ಯಾಸಕ ಸೀನೇನಾಯಕ್, ಶಿಕ್ಷಕರಾದ ಎಚ್.ಎಸ್.ಸುಬ್ರಮಣ್ಯಂ, ಕೆಪಿಆರ್‌ಎಸ್‌ನ ಜಿಲ್ಲಾ ಉಪಾಧ್ಯಕ್ಷ ಚನ್ನರಾಯಪ್ಪ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...