ಬಾಗೇಪಲ್ಲಿ: ಶ್ರದ್ಧಾ ಭಕ್ತಿಯಿಂದ ಮಹಾಶಿವರಾತ್ರಿ ಆಚರಣೆ:ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ

Date:

ಬಾಗೇಪಲ್ಲಿ:ತಾಲ್ಲೂಕಿನಾದ್ಯಂತ ಭಾನುವಾರ ಮಹಾಶಿವರಾತ್ರಿ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಶಿವರಾತ್ರಿ ಹಬ್ಬದ ಅಂಗವಾಗಿ ಭಕ್ತರು ಮುಂಜಾನೆಯಿಂದಲೇ ಶಿವನ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ತಾಲೂಕಿನಾದ್ಯಂತ ವಿವಿಧ ಶಿವನ ದೇವಾಲಯಗಳಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು ಶಿವನ ದೇವಾಲಯಗಳಲ್ಲಿ ಜನರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಮಾಡಿದರು ಪಟ್ಟಣದ ಜಡಲ ಭೈರವೇಶ್ವರ ದೇವಸ್ಥಾನ ಪರಗೋಡಿನ ಪಂಚಲಿಂಗ ದೇವಾಲಯ ಪಾತಪಾಳ್ಯ ಹಿರೇಣ್ಯೇಶ್ವರ ದೇವಾಲಯ ನಗರ್ಲ ಗ್ರಾಮದ ಬಯಲು ಆಂಜನೇಯ ದೇವಸ್ಥಾನ ಬಾಗೇಪಲ್ಲಿ ಪಟ್ಟಣದ ಕೊಡಕೊಂಡೆ ರಸ್ತೆಯಲ್ಲಿರುವ ಶಿವನ ದೇವಾಲಯ ಗೂಳೂರು ನಿಡುಮಾಮಿಡಿ ಮಠ ಪೀಠದಲ್ಲಿ ಶಿವನ ದೇವಾಲಯದಲ್ಲಿ
ಮಹಾರುದ್ರಾಭಿಷೇಕ ಹಾಲಭಿಷೇಕ ಬಿಲ್ವಾರ್ಚನೆ ನಿವೇದನೆ ದೂಪದಾರತಿ ತುಪ್ಪದಾರತಿ ಹೂವಿನ ಅಲಂಕಾರ ಮಹಾಮಂಗಳಾರತಿ ನಡೆಯಿತು.

ಪಟ್ಟಣದ ಭೈರವೇಶ್ವರ ದೇವಾಲಯ ಹಾಗೂ ಪರಗೋಡು ಪಂಚಲಿಂಗ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಮತ್ತು ಅಲಂಕಾರ ಮಾಡಲಾಗಿತ್ತು ದೇವರಿಗೆ ರುದ್ರಾಭಿಷೇಕ ಬಿಲ್ವಾರ್ಚನೆ ನಡೆಸಲಾಯಿತು ಜಾಗರಣೆ ಅಂಗವಾಗಿ ಅಹೋರಾತ್ರಿ ಭಜನೆ ಹಮ್ಮಿಕೊಳ್ಳಲಾಗಿದೆ.

- Advertisement -

ಶಿವನ ದೇವಾಲಯಗಳಲ್ಲಿ ಭಕ್ತರು ಬೆಳಿಗ್ಗೆಯಿಂದಲೇ ಪೂಜೆ ಸಲ್ಲಿಸುತ್ತಿದ್ದರು ಸಂಜೆ ನಂತರ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ದೇವರ ದರ್ಶನ ಪಡೆದರು ಸಂಜೆಯ ನಂತರ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪ್ರಸಾದ ವಿನಿಯೋಗ ಜರುಗಿತು ಭಕ್ತರಿಗೆ ದರ್ಶನ ಅವಕಾಶ ಕಲ್ಪಿಸಲಾಗಿತ್ತು ಜಾಗರಣೆ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ವಿವಿಧೆಡೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿತ್ತು ಶಿವಮಂತ್ರ ಹಾಗೂ ಶಿವನ ಕುರಿತಾದ ಭಕ್ತಿಗೀತೆ ಗಾಯನ ನಡೆಯಿತು.ಸಂಜೆಯ ನಂತರ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪ್ರಸಾದ ವಿನಿಯೋಗ ಜರುಗಿತು. ಭಕ್ತರಿಗೆ ದರ್ಶನ ಅವಕಾಶ ಕಲ್ಪಿಸಲಾಗಿತ್ತು ದೇವಸ್ಥಾನ ಹಾಗೂ ವಿವಿಧೆಡೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿತ್ತು.

ಇದನ್ನು ಓದಿದ್ದೀರಾ..?ಬಜೆಟ್ ಅಧಿವೇಶನದಲ್ಲಿ ಖಾಲಿ ಹುದ್ದೆಗಳ ಭರ್ತಿ ಚರ್ಚೆಗೆ ಡಾ.ಕೆ.ನಾಗರಾಜ್ ಒತ್ತಾಯ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪ್ರಮುಖ ದೇವಾಲಯಗಳಲ್ಲಿ ರಾತ್ರಿ ಜಾಗರಣೆಗೆ ವ್ಯವಸ್ಥೆ ಮಾಡಲಾಗಿತ್ತು. ಜಾಗರಣೆ ಅಂಗವಾಗಿ ನಾಟಕೋತ್ಸವ, ಸಂಗೀತೋತ್ಸವ, ಕಾವ್ಯೋತ್ಸವ ಆಯೋಜಿಸಲಾಗಿತ್ತು. ದೀಪೋತ್ಸವ ವಿಶೇಷ ಮೆರುಗು ನೀಡಿತು. ಕತ್ತಲು ಆವರಿಸುತ್ತಿದ್ದಂತೆ ಶಿವನ ಆರಾಧನೆಯ ತಾಣಗಳು ವಿದ್ಯುತ್‌ ದೀಪಗಳಿಂದ ಕಂಗೊಳಿಸಿದವು. ತಳಿರು, ತೋರಣಗಳು ಮಹಾಶಿವರಾತ್ರಿ ಮೆರುಗು ಹೆಚ್ಚಿಸಿದವು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...