ಬಾಗೇಪಲ್ಲಿ | ಶಾಲಾ-ಕಾಲೇಜು ಮೈದಾನದಲ್ಲಿ ಗುರುಭವನ ನಿರ್ಮಾಣಕ್ಕೆ ಆಕ್ಷೇಪ

Date:

Advertisements

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಗುರುಭವನ ನಿರ್ಮಾಣ ಯೋಜನೆಯನ್ನು ಕೈಬಿಟ್ಟು ಬೇರೆ ಸ್ಥಳದಲ್ಲಿ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ತಾಲೂಕು ಎಸ್‌ಎಫ್‌ಐ ಮತ್ತು ಡಿವೈಎಫ್‌ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾ ಎಸ್‌ಎಫ್‌ಐ ಕಾರ್ಯದರ್ಶಿ ಸೋಮಶೇಖರ್, “ಬಾಗೇಪಲ್ಲಿ ಪಟ್ಟಣದಲ್ಲಿ ಸರಕಾರಿ ಬಾಲಕರ ಪ್ರೌಢಶಾಲೆ, ಸರಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿದ್ದು, ಮೂರು ಸಂಸ್ಥೆಗಳಿಗೆ ಇರುವ ಏಕೈಕ ಅಟದ ಮೈದಾನ ಸರಕಾರಿ ಜೂನಿಯರ್ ಕಾಲೇಜ್ ಮೈದಾನವಾಗಿದೆ. ಹಲವಾರು ವರ್ಷಗಳಿಂದ ಕೆಲವರು ಒತ್ತುವರಿ ಮಾಡಿಕೊಂಡಿರುವ ಸದರಿ ಮೈದಾನದ ವಿಸ್ತೀರ್ಣ ಕಡಿಮೆಯಾಗಿದೆ. ಈ ಮೈದಾನದಲ್ಲಿ ಗುರುಭವನ ನಿರ್ಮಾಣ ಮಾಡಿದರೆ ಮತ್ತಷ್ಟು ಮೈದಾನ ಕಿರುದಾಗುತ್ತದೆ. ಬಡ ಮಕ್ಕಳಿಗೆ ಇರುವ ಈ ಮೈದಾನದಲ್ಲಿ ಗುರುಭವನ ನಿರ್ಮಾಣ ಮಾಡಲು ಹೊರಟಿವುದು ಖಂಡನೀಯವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕೈಬಿಡಬೇಕಾಗಿದೆ” ಎಂದು ಆಗ್ರಹಿಸಿದರು.

“1970ರಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆವತಿಯಿಂದ ಹಣ ಪಾವತಿಸಿ ಮಕ್ಕಳಿಗೆ ಕ್ರೀಡೆ ಚಟುವಟಿಕೆಗಳಿಗೆ ಉಪಯೋಗವಾಗಲು ಈ ಮೈದಾನವನ್ನು ನಿರ್ಮಿಸಲಾಗಿದೆ. ಈ ಮೂರು ಸಂಸ್ಥೆಗಳಿಂದ ಕನಿಷ್ಠ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಮತ್ತು ಪಟ್ಟಣದ ಯುವ ಜನರು ಕ್ರಿಕೆಟ್, ವಾಲಿಬಾಲ್ ಇತರೆ ಕ್ರೀಡಾ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಈ ಮೂರು ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಹುತೇಕ ಮಕ್ಕಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಜಾತಿಗಳ ಮಕ್ಕಳಾಗಿದ್ದಾರೆ. ಅವರ ಕ್ರೀಡಾ ಅಭ್ಯಾಸಕ್ಕೆ ಸಂಚಕಾರವಾಗುವ ಯೋಜನೆ ಗುರುಭವನ ಯೋಜನೆಯಾಗಿದೆ. ಆದ್ದರಿಂದ ಮೈದಾನವನ್ನು ಕೇವಲ ಕ್ರೀಡಾ ಚಟುವಟಿಕೆಗಳಿಗೆ ಮೀಸಲಿಡಬೇಕೆಂದು ಆಗ್ರಹಿಸಿದ ಅವರು ಶಿಕ್ಷಕ ವೃಂದಕ್ಕೆ ಗುರುಭವನ ಅಗತ್ಯವಿರುವುದರಿಂದ ಗುರುಭವನವನ್ನು ಶಾಲಾ-ಕಾಲೇಜು ಮೈದಾನವನ್ನು ಬಿಟ್ಟು ಸರ್ಕಾರಿ ಬೇರೆ ಭೂಮಿಯಲ್ಲಿ ನಿರ್ಮಿಸಬೇಕು” ಎಂದು ಮನವಿ ಮಾಡಿದರು.

“ಒಂದು ವೇಳೆ ಇದೇ ಸ್ಥಳದಲ್ಲಿ ಗುರುಭವನ ನಿರ್ಮಾಣ ಮಾಡಲು ಮುಂದಾದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ಹಾಗೂ ರೈತ ಸಂಘಟನೆಗಳ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಒಳ ಮೀಸಲಾತಿ: ರಾಜ್ಯ ಸರ್ಕಾರದ ತೀರ್ಮಾನ ಸ್ವಾಗತಾರ್ಹ; ಪಟ್ರೇನಹಳ್ಳಿ ಕೃಷ್ಣ

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ ಮಾತನಾಡಿ, “ಇದೇ ಮೈದಾನದಲ್ಲಿ ಗುರುಭವನ ನಿರ್ಮಾಣ ಮಾಡುವುದರಿಂದ ಕ್ರೀಡಾ ಚಟುವಟಿಕೆಗಳಿಗೆ ತೊಂದರೆಯಾಗುವುದಿಲ್ಲ. ವರ್ಷಕ್ಕೆ ಒಂದು ಸಲ ಶಿಕ್ಷಕರ ದಿನಾಚರಣೆ ಆಚರಣೆ ಮಾಡಲಾಗುತ್ತದೆ. ಉಳಿದ ಅವಧಿಯಲ್ಲಿ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಗುರುಭವನವನ್ನು ಪಟ್ಟಣದ 1-2ಕೀ.ಮಿ ದೂರ ನಿರ್ಮಾಣ ಮಾಡುವುದರಿಂದ ಮಕ್ಕಳನ್ನು ಗುರುಭವನಕ್ಕೆ ಕಳುಹಿಸಿ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲು ಕಷ್ಟವಾಗುತ್ತದೆ” ಎಂದರು.

ಈ ಸಂದರ್ಭದಲ್ಲಿ ಇಲಾಖೆ ತಾಲೂಕು ಸಮನ್ವಯ ಅಧಿಕಾರಿ ಆರ್.ವೆಂಕಟರಾಮಪ್ಪ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಹನುಮಂತರೆಡ್ಡಿ, ಸಾಕ್ಷರತಾ ಸಮನ್ವಯ ಅಧಿಕಾರಿ ಎನ್.ಶಿವಪ್ಪ, ಎಸ್.ಲಕ್ಷ್ಮಣ ರೆಡ್ಡಿ, ರವೀಂದ್ರ ಚಂದ್ರ, ಪುಶವಂತೆ ಎಸ್, ವಿಷ್ಟು ವರ್ದನ್, ರಾಮಂದ್ರ, ರಾಮಾಂಜಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X