ಬಾಗೇಪಲ್ಲಿ | ಮೇ 15 ರಂದು ಗ್ರಾಮ ಪಂಚಾಯತಿ ಗಳ ವ್ಯಾಪ್ತಿಯಲ್ಲಿವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ

Date:

ಮೇ 15 ರಂದು ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ 157 ಗ್ರಾಮ ಪಂಚಾಯಿತಿಗಳ ಮುಂದೆ ಕೃಷಿ ಕೂಲಿ ಕಾರ್ಮಿಕರ, ರೈತ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಎಸ್.ಎಫ್.ಐ.ಮುಖಂಡ ಸೋಮಶೇಖರ್ ಹೇಳಿದರು.

- Advertisement -

ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಬಾಗೇಪಲ್ಲಿ ತಾಲ್ಲೂಕು ಗಡಿ ಭಾಗದಲ್ಲಿ ಮನರೇಗಾ ,ಮನೆ, ನಿವೇಶನ, ಕಾರ್ಮಿಕ ಕಾನೂನು ರದ್ದು,4 ಸಂಹಿತೆಗಳು ಹಾಗೂ ಮಸಣ ಕಾರ್ಮಿಕರಿಗೆ ಶವ ಸಂಸ್ಕಾರ ಕೂಲಿ, ಮಾಶಾಸನ ಸೇರಿದಂತೆ ಬೇಡಿಕೆಗಳ ಈಡೇರಿಕೆಗಾಗಿ ಪಂಚಾಯತಿ ಗಳ ಮುಂದೆ ಪ್ರತಿಭಟನೆ ಮಾಡಲಾಗುತ್ತದೆ ಆದ್ದರಿಂದ ರೈತರು, ಕೂಲಿ ಕಾರ್ಮಿಕರು, ಮಹಿಳೆಯರು, ಸಾರ್ವಜನಿಕರು ಈ ಪ್ರತಿಭಟನೆ ಯಲ್ಲಿ ಹೆಚ್ಚಿನ ಸಂಖ್ಯೆಯ ಭಾಗವಹಿ ಯಶಸ್ವಿ ಮಾಡಬೇಕು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ವಿ.ಬಿ.ಜಿ.ರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳು ಹಾಗೂ ವಿವಿಧ ಸಂಘಟನೆಗಳು ಮೇ 15 ರಂದು ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರತಿಭಟನೆ ಗೆ ಕರೆ ನೋಡಿದ್ದೇವೆ ಎಂದು ಎಸ್. ಎಫ್.ಐ.ಮುಖಂಡ ಸೋಮಶೇಖರ್ ತಿಳಿಸಿದರು.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕನಿಷ್ಠ 200 ದಿನಗಳ ಕೆಲಸ ಮತ್ತು 700 ರೂ.ಗಳ ಕನಿಷ್ಠ ವೇತನದ ಖಾತರಿಯೊಂದಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಬಲವರ್ಧಿತ ಆವೃತ್ತಿ ಜಾರಿ ಮಾಡಬೇಕು ಎಂದು ಹೇಳಿದರು.

ಗ್ರಾಮೀಣ ಅಭಿವೃದ್ಧಿಯ ಗುರಿಯೊಂದಿಗೆ ಯುಪಿಎ ಸರಕಾರ ಮನರೇಗಾ ಯೋಜನೆಯನ್ನು ಜಾರಿಗೆ ತಂದಿತ್ತು ಗ್ರಾಮಗಳಿಗೆ ಅಗತ್ಯವಾದ ಕಾಮಗಾರಿಗಳನ್ನು ಆಯಾ ಗ್ರಾಮಗಳೇ ನಿರ್ಧರಿಸುವಂತೆ ಅಧಿಕಾರವೂ ನೀಡಲಾಗಿತ್ತು ಆದರೆ ಎನ್‌ಡಿಎ ಸರಕಾರ ಮನರೇಗಾ ಯೋಜನೆಯ ಮೂಲ ಉದ್ದೇಶಗಳನ್ನು ಕೈಬಿಟ್ಟು ಗ್ರಾಮಗಳಿಗೆ ಬೇಕಾದ ಕಾಮಗಾರಿಗಳನ್ನು ದೆಹಲಿಯಲ್ಲಿ ಕುಳಿತವರು ನಿರ್ಧರಿಸುವಂತಾಗಿದೆ. ಇದರಿಂದ ಗ್ರಾಮಗಳ ಅಗತ್ಯಗಳು ಹಾಗೂ ಆದ್ಯತೆಗಳಿಗೆ ಯಾವುದೇ ಅವಕಾಶ ಉಳಿದಿಲ್ಲ ಎಂದು ಆರೋಪಿಸಿದರು. ಆದ್ದರಿಂದ ಈ ಭಾಗದ ರೈತರಿಗೆ ಬಡ ಕೂಲಿ ಕಾರ್ಮಿಕರಿಗೆ ಭೂಮಿ, ನಿವೇಶನ, ಮನೆ ಹಾಗೂ ಉದ್ಯೋಗ ಭದ್ರತೆ ಒದಗಿಸಬೇಕು ಎಂದು ಹೇಳಿದರು.

ಡಿ.ಟಿ.ಮುನಿ ಸ್ವಾಮಿ ಮಾತನಾಡಿ ಮನಮೋಹನ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದು, ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಬಲ ನೀಡಿದರು.

ಮನರೇಗಾ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ಯೋಜನೆ. ದಲಿತರು, ಮಹಿಳೆಯರು, ರೈತರಿಗೆ ಉದ್ಯೋಗ ಒದಗಿಸುವುದು ಯೋಜನೆಯ ಉದ್ದೇಶ. ಇದರಿಂದ ವರ್ಷದಲ್ಲಿ ನೂರು ದಿನ ಕಡ್ಡಾಯವಾಗಿ ಉದ್ಯೋಗ ಸಿಗುತ್ತಿತ್ತು. ಈಗ ಈ ಉದ್ಯೋಗದ ಹಕ್ಕನ್ನೇ ಕಸಿಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಕೈ ಹಾಕಿದೆ.

ಮಹಾತ್ಮ ಗಾಂಧಿಯವರ ಹೆಸರು ತೆಗೆದು ಗೊಂದಲ ಸೃಷ್ಟಿ ಮಾಡುವ ಹುನ್ನಾರ ಇದಾಗಿದೆ. ಈ ಮೂಲಕ ಮತ್ತೆ ಗಾಂಧಿಯವರನ್ನು ಕೊಲೆ ಮಾಡಲಾಗಿದೆ. ಯುಪಿಎ ಜಾರಿಗೆ ತಂದ ಕಾರ್ಯಕ್ರಮವನ್ನು ರದ್ದು ಮಾಡಿ ಉದ್ಯೋಗದ ಹಕ್ಕು ಕಸಿದುಕೊಂಡಿರುವುದು ಸಂವಿಧಾನ ಬಾಹಿರ ಕೆಲಸ.

28 ಕೋಟಿ ಬಡಜನರಿಗೆ ಇದರಿಂದ ಅನ್ಯಾಯವಾಗಿದೆ. ನಾವು ಈ ಅನ್ಯಾಯದ ವಿರುದ್ಧ ತೀವ್ರವಾದ ಹೋರಾಟ ಮಾಡುತ್ತೇವೆ. ಬಡವರ ಉದ್ಯೋಗದ ಹಕ್ಕು ಕಸಿದುಕೊಂಡವರಿಗೆ ಪಾಠ ಕಲಿಸಬೇಕು. ಬಡವರು ಆರ್ಥಿಕವಾಗಿ ಸಬಲರಾಗುವುದನ್ನು ಸಂಘ ಪರಿವಾರ ಸಹಿಸುವುದಿಲ್ಲ.

ಮನರೇಗಾ ಕಾಯಿದೆ ಮತ್ತೆ ಜಾರಿ ಅಗುವ ರೀತಿ ಜನಾಂದೋಲನ ನಡೆಸಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ಸದಸ್ಯರು ಮನರೇಗಾದಲ್ಲಿ ಕೆಲಸ ಮಾಡುತ್ತಿರುವವರನ್ನ ತಲುಪಬೇಕಾಗಿದೆ. ಈ ವಿಷಯದ ಬಗ್ಗೆ ಜನರನ್ನೂ ಜಾಗೃತಗೊಳಿಸುವ ಕೆಲಸವನ್ನು ಶಾಸಕರು ಮಾಡಬೇಕು. ನಮ್ಮ ಹೋರಾಟ ಜನಾಂದೋಲನವಾಗಿ ರೂಪುಗೊಳ್ಳುವಂತಹ ವಾತಾವರಣ ನಿರ್ಮಾಣ ಮಾಡಿ, ಮನರೇಗಾ ಉಳಿಸಬೇಕಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಚಿಂತಾಮಣಿ | ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಬಲಿ:ಚಿಂತಾಮಣಿಯಲ್ಲಿ ತಡರಾತ್ರಿ ಹೈಡ್ರಾಮಾ! – ಈ ದಿನ.ಕಾಮ್

ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡ ಜಿ.ಕೃಷ್ಣಪ್ಪ, ಮುಸ್ತಫಾ, ವಾಲ್ಮೀಕಿ ಅಶ್ವತ್ಥಪ್ಪ,ಹಾಗೂ ಜಿ.ಕೃಷ್ಣಪ್ಪ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಮಾನವೀಯತೆಯೇ ಎಲ್ಲ ಧರ್ಮಗಳ ಸಾರ: ಸಿದ್ದರಾಮಯ್ಯ

ಪ್ರವಾದಿ ಮುಹಮ್ಮದ್‌(ಸ) ಅವರು ಯಾವುದೇ ಒಂದು ಧರ್ಮ ಅಥವಾ ಸಮುದಾಯಕ್ಕೆ ಮಾತ್ರ...

ಕೋಲಾರ | ಮರಗಳ ಹರಾಜು ಅಕ್ರಮ, ತನಿಖೆಗೆ ವಿಶೇಷ ತಂಡ ರಚಿಸಲು ರೈತ ಸಂಘ ಆಗ್ರಹ

ಕೋಲಾರ–ವೇಮಗಲ್ ರಸ್ತೆ ವಿಸ್ತರಣೆಗೆ ಮರಗಳ ತೆರವು ಸಂಬಂಧ ನಡೆದಿರುವ ಹರಾಜು ಪ್ರಕ್ರಿಯೆಯಲ್ಲಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...