ಬಾಗೇಪಲ್ಲಿ | ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ:- ಚೇತನ್ ನಾಯ್ಡು ಫೌಂಡೇಷನ್ ಅಧ್ಯಕ್ಷ ಬಿ.ಆರ್.ನರಸಿಂಹ ನಾಯ್ಡು

Date:

ಗಿಡ ನೆಟ್ಟು ಪ್ರಕೃತಿಯ ಋಣ ತೀರಿಸಿ ಪ್ರಕೃತಿಯಿಂದ ಹಲವು ರೀತಿಯ ಪ್ರಯೋಜನಗಳನ್ನು ಪಡೆಯುವ ನಾವು ಗಿಡಗಳನ್ನು ನೆಟ್ಟು ಬೆಳೆಸುವುದರ ಮೂಲಕ ಪ್ರಕೃತಿಯ ಋಣವನ್ನು ತೀರಿಸಬೇಕಿದೆ ಎಂದು ಮಾಜಿ ಪುರಸಭೆ ಅದ್ಯಕ್ಷ ಹಾಗೂ ಜೆ.ಡಿ.ಎಸ್.ಪಕ್ಷದ ಮುಖಂಡ ಬಿ.ಆರ್.ನರಸಿಂಹ ನಾಯ್ಡು ತಿಳಿಸಿದರು.

- Advertisement -

ಪಟ್ಟಣದಲ್ಲಿ ಮಂಗಳವಾರ ಪುರಸಭೆ ಮುಂದೆ ಡಿ.ವಿ.ಜಿ. ಮುಖ್ಯ ರಸ್ತೆಯ ಡಿವೈಡರ್ ಮೇಲೆ ತಮ್ಮ ಚೇತನ್ ನಾಯ್ಡು ಫೌಂಡೇಷನ್ ವತಿಯಿಂದ ಗಿಡ ನೆಟ್ಟು ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಬರ ಮುಕ್ತ ತಾಲ್ಲೂಕುಗಾಗಿ ಹೆಚ್ಚಿನ ಪ್ರಮಾಣದಲ್ಲಿ ಗಿಡಗಳನ್ನು ನೆಟ್ಟು, ಅವುಗಳನ್ನು ಉಳಿಸಿ, ಬೆಳೆಸುವ ಮೂಲಕ ಪ್ರತಿಯೊಬ್ಬರೂ ಪರಿಸರ ಪ್ರಜ್ಞೆ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಬಯಲು ಸೀಮೆಯಲ್ಲಿ ಮರಗಿಡಗಳ ಕೊರತೆಯಿಂದ ಮಳೆಯ ಅಭಾವ ಪ್ರತಿ ವರ್ಷ ಉಂಟಾಗುತ್ತಿದೆ. ಗಿಡಗಳನ್ನು ನೆಟ್ಟು, ಪರಿಸರ ಉಳಿಸುವ ಕಾರ್ಯ ಕೇವಲ ಸರ್ಕಾರದ ಹೊಣೆಗಾರಿಕೆಯಲ್ಲ. ಇದಕ್ಕೆ ಸಾರ್ವಜನಿಕರು, ಸಂಘ,ಸಂಸ್ಥೆಗಳ ಸಕ್ರಿಯ ಪಾಲ್ಗೊಳ್ಳುವಿಕೆಯೂ ಮುಖ್ಯವಾಗಿದೆ ಎಂದರು.

ಅಂತರ್ಜಲ ಮಟ್ಟ ಹೆಚ್ಚಿಸಲು ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಳ್ಳಿ. ಸಾರ್ವಜನಿಕರು ಗಿಡ ನೆಟ್ಟಲ್ಲಿ ವೈಯಕ್ತಿಕ ಲಾಭವೇನು? ಎಂಬ ಮನೋಭಾವ ಸರಿಯಲ್ಲ. ದೂರದೃಷ್ಟಿಯ ಚಿಂತನೆ ಎಲ್ಲರಲ್ಲೂ ಅಗತ್ಯ. ಸಾರ್ವಜನಿಕರು ಪರಿಸರ ಪ್ರಜ್ಞೆ ಮೂಡಿಸುವ ಕಾರ್ಯ ಆಗಬೇಕಿದೆ’ ಎಂದರು.

ಇದನ್ನು ಓದಿದ್ದೀರಾ..?ಕೋಲಾರ | ಟಿ.ಚನ್ನಯ್ಯ ಜನ್ಮ ಶತಮಾನೋತ್ಸವಕ್ಕೆ ಮಹಾನುಭಾವನಿಂದ ಅಡ್ಡಿ: ಎಸ್.ಎನ್. ನಾರಾಯಣಸ್ವಾಮಿ

ಈ ಸಂದರ್ಭದಲ್ಲಿ ಮಾಜಿ ಪುರಸಭೆ ಉಪಾಧ್ಯಕ್ಷೆ ಸುಜಾತಾ ನರಸಿಂಹ ನಾಯ್ಡು, ಮಾಜಿ ಪುರಸಭೆ ಸದಸ್ಯರಾದ ನರಸಿಂಹ ಮೂರ್ತಿ, ಜೆ.ಡಿ.ಎಸ್ ಪಕ್ಷದ ಮುಖಂಡ ಸೂರ್ಯನಾರಾಯಣ ರೆಡ್ಡಿ, ಪುರಸಭೆ ಪೌರ ಕಾರ್ಮಿಕರು, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮಖಂಡಿ | ದಲಿತ ಸಾಹಿತ್ಯ ಶೋಷಣೆಯ ವಿರುದ್ಧದ ಧ್ವನಿ: ಪರಶುರಾಮ ಮಹಾರಾಜನವರ

ಅಸ್ಪೃಶ್ಯತೆ, ಸಾಮಾಜಿಕ ತಾರತಮ್ಯ ಹಾಗೂ ಶೋಷಣೆಯ ವ್ಯವಸ್ಥೆಯ ವಿರುದ್ಧ ಪ್ರಶ್ನೆ ಎತ್ತಿ,...

ವಿಜಯಪುರ | ವಿಶೇಷಚೇತನರ ಸಬಲೀಕರಣಕ್ಕೆ ವಿವಿಧ ಯೋಜನೆ: ಆನ್‌ಲೈನ್ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...

ಬಾಗಲಕೋಟೆ | ಬರದ ಹೊಡೆತಕ್ಕೆ ಬೆಳೆ ನಿರ್ನಾಮ! ಎಕರೆಗೆ ರೂ.30 ಸಾವಿರ ಖರ್ಚು, ಕೈ ಸೇರದ ಫಸಲು

ಬಾಗಲಕೋಟೆ ಜಿಲ್ಲೆಯ ರೈತರು ಬಿತ್ತನೆ, ಗೊಬ್ಬರ, ಕೂಲಿ ಸೇರಿದಂತೆ ಎಕರೆಗೆ ರೂ.25ರಿಂದ...

ಸಾಗರ | ಡಾ. ಹೆಚ್. ಗಣಪತಿಯಪ್ಪ ಸ್ಮಾರಕ ಅಭಿವೃದ್ಧಿಗೆ ಶಾಸಕರಿಗೆ ಮನವಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ದಿವಂಗತ ಹೆಚ್.ಗಣಪತಿಯಪ್ಪ...