ಬಾಗೇಪಲ್ಲಿ | ವಿದ್ಯಾರ್ಥಿಗಳಿಗೆ ಪಾಲಕರ ಕಷ್ಟದ ಅರಿವಿರಲಿ:ಶಾಸಕ ಎಸ್. ಎನ್.ಸುಬ್ಬಾರೆಡ್ಡಿ

Date:

ವಿದ್ಯಾರ್ಥಿಗಳ ನಿರ್ದಿಷ್ಟವಾದ ಗುರಿ ಹೊಂದಿ ಅದರ ಸಾಧನೆಗೆ ನಿರಂತರವಾಗಿ ಪರಿಶ್ರಮ ವಹಿಸಿದರೆ ಉನ್ನತ ಸ್ಧಾನ ಪಡೆಯಬಹುದು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.

ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ಟೋಲ್ ಪ್ಲಾಜಾ ಹತ್ತಿರ ಇರುವ ಪ್ರಥಮ ದರ್ಜೆ ಕಾಲೇಜು 2026-27ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಅಂತಿಮ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು ಪಾಲಕರು ಹಲವಾರು ಕಷ್ಟದ ನಡುವೆಯೂ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ. ಆದರೆ ವಿದ್ಯಾರ್ಥಿಗಳು ಮೊಬೈಲ್ ಚಾಳಿಗೆ ಬಿದ್ದು ತಮ್ಮ ಶೈಕ್ಷಣಿಕ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ವಿಷಾದಿಸಿದರು. ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣದಿಂದ ವಿದ್ಯಾರ್ಥಿಗಳು ಮಾನಸಿಕ ಹಾಗೂ ದೈಹಿಕವಾಗಿ ಕಳೆಹೀನರಾಗುತ್ತಿದ್ದು, ಅವರ ಭವಿಷ್ಯವನ್ನ ಚಿಕ್ಕ ವಯಸ್ಸಿನಲ್ಲಿ ಹಾಳು ಮಾಡಿಕೊಂಡು ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಈ ಮೂಲಕ ತಮ್ಮ ಜೀವನವನ್ನ ಅಂತ್ಯ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಸಮಾಜದಲ್ಲಿ ಹೆಚ್ಚಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಆದ್ದರಿಂದ ಪಾಲಕರು ಹಾಗೂ ಗುರುಗಳ ಮಾರ್ಗದರ್ಶನ ಪಡೆದು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕೆಂದು ಕಿವಿಮಾತು ಹೇಳಿದರು.

- Advertisement -

ಪ್ರಾಂಶುಪಾಲರಾದ ವೈ ನಾರಾಯಣ ಮಾತನಾಡಿ ಸರ್ಕಾರಿ ಕಾಲೇಜುಗಳು ವರದಾನ:ಸರ್ಕಾರಿ ಶಾಲೆ ಕಾಲೇಜುಗಳೆಂದರೆ ಮೂಗು ಮುರಿಯುವಂತಹ ಮನಸ್ಥಿತಿಯಿಂದ ಪಾಲಕರು ಮೊದಲು ಹೊರಬರಬೇಕು, ಖಾಸಗಿ ಕಾಲೇಜುಗಳಿಗಿಂತಲೂ ಹೆಚ್ಚು ಮೂಲ ಸೌಕರ್ಯಗಳು ಸರ್ಕಾರಿ ಕಾಲೇಜು ಗಳಲ್ಲಿ ಲಭ್ಯವಿದೆ, ಆರ್ಥಿಕವಾಗಿ ಹಿಂದುಳಿದ ಕುಟುಂಬದ ಹಿನ್ನೆಲೆಯಿಂದ ಬಂದಂತಹ ವಿದ್ಯಾರ್ಥಿಗಳಿಗೆ ಇಂತಹ ಸರ್ಕಾರಿ ಕಾಲೇಜುಗಳು ವರದಾನವಾಗಿದ್ದು, ಇಲ್ಲಿ ಸಿಗುವಂತಹ ಉಚಿತ ಶಿಕ್ಷಣವನ್ನು ಸದ್ಭಳಕೆ ಮಾಡಿಕೊಳ್ಳುವ ಮೂಲಕ ಪ್ರಜ್ಞಾವಂತ ನಾಗರಿಕನಾಗಿ ಹೊರ ಹೊಮ್ಮುವಂತೆ ಕರೆ ನೀಡಿದರು.

ಇದನ್ನು ಓದಿದ್ದೀರಾ..? ಕೋಲಾರ | ಮೂರು ವರ್ಷಗಳಲ್ಲಿ ಕೋಲಾರ ಕ್ಷೇತ್ರಕ್ಕೆ ಒಟ್ಟು ₹ 3,834 ಕೋಟಿ‌ ಅನುದಾನ: ಶಾಸಕ ಕೊತ್ತೂರು ಮಂಜುನಾಥ್ – ಈ ದಿನ.ಕಾಮ್

ಈ ಸಂದರ್ಭದಲ್ಲಿ ತಹಶಿಲ್ದಾರ್ ಮನೀಷಾ ಎನ್ ಪತ್ರಿ,ವೃತ ನಿರೀಕ್ಷಕರು ಅಜಯ್‌ ಸಾರಥಿ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಡಿ.ಎನ್. ಕೃಷ್ಣಾರೆಡ್ಡಿ,ಬಾಲಕಿಯರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ರೂಪ ಪೈ, ನಂಜಿರೆಡ್ಡಿ,ಗ್ರಂಥ ಪಾಲಕ ವೆಂಕಟರಾಮರೆಡ್ಡಿ,ತಾಜ್ ಉನೀಸಾ,ಇಮ್ರಾನ್ ಬಾಷಾ,ಹೆಚ್.ಎಸ್. ನರೇಂದ್ರ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿಧ್ಯಾರ್ಥಿಗಳು ಹಾಗೂ ಪೋಷಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಎಸ್‌ಐಆರ್ ವಿರುದ್ಧದ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರದ ಯತ್ನ: ಖಂಡನೆ

ಎಸ್‌ಐಆರ್‌ ವಿರುದ್ಧ ದೆಹಲಿಯಲ್ಲಿ ಸಿಪಿಐ(ಎಂ), ವಿದ್ಯಾರ್ಥಿ ಹಾಗೂ ಯುವಜನ ಸಂಘಟನೆಗಳು ನಡೆಸುತ್ತಿರುವ...

ಚಿಂತಾಮಣಿ | ಮುರುಗುಮಲ್ಲ ದರ್ಗಾ ದರ್ಶನ ಮುಗಿಸಿ ಮರಳುತ್ತಿದ್ದವರ ಆಟೋ ಕಾರು ಡಿಕ್ಕಿ..ಇಬ್ಬರ ಸ್ಥಿತಿ ಗಂಭೀರ

ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾರ್ಲ ಹಳ್ಳಿ ಹಾಗೂ...

​ಚಿಂತಾಮಣಿ | ಪದವೀಧರರ ಶಿಕ್ಷಕರ ನಿಜವಾದ ಧ್ವನಿಯಾಗಲು ಸ್ಪರ್ಧೆ;ಯಾವುದೇ ಒತ್ತಡಕ್ಕೂ ಹಿಂದೆ ಸರಿಯಲ್ಲ:ವಕೀಲ ಬರೀದ್

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಕೀಲ ಬರೀದ್...

ಬಾಗೇಪಲ್ಲಿ | ದೆಹಲಿ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಪಿಐಎಂ ಬೆಂಬಲ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಗೆ ದೇಶದ ವಿವಿಧ...