ಬಾಗೇಪಲ್ಲಿ | ಚಿತ್ರಾವತಿಗೆ ಕೊಳಚೆ ನೀರು ಹರಿಸುವ ಕಾಮಗಾರಿ ಸಂಪೂರ್ಣ ಸ್ಥಗಿತ

Date:

ಪಟ್ಟಣದ ಕೊಳಚೆ ನೀರನ್ನು ಚಿತ್ರಾವತಿ ನದಿಗೆ ಹರಿಸಲು ಪುರಸಭೆ ಕೈಗೊಂಡಿದ್ದ ಅವೈಜ್ಞಾನಿಕ ಕಾಮಗಾರಿಯನ್ನು ಸಾರ್ವಜನಿಕರ ತೀವ್ರ ವಿರೋಧ ಮತ್ತು ಹೋರಾಟದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಂಪೂರ್ಣವಾಗಿ ಸ್ಥಗಿತಗೊಳಿಸಿದ್ದಾರೆ. ನದಿಗೆ ಕಲುಷಿತ ನೀರು ಸೇರದಂತೆ ತಡೆಯಲು ಶಾಶ್ವತ ಕ್ರಮ ಕೈಗೊಳ್ಳುವುದಾಗಿ ಪುರಸಭೆ ಮುಖ್ಯಾಧಿಕಾರಿ ಎಂ.ಶ್ರೀನಿವಾಸ್ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

- Advertisement -

ಚಿತ್ರಾವತಿ ನದಿಗೆ ಚರಂಡಿ ನೀರು ಹರಿಸುತ್ತಿರುವುದನ್ನು ಖಂಡಿಸಿ ‘ಚಿತ್ರಾವತಿ ನಮ್ಮ ಹಕ್ಕು, ಚಿತ್ರಾವತಿ ಉಳಿಸಿ ಜೀವ ಉಳಿಸಿ ಹೋರಾಟ ಸಮಿತಿ’ ಹಾಗೂ ಪರಿಸರವಾದಿಗಳು ಪುರಸಭೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಭೇಟಿ ನೀಡಿದ ಪುರಸಭೆ ಮುಖ್ಯಾಧಿಕಾರಿ ಎಂ. ಶ್ರೀನಿವಾಸ್, ಕಲುಷಿತ ನೀರು ನದಿಗೆ ಸೇರದಂತೆ ತಡೆಯಲು ಕಾಮಗಾರಿಯನ್ನು ತಕ್ಷಣದಿಂದಲೇ ನಿಲ್ಲಿಸುವುದಾಗಿ ಭರವಸೆ ನೀಡಿ, ಚರಂಡಿಗಳಲ್ಲಿ ಹೂಳು ತೆಗೆಯುವುದಾಗಿ ತಿಳಿಸಿದರು.

ಇದನ್ನು ಓದಿದ್ದೀರಾ..?ಅಗತ್ಯವಿರುವಷ್ಟು ರಸಗೊಬ್ಬರ ಪೂರೈಸಬೇಕು: ಸರ್ಕಾರಕ್ಕೆ ರೈತರ ಆಗ್ರಹ

ಈ ಸಂದರ್ಭದಲ್ಲಿ ಎ.ಜಿ.ಸುಧಾಕರ್ ಮಾತನಾಡಿ ಚಿತ್ರಾವತಿ ನದಿ ಮಾಲಿನ್ಯವಾಗುವುದನ್ನು ತಡೆಯಲು ನಾವುಗಳು ಮಾಡುತ್ತಿರುವ ಪ್ರಯತ್ನ ಭಾಗಶಃ ಸಾಧಿಸಿದ್ದೇವೆ. ತಮಗೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ. ಸಂಪೂರ್ಣವಾಗಿ ನಮ್ಮ ಗುರಿ ಸಾಧಿಸಲು ಇದೇ ರೀತಿಯಲ್ಲಿ ಮುಂದುವರೆಯುವ ಅವಶ್ಯಕತೆ ಇದೆ. ಹಾಗಾಗಿ ನಮ್ಮ ಹೋರಾಟದ ಜೊತೆಗೆ ನ್ಯಾಯಾಂಗದ ಮೂಲಕ ಸಹ ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಿಕೊಳ್ಳುವ ಅನಿವಾರ್ಯತೆ ಇದೆ. ಭಾನುವಾರ ರಂದು ಗೌರವಾನ್ವಿತ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಹಂಚಾಟಿ ಸಂಜೀವಕುಮಾರ ರವರು ಬಾಗೇಪಲ್ಲಿ ಅಥವಾ ಚೇಳೂರು ತಾಲ್ಲೂಕಿಗೆ ಬರಲಿದ್ದಾರೆ. ಹಾಗಾಗಿ ಅವರಿಗೆ ಹಾಗೂ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಿಗೆ ಮನವಿ ಸಲ್ಲಿಸೊಣ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...