ಬಾಗೇಪಲ್ಲಿ | ಸಮರ್ಪಕವಾದ ಆಹಾರ ಸೇವಿಸಿದರೆ ಉತ್ತಮ ಆರೋಗ್ಯ: ನ್ಯಾಯಾಧೀಶೆ ಎಂ. ಭಾರತಿ

Date:

Advertisements

ಗ್ರಾಮೀಣ ಪ್ರದೇಶಗಳಲ್ಲಿ ಕಬ್ಬಿಣಾಂಶ, ನಾರಿನ ಅಂಶವುಳ್ಳ ಹಣ್ಣು, ತರಕಾರಿಗಳು ಸ್ಥಳೀಯವಾಗಿ ದೊರೆಯುತ್ತವೆ. ಇದನ್ನು ಸಮರ್ಪಕವಾಗಿ ದಿನನಿತ್ಯದ ಆಹಾರ ಸೇವನೆಯಲ್ಲಿ ಬಳಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಪಡೆಯಬಹುದು ಎಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಎಂ. ಭಾರತಿ ಹೇಳಿದರು.

ಅವರು ಬಾಗೇಪಲ್ಲಿ ಪಟ್ಟಣದ ಜೆಎಂಎಫ್ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯತಿ, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪುರಸಭೆಯ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ದೇವರಾಜ್ ಅರಸ್ ಭವನದಲ್ಲಿ ಹಮ್ಮಿಕೊಂಡಿದ್ದ ‘ರಾಷ್ಟ್ರೀಯ ಪೌಷ್ಟಿಕ ದಿನಾಚರಣೆ’ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪೌಷ್ಟಿಕತೆ ಎನ್ನುವುದು ಪ್ರಾಪ್ತ ವಯಸ್ಸಿನವರಿಗೆ ಮಾತ್ರವಲ್ಲದೆ, ಪ್ರಸವಪೂರ್ವ ಮಗುವಿಗೂ ಅವಶ್ಯ. ಅದಕ್ಕಾಗಿ ಸರ್ಕಾರದ ಯೋಜನೆಗಳನ್ನು ಸಮಾಜಕ್ಕೆ ಹತ್ತಿರವಾಗಿರುವ ಅಂಗನವಾಡಿ ಕೇಂದ್ರಗಳ ಮೂಲಕ ತಲುಪಿಸಲಾಗುತ್ತದೆ. ಎಲ್ಲ ಇಲಾಖೆಗಳು ಕೈ ಜೋಡಿಸಿದಾಗ ಪೌಷ್ಟಿಕತೆ ಬೆಂಬಲಿಸುವ, ಆರೋಗ್ಯ ಪೋಷಿಸುವ ಕೆಲಸವಾಗುತ್ತದೆ ಎಂದರು.

Advertisements

ವಕೀಲರ ಸಂಘದ ಅಧ್ಯಕ್ಷ ಎ.ನಂಜುಂಡಪ್ಪ ಮಾತನಾಡಿ, ಹೆಣ್ಣು ಮಕ್ಕಳಿಗೆ ಹದಿಹರೆಯದ ವಯಸ್ಸಿನಲ್ಲಿ ಮದುವೆ ಮಾಡಬಾರದು. ಇದರಿಂದ ತಾಯಿ ಹಾಗೂ ಮಗುವಿನ ಆರೋಗ್ಯ ಸ್ಥಿತಿ ದುರ್ಬಲವಾಗುವ ಸಂಭವ ಹೆಚ್ಚು. ಬಾಲ್ಯ ವಿವಾಹಗಳನ್ನು ತಡೆಗಟ್ಟಿ, ಜನರಿಗೆ ಆರೋಗ್ಯ, ಕಾನೂನುಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು’ ಎಂದು ಅವರು ಸಲಹೆ ನೀಡಿದರು.

ಇದನ್ನು ಓದಿದ್ದೀರಾ? ಮದ್ದೂರು | ಕುಲಾಂತರಿ ತಳಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ: ಎನ್ ಪಿ ಶಂಕರಯ್ಯ ಕರೆ

ಡಾ.ಸತ್ಯನಾರಾಯಣ ರೆಡ್ಡಿ ಮಾತನಾಡಿ, ಒಬ್ಬ ವ್ಯಕ್ತಿಯು ಅಗತ್ಯವಿರುವ ಪೋಷಕಾಂಶ ಪಡೆಯಲು ಪ್ರತಿದಿನ ಕಾರ್ಬೋಹೈಡ್ರೇಟ್, ಫೈಬರ್, ಆರೋಗ್ಯಕರ ಕೊಬ್ಬು, ಪ್ರೋಟಿನ್, ಖನಿಜಗಳು, ವಿಟಮಿನ್‌ಗಳಲ್ಲಿ ಸಮೃದ್ಧವಾದ ಆಹಾರ ಸೇವಿಸಬೇಕು. ಆಗ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಈ ಕಾರಣದಿಂದ ಆರೋಗ್ಯಕರ ಆಹಾರ ಪದ್ಧತಿ ಮತ್ತು ಸರಿಯಾದ ಪೋಷಣೆಯ ಮೌಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ರಾಮಾಂಜಿ,ಪ್ರಸನ್ನ ಕುಮಾರ್ ಕಾರ್ಯದರ್ಶಿ, ಮಂಜುನಾಥ್ ಖಜಾಂಚಿ, ವಕೀಲರಾದ ನರಸಿಂಹ ಮೂರ್ತಿ, ಚಂದ್ರಶೇಖರ,ಶಶು ಅಭಿವೃದ್ಧಿ ಇಲಾಖೆ ಯೋಜನಾಧಿಕಾರಿ ರಾಮಚಂದ್ರಪ್ಪ ಕೆ.ವಿ ಹಾಗೂ ಸಾರ್ವಜನಿಕರು ಹಾಜರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X