ಅರಣ್ಯ ಇಲಾಖೆಯಿಂದ ರೈತರಿಗೆ ತೊಂದರೆ ದೂರು ದಾಖಲಿಸಲು ಎಸ್ಪಿಗೆ ಬೈರತಿ ಸುರೇಶ್ ಸೂಚನೆ

Date:

ಕೋಲಾರ: ಕಳೆದ ಕೆಡಿಪಿ ಸಭೆಯ ತೀರ್ಮಾನದಂತೆ ಜಂಟಿ ಸರ್ವೆ ಮುಗಿದು ವರದಿ ಬರುವ ತನಕ ಅರಣ್ಯ ಇಲಾಖೆಯು ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆ ಕೊಡಬಾರದು ಎಂಬ ಆದೇಶವಿದೆ ತೊಂದರೆ ಕೊಟ್ಟವರ ವಿರುದ್ದ ಹಾಗೂ ಮುಳಬಾಗಿಲಿನಲ್ಲಿ ಮನೆಯನ್ನು ಕೆಡವಿ ಹಾಕಿದ ಅರಣ್ಯ ಅಧಿಕಾರಿಗಳ ವಿರುದ್ಧ ಕೂಡಲೇ ಎಫ್ ಐ ಆರ್ ದಾಖಲಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಸೂಚನೆ ನೀಡಿದರು.

- Advertisement -

ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿ ಬಳಿ‌ ಶುಕ್ರವಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ರೈತ ಸಂಘಟನೆಗಳು ಹಾಗೂ ರೈತರಿಂದ ಮನವಿ ಸ್ವೀಕರಿಸಿ ಮಾತನಾಡಿದ ಅವರು ರೈತರಿಗೆ ವಿನಾಕಾರಣ ತೊಂದರೆ ಕೊಟ್ಟಿದ್ದಾರೆ ಜಿಲ್ಲಾಧಿಕಾರಿ ಆದೇಶಕ್ಕೂ ಬೆಲೆ ಇಲ್ಲವಾಗಿದೆ ಎಂದು ರೈತರು ವರದಿ ಮಾಡಿದರು ಕೂಡಲೇ ಜಿಲ್ಲೆಯ ರೈತರ ಮೇಲೆ ದಾಖಲಾಗಿರುವ ಎಫ್ಐಆರ್ ಅನ್ನು ಬಿ ರಿಪೋರ್ಟ ಹಾಕಿ ಮುಕ್ತಾಯ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರೈತರ ಸರ್ಕಾರಿ ಗೋಮಾಳ ಜಮೀನುಗಳಲ್ಲಿ ಅರಣ್ಯ ಇಲಾಖೆಯವರ ಕೆಲಸ ಏನು ಎಂದು ಉಸ್ತುವಾರಿ ಸಚಿವರನ್ನು ರೈತರು ಪ್ರಶ್ನೆ ಮಾಡಿದರು ಜಂಟಿ ಸರ್ವೆ ಸಮೀಕ್ಷೆ ಮುಗಿದು ವರದಿಯನ್ನು ಕೂಡಲೇ ಬಿಡುಗಡೆ ಮಾಡಬೇಕು ಅರಣ್ಯ ಇಲಾಖೆಯ ಒಂದು ಇಂಚು ಅರಣ್ಯ ಜಮೀನು ಬೇಡ ಆದರೆ ರೈತರ ಸರ್ಕಾರಿ ಗೋಮಾಳ ಜಮೀನು ಏಕೆ ಬೇಕು ಅನ್ನದಾತರ ಜಮೀನುಗಳನ್ನು ದೌರ್ಜನ್ಯದಿಂದ ಅವರ ಬೆಳೆಗಳನ್ನು ಏಕೆ ನಾಶಪಡಿಸುತ್ತಿದ್ದಾರೆ ಇವರ ಮೇಲೆ ಕಾನೂನು ಕ್ರಮ ಆಗಬೇಕು, ಇವರು ಯಾವುದೇ ಸರ್ಕಾರ ಆದೇಶಗಳನ್ನು ಜಿಲ್ಲಾ ಉಸ್ತುವಾರಿ ಮಂತ್ರಿಗಳ ಆದೇಶಗಳನ್ನು ಧಿಕ್ಕರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ..? ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಬೈರತಿ ಸುರೇಶ್ ಚಾಲನೆ

ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡರಾದ ಸಿಪಿಎಂ ಗೋಪಾಲ್, ಆರ್.ಶ್ರೀನಿವಾಸನ್, ಗಾಂಧಿನಗರ ನಾರಾಯಣಸ್ವಾಮಿ, ಟಿ.ಎಂ ವೆಂಕಟೇಶ್, ಪಾತಕೋಟೆ ನವೀನ್ ಕುಮಾರ್, ಹರಟಿ ಪ್ರಕಾಶ್, ಡಾ.ಗೋವಿಂದಪ್ಪ, ವೆಂಕಟರವಣಪ್ಪ, ಭಟ್ರಹಳ್ಳಿ ಮಂಜುನಾಥ್, ಚಲಪತಿ, ದರ್ಶನ್, ಹಾಗೂ ರೈತರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...