ಬಾಲಸೋರ್ ರೈಲು ಅವಘಡ | ಗಾಯಾಳು ಕನ್ನಡಿಗರ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Date:

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭಿವಿಸಿದ  ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 300 ದಾಟಿದೆ. 2 ರೈಲುಗಳಲ್ಲಿದ್ದ 900ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಗಳಲ್ಲಿ ಇವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಅಫಘಾತಕ್ಕೀಡಾದ ರೈಲಿನಲ್ಲಿ ನೂರಕ್ಕೂ ಹೆಚ್ಚು ಕನ್ನಡಿಗರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್‌ ಇವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ದೂರವಾಣಿ ಕರೆ ಮಾಡಿದ ಸಿಎಂ ಸಿದ್ದರಾಮಯ್ಯ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರೈಲು ಅವಘಡದಲ್ಲಿ ಗಾಯಾಳುಗಳಾಗಿ ಚಿಕಿತ್ಸೆ ಪಡೆಯುತ್ತಿರುವ ಕನ್ನಡಿಗರ ಜೊತೆ. ಸಿಎಂ ಸಿದ್ದರಾಯಮಯ್ಯ ದೂರವಾಣಿ ಮೂಲಕ ಮಾತುಕತೆ ನಡೆಸಿ, ಮಾಹಿತಿ ಪಡೆದಿದ್ದಾರೆ.

ʻಒಡಿಶಾದ ಬಾಲಸೋರ್ ರೈಲು ದುರಂತದ ಸ್ಥಳದಲ್ಲಿ ಸಿಲುಕಿದ್ದ 30ಕ್ಕೂ ಹೆಚ್ಚು ಮಂದಿ ಕನ್ನಡಿಗರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಸರ್ಕಾರದಿಂದ ಅಗತ್ಯವಿರುವ ಎಲ್ಲಾ ರೀತಿಯ ನೆರವನ್ನು ಒದಗಿಸಿ, ಸುರಕ್ಷಿತವಾಗಿ ವಾಪಾಸ್ ಕರೆ ತರಲಾಗುವುದೆಂದು ಧೈರ್ಯ ತುಂಬಿದರು.ʼ ಎಂದು ʻಸಿಎಂ ಆಫ್‌ ಕರ್ನಾಟಕʼ ಖಾತೆಯಿಂದ ಟ್ವೀಟ್‌ ಮಾಡಲಾಗಿದೆ.

ಅಪಘಾತಕ್ಕೀಡಾದ ಬೈಯಪ್ಪನಹಳ್ಳಿ ಸರ್‌​​ಎಂ ವಿಶ್ವೇಶ್ವರಯ್ಯ ಟರ್ಮಿನಲ್​-ಹೌರಾ ಎಕ್ಸಪ್ರೆಸ್‌ನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು, ಸಂಸೆ, ಕುದುರೆಮುಖ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಸೇರಿದ 110 ಮಂದಿ ಉತ್ತರ ಭಾರತದ ತೀರ್ಥಕ್ಷೇತ್ರಗಳ ದರ್ಶನಕ್ಕೆ ಹೋಗಿದ್ದರು. ಅವರು ಗುರುವಾರ ಯಶವಂತಪುರ ರೈಲು ನಿಲ್ದಾಣದಿಂದ ಯಶವಂತಪುರ – ಹೌರಾ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದರು.

ರೈಲಿನ ಕೊನೆಯ S5, S6, S7 ಬೋಗಿಯಲ್ಲಿ ಇವರೆಲ್ಲರೂ ಪ್ರಯಾಣ ಮಾಡುತ್ತಿದ್ದರು. ರೈಲು ನಿನ್ನೆ (ಜೂ.02) ಮಧ್ಯಾಹ್ನ ಕೋಲ್ಕತ್ತಾ ಬಳಿ ಇಂಜಿನ್​ ಬದಲಿಸಿದೆ. ಇದರಿಂದ ಕಳಸ ತಾಲೂಕಿನ 110 ಜನ ರೈಲಿನ ಮೊದಲ ಬೋಗಿಗೆ ಶಿಫ್ಟ್ ಆಗಿದ್ದರು. ಮೊದಲ ಬೋಗಿಗೆ ಶಿಫ್ಟ್ ಆದ ಹಿನ್ನೆಲೆಯಲ್ಲಿ ಇವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಕೊನೆಯ 4 ಬೋಗಿಗಳಿಗೆ ರೈಲು ಡಿಕ್ಕಿ ಹೊಡೆದಿದೆ. ಇನ್ನು ಬೈಯಪ್ಪನಹಳ್ಳಿ ಈ ರೈಲಿನಲ್ಲಿ  ಒಟ್ಟು 1,294 ಪ್ರಯಾಣಿಕರಿದ್ದರು ಎನ್ನಲಾಗಿದೆ.

ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಬದ್ಧ
ರೈಲು ದುರಂತದಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ ಸುರಕ್ಷಿತವಾಗಿ ವಾಪಸ್ ಕರೆತರಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತಕ್ಷಣವೇ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನಹರಿಸಲು ಹಾಗೂ ಅವರಿಗೆ ಅಗತ್ಯ ನೆರವು ನೀಡಲು ಸಂತೋಷ್ ಲಾಡ್ ಅವರನ್ನು ನೇಮಿಸಿರುವುದಾಗಿ ಸಿದ್ದರಾಮಯ್ಯ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಅಥವಾ ಯಾವುದೇ ಸಮಸ್ಯೆಗೆ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ನೆರವು ನೀಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಮೀನಿನ ಆಹಾರ ತಯಾರಿಕಾ ಘಟಕದಲ್ಲಿ ಬೆಂಕಿ; ಕೋಟ್ಯಂತರ ರೂ. ನಷ್ಟ

ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಕೋಳಿ, ಮೀನಿನ ಆಹಾರ...

ವಿಜಯಪುರ | ಕೆಂಪು ಮೆಣಸಿಕಾಯಿಗೆ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ರೈತ ಸಂಘ ಆಗ್ರಹ

ಕೆಂಪು ಮೆಣಸಿಕಾಯಿಗೆ ಬೆಂಬಲ ಬೆಲೆ ನೀಡಿ ಖರೀದಿಸುವಂತೆ ಕರ್ನಾಟಕ ರಾಜ್ಯ ರೈತ...

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...