ಬಳ್ಳಾರಿ | ಮತದಾರ ಪಟ್ಟಿಯಿಂದ ಸುಮಾರು 1.2 ಲಕ್ಷ ಹೆಸರುಗಳು ಡಿಲೀಟ್

Date:

Advertisements

ಬಳ್ಳಾರಿ ಜಿಲ್ಲೆಯಲ್ಲಿ 1.17 ಲಕ್ಷ ಮತದಾರರ ಹೆಸರುಗಳನ್ನು ಮತದಾರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಇವುಗಳಲ್ಲಿ ಹಲವು ಪುನಾರಾವರ್ತಿತ ಹೆಸರುಗಳು ಎಂದು ಜಿಲ್ಲಾಡಳಿತ ಹೇಳಿಕೊಂಡಿದೆ.

2022ರ ನವೆಂಬರ್‌ನಲ್ಲಿಯೂ ಮತದಾರರ ಹೆಸರುಗಳು ತೆಗೆದುಹಾಕಲಾಗಿತ್ತೆಂದು ಆಗ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು. ಅದಾದ ಬಳಿಕ, ಇದೀಗ ಮತ್ತೆ ಜಿಲ್ಲೆಯ ಹಲವಾರು ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ.

ಜಿಲ್ಲೆಯಲ್ಲಿ 1.17 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಅವುಗಳಲ್ಲಿ ಕಂಪ್ಲಿ ಮತ್ತು ಸಂಡೂರು ತಾಲೂಕುಗಳ ಮತದಾರರ ಹೆಸರುಗಳನ್ನು ಹೆಚ್ಚಿನವು. ಕನಿಷ್ಠ 50,000 ಹೆಸರುಗಳು ಎರಡು ಅಥವಾ ನಾಲ್ಕು ಬಾರಿ ಮತದಾರ ಪಟ್ಟಿಯಲ್ಲಿದ್ದವು. ಅಂತಹ ಹೆಸರುಗಳನ್ನು ತೆಗೆಯಲಾಗಿದೆ. ಅಲ್ಲದೆ, ಮರಣ ಹೊಂದಿದವರ 20,000 ಹೆಸರುಗಳನ್ನೂ ಕೈಬಿಡಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.

Advertisements

“ನಾವು ನಮೂನೆ-7 ಸಲ್ಲಿಸಿದ ನಂತರ ಪುನರಾವರ್ತಿತ ಹೆಸರುಗಳನ್ನು ತೆಗೆದುಹಾಕಿದ್ದೇವೆ. ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಅಳಿಸುವ ಮತ್ತು ಸೇರಿಸುವ ಸಮಯದಲ್ಲಿ ಮಾರ್ಗಸೂಚಿಗಳನ್ನು ಅನುಸರಿಸಿದ್ದೇವೆ” ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಜಿಲ್ಲೆಯಾದ್ಯಂತ 33 ಸಾವಿರ ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ” ಎಂದು ಆಯೋಗದ ಅಧಿಕಾರಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ನೈತಿಕ ಪೊಲೀಸ್‌ಗಿರಿ ಹತ್ಯೆಗೆ ಸಿಎಂ ಹೊಣೆ; ಡಿಕೆಶಿ ಆಗ್ರಹ

ಕಳೆದ ಹಲವು ವರ್ಷಗಳಿಂದ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿಲ್ಲ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ತಿಳಿಸಿದ್ದಾರೆ.

“ಜನರು ತಾವು ಸ್ಥಳಾಂತರಗೊಂಡ ಸ್ಥಳಗಳಲ್ಲಿ ತಮ್ಮ ಹೆಸರನ್ನು ಸೇರಿಸಿದ್ದಾರೆ. ಆದರೆ, ಹಿಂದಿನ ಕ್ಷೇತ್ರದಲ್ಲಿ ಅವರ ಹೆಸರನ್ನು ಅಳಿಸಿಲ್ಲ. ಇದರಿಂದಾಗಿ ಮತದಾರರ ಪಟ್ಟಿಯಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಒಬ್ಬರದ್ದೇ ಹೆಸರುಗಳು ಕಾಣಿಸಿಕೊಂಡಿವೆ. ನಾವು ಎರಡು ಅಥವಾ ಅದಕ್ಕಿಂತ ಹೆಚ್ಚು ಬಾರಿ ನಮೂದಾಗಿದ್ದ ಹೆಸರುಗಳನ್ನು ತೆಗೆದು ಹಾಕಿದ್ದೇವೆ. ಅರ್ಹ ಮತದಾರರ ಹೆಸರನ್ನು ಪಟ್ಟಿಯಿಂದ ಅಳಿಸಿಲ್ಲ. ಪಟ್ಟಿಯಿಂದ ಹೆಸರುಗಳನ್ನು ಅಳಿಸುವಾಗ ನಾವು ಸ್ಥಳೀಯ ಚುನಾಯಿತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ್ದೇವೆ,” ಎಂದು ಪವನ್ ಕುಮಾರ್ ಮಾಲಪಾಟಿ ಹೇಳಿದ್ದಾರೆ.

“ಮೃತಪಟ್ಟವರ ಸುಮಾರು 20,000ಕ್ಕೂ ಹೆಚ್ಚು ಹೆಸರುಗಳು ಇನ್ನೂ ಪಟ್ಟಿಯಲ್ಲಿದ್ದವು. ಮೃತರ ಕುಟುಂಬದ ಸದಸ್ಯರಿಂದ ಅಧಿಕೃತ ಮಾಹಿತಿ ಪಡೆದು ಮೃತಪಟ್ಟವರ ಹೆಸರುಗಳನ್ನು ತೆಗೆದಿದ್ದೇವೆ” ಎಂದು ಮಾಲಪಾಟಿ ತಿಳಿಸಿದ್ದಾರೆ.

ಪುನರಾವರ್ತಿತ ಮತ್ತು ಮೃತಪಟ್ಟವರ ಹೆಸರುಗಳನ್ನು ತೆಗೆದು, ಹೊಸ ಮತದಾರರ ಹೆಸರನ್ನು ಸೇರಿಸುವುದರಲ್ಲಿ ಯಾವುದೇ ಎಂದು ಪವನ್ ಕುಮಾರ್ ಮಾಲಪಾಟಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X