ತೆಲಂಗಾಣ ರಾಜ್ಯಕ್ಕೆ ಭತ್ತ ಸಾಗಾಟ ನಿರ್ಬಂಧ; ರೈತರಿಂದ ರಸ್ತೆ ತಡೆದು ಪ್ರತಿಭಟನೆ

Date:

ಕರ್ನಾಟಕ ರಾಜ್ಯದಿಂದ ತೆಲಂಗಾಣ ರಾಜ್ಯಕ್ಕೆ ಭತ್ತ ಸಾಗಾಟ ನಿರ್ಬಂಧಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಯಚೂರು ಜಿಲ್ಲಾ ಘಟಕದ ಪದಾಧಿಕಾರಿಗಳು ಗುರುವಾರ ಕೃಷ್ಣ ಮೇಲ್ಸೇತುವೆ(ಬ್ರಿಜ್) ಬಳಿ ರಸ್ತೆ ತಡೆ ಪ್ರತಿಭಟನೆ ನಡೆಸಿದರು.

- Advertisement -

“ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಿಂದ ಭತ್ತದ ವ್ಯಾಪಾರಿಗಳು ತೆಲಂಗಾಣ ರಾಜ್ಯಕ್ಕೆ ಹೋಗುವಾಗ ಶಕ್ತಿನಗರ ಚೆಕ್‌ಪೋಸ್ಟ್ ನಲ್ಲಿ ಹಾಗೂ ಯಾದಗಿರಿ ಜಿಲ್ಲೆಯ ಜಲಾಲ್‌ಪೂರ ಚೆಕ್ ಪೋಸ್ಟ್ ನಲ್ಲಿ ಭತ್ತದ ಲಾರಿಗಳನ್ನು ತಡೆದು ನಿಲ್ಲಿಸುತ್ತಿದ್ದಾರೆ” ಎಂದು ಪ್ರತಿಭಟನಾಕಾರರು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಬೆಳಿಗ್ಗೆಯೇ ರೈತರು ರಸ್ತೆ ತಡೆ ಮಾಡಿದ್ದರಿಂದ ಸಂಚಾರಕ್ಕೆ ವ್ಯತ್ಯಯವಾಯಿತು. ತೆಲಂಗಾಣದ 50ಕ್ಕೂ ಅಧಿಕ ಭತ್ತದ ವಾಹನಗಳನ್ನು ತಡೆದು ವಾಪಸ್ ಕಳಿಸಿದರು. ಪ್ರತಿಭಟನೆಯ ಮಾಹಿತಿ ಪಡೆದು ರಾಯಚೂರು ಎಪಿಎಂಸಿ ಅಧಿಕಾರಿ ಆದೆಪ್ಪಗೌಡ ಸ್ಥಳಕ್ಕೆ ಆಗಮಿಸಿ ಸಮಸ್ಯೆಯ ಕುರಿತು ತೆಲಂಗಾಣ ಸರ್ಕಾರದ ಜತೆ ಮಾತನಾಡಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ರೈತರು ಪ್ರತಿಭಟನೆ ಹಿಂಪಡೆದರು.

“ಪ್ರತಿದಿನ ತೆಲಂಗಾಣ ರಾಜ್ಯದಿಂದ ರಾಯಚೂರು ಮಾರುಕಟ್ಟೆಗೆ 30ರಿಂದ 40 ಸಾವಿರ ಕ್ವಿಂಟಲ್ ಭತ್ತ ಯಾವುದೇ ನಿರ್ಬಂಧವಿಲ್ಲದೆ ಆವಕವಾಗುತ್ತಿದೆ. ಇದರಿಂದ ಸ್ಥಳೀಯ ಮಾರುಕಟ್ಟೆಯ ಭತ್ತದ ದರ ಕಡಿಮೆಯಾಗಿದ್ದು, ರೈತರಿಗೆ ನಷ್ಟವಾಗುತ್ತಿದೆ” ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಚಾಮರಸ ಮಾಲಿ ಪಾಟೀಲ ಸಮಸ್ಯೆ ವಿವರಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭಾಕರ ಪಾಟೀಲ, ಕಾರ್ಯಾಧ್ಯಕ್ಷ ಬಸವರಾಜ ಪಾಟೀಲ, ಪದಾಧಿಕಾರಿಗಳಾದ ಮಲ್ಲಣ್ಣ ಗೌಡೂರು, ಮಲ್ಲಿಕಾರ್ಜುನರಾವ್, ರೈತ ಮುಖಂಡರು, ವ್ಯಾಪಾರಿ ವೆಂಕಟೇಶ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...