ಬಾಳೆಹೊನ್ನೂರು | ಕಾಫಿ ಸಂಶೋಧನಾ ಸಂಸ್ಥೆಗೆ ನೂರರ ಸಂಭ್ರಮ: ಡಿ.20ರಿಂದ ಮೂರು ದಿನ ಶತಮಾನೋತ್ಸವ

Date:

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪಟ್ಟಣದಲ್ಲಿರುವ ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ(ಸಿಸಿಆರ್‌ಐ)ಯ ಶತಮಾನೋತ್ಸವದ ಅಂಗವಾಗಿ ಕಾಫಿ ಮಂಡಳಿ ವತಿಯಿಂದ ಡಿಸೆಂಬರ್‌ 20ರಿಂದ 22ರವರೆಗೆ ಮೂರು ದಿನಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಾಫಿ ಮಂಡಳಿ ಸದಸ್ಯ ಉದಯ್ ಕುಮಾರ್ ತಿಳಿಸಿದರು.

- Advertisement -

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಕಾಫಿ ಉದ್ಯಮದ ಸವಾಲು ಮತ್ತು ಪರಿಹಾರ, ತಾಂತ್ರಿಕ ಮತ್ತು ವೈಜ್ಞಾನಿಕ ಅಂಶಗಳನ್ನು ಒಳಗೊಳ್ಳುವ ಬಗ್ಗೆ, ಮಾನವ ಪ್ರಾಣಿ ಸಂಘರ್ಷ, ವಿಶೇಷ ಕಾಫಿ ಮತ್ತು ಜಾಗತಿಕ ಮಾರುಕಟ್ಟೆ ವಿಷಯ ಸೇರಿ ಹತ್ತು ಚರ್ಚಾಗೋಷ್ಟಿಗಳು ನಡೆಯಲಿವೆ. ಸಮಗ್ರ ಕೃಷಿ ಆರ್ಥಿಕ ನಿರ್ವಹಣೆ, ಮಣ್ಣು ಮತ್ತು ಪರಿಸರಕ್ಕೆ ಧಕ್ಕೆಯಾಗದಂತೆ ಕಾಫಿ ಬೆಳೆಯುವ ವಿಧಾನ, ಕಾಫಿ ತೋಟಗಳ ನಿರ್ವಹಣೆ ಬಗ್ಗೆ ಕಾರ್ಯಾಗಾರಗಳು ನಡೆಯಲಿವೆ. ಇದೇ ವೇಳೆ, ಕಾಫಿಯ 2 ಹೊಸ ತಳಿ ಬಿಡುಗಡೆ ಮಾಡಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“1925ರಲ್ಲಿ ಮೈಸೂರು ಮಹಾರಾಜರ ಆಡಳಿತ ಸಂದರ್ಭದಲ್ಲಿ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯು ಕಾಫಿ ಬೆಳೆಯಲ್ಲಿ ಎರಡು ಜಿ ಐ ಟ್ಯಾಗ್‌ಗಳನ್ನು ಹೊಂದಿರುವುದು ಹೆಮ್ಮೆಯ ಸಂಗತಿ. ಭಾರತೀಯ ಕಾಫಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಹೆಚ್ಚಿದ್ದರೂ ಬ್ರ‍್ಯಾಂಡಿಂಗ್ ಸಮಸ್ಯೆ ಇದೆ. ಭಾರತೀಯ ಕಾಫಿ ಬ್ರ‍್ಯಾಂಡಿಂಗ್ ಹೆಚ್ಚಿಸುವ ಬಗ್ಗೆಯೂ ಚರ್ಚಿಸಲಾಗುವುದು. ರಾಜ್ಯ, ಹೊರ ರಾಜ್ಯಗಳಿಂದ ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.

“ಉದ್ಘಾಟನೆ ಸಮಾರಂಭದಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಕೇಂದ್ರ ವಾಣಿಜ್ಯ ಖಾತೆ ರಾಜ್ಯ ಸಚಿವ ಜಿತೇಂದ್ರ ಪ್ರಸಾದ್, ಜಿಲ್ಲಾ ಉಸ್ತುವಾರಿ ಸಚಿವ ಕೆ ಜೆ ಜಾರ್ಜ್, ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ” ಎಂದರು.

7 ಲಕ್ಷ ಟನ್‌ಗೆ ಹೆಚ್ಚಿಸಲು ನೀಲನಕ್ಷೆ

“ರಾಜ್ಯದಲ್ಲಿ ಸದ್ಯ 3.5 ಲಕ್ಷ ಟನ್ ಕಾಫಿ ಉತ್ಪಾದಿಸಲಾಗುತ್ತಿದ್ದು, 7 ಲಕ್ಷ ಟನ್ ಉತ್ಪಾದಿಸಲು ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ. ಉದ್ಯಮಕ್ಕೆ ಬರುತ್ತಿರುವ ಯುವಜನರನ್ನು ಪ್ರೋತ್ಸಾಹಿಸಲು ಕಾರ್ಯಾಗಾರ ಆಯೋಜಿಸಲಾಗಿದೆ” ಎಂದು ಉದಯ್ ಕುಮಾರ್ ಹೇಳಿದರು.‌

ಈ ಸುದ್ದಿ ಓದಿದ್ದೀರಾ? ಉಡುಪಿ | ಮೀನುಗಾರಿಕಾ ಬಂದರಿನ ಮುಖ್ಯ ಪ್ರವೇಶದ್ವಾರ ನಿರ್ಮಾಣ ಕಾಮಗಾರಿ- ಪರ್ಯಾಯ ಮಾರ್ಗ

“ಆಧುನಿಕ ತಂತ್ರಜ್ಞಾನ ಬಳಕೆಯ ಬಗ್ಗೆ ಸಂಸ್ಥೆಯಲ್ಲಿ ಅಧ್ಯಯನ ನಡೆದಿದ್ದು, ಕಾಫಿಯನ್ನು ಉತ್ಕೃಷ್ಟ ಗುಣಮಟ್ಟಕ್ಕೆ ಕೊಂಡೊಯ್ಯಲು ಮಾರ್ಗಸೂಚಿ ಮತ್ತು ಸಿದ್ಧತೆಗಳನ್ನು ನಡೆಸಲಾಗಿದೆ” ಎಂದರು.

“ಉತ್ಪಾದನೆ ಹೆಚ್ಚಿಸಲು ಕಾಫಿ ಬೆಳೆಯುವ ಜಾಗ ವಿಸ್ತರಿಸಬೇಕೆಂದೇನಿಲ್ಲ. ತಂತ್ರಜ್ಞಾನ ಸಹಿತ ತೋಟಗಳ ನಿರ್ವಹಣೆಯಲ್ಲಿ ಬದಲಾವಣೆ ಮಾಡಿಕೊಂಡರೆ ಇಳುವರಿಯನ್ನು ದುಪ್ಪಟ್ಟು ಮಾಡಿಕೊಳ್ಳಬಹುದು. ಈ ಬಗ್ಗೆಯೂ ಸಮಾವೇಶದಲ್ಲಿ ಚರ್ಚೆಯಾಗಲಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...