ಬನವಾಸಿ | ಗ್ರಾಮ ಪಂಚಾಯತ್‌ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ; ಜಾತಿ ನಿಂದನೆ ವಿರುದ್ಧ ದೂರು ದಾಖಲು

Date:

ಬನವಾಸಿ: ಬದನಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೋರಿ ಹಬ್ಬದ ಪ್ರಯುಕ್ತ ಅಳವಡಿಸಲಾಗಿದ್ದ ಬ್ಯಾನರ್‌ಗಳನ್ನು ತೆರವುಗೊಳಿಸಲು ಹೋದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ‌

- Advertisement -

ಘಟನೆಯ ವಿವರ: ಬದನಗೋಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಪರಸಪ್ಪ ಪುಟ್ಟಪ್ಪ ಲಮಾಣಿ ಅವರು ನೀಡಿದ ದೂರಿನ ಪ್ರಕಾರ, ಫೆಬ್ರವರಿ 7 ರಿಂದ 8ರ ವರೆಗೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ನಟರಾಜ ಭೀಮಪ್ಪ ಹೊಸೂರು ಎಂಬುವವರು ಅನುಮತಿ ಇಲ್ಲದೆ ಗ್ರಾಮದ ವಿವಿಧೆಡೆ ಬ್ಯಾನರ್ ಮತ್ತು ಫ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕಾರ್ಯಕ್ರಮ ಮುಗಿದ ನಂತರವೂ ಇವುಗಳನ್ನು ತೆರವುಗೊಳಿಸದ ಕಾರಣ, ಪಂಚಾಯತ್ ಅಧಿಕಾರಿಗಳು ಮೌಖಿಕವಾಗಿ ಸೂಚನೆ ನೀಡಿದ್ದರು. ಆದರೂ ಬ್ಯಾನರ್‌ಗಳನ್ನು ತೆಗೆಯದ ಹಿನ್ನೆಲೆಯಲ್ಲಿ, ಸಹಾಯಕ ಆಯುಕ್ತರ ಸೂಚನೆಯಂತೆ ಪಂಚಾಯತ್ ಸಿಬ್ಬಂದಿಗಳು ತೆರವು ಕಾರ್ಯಕ್ಕೆ ಮುಂದಾಗಿದ್ದರು.

ಫೆಬ್ರವರಿ 20ರಂದು ಮಧ್ಯಾಹ್ನ ಸುಮಾರು 1:00 ಗಂಟೆಗೆ ಶಿರಸಿ-ಹಾವೇರಿ ರಸ್ತೆಯ ದನಗನಹಳ್ಳಿ ಕ್ರಾಸ್ ಹತ್ತಿರ ಪಂಚಾಯತ್ ಕಾರ್ಯದರ್ಶಿ ದಶರಥರಾಜ ಬೂದಿಹಾಳಕರ ಮತ್ತು ಸಿಬ್ಬಂದಿಗಳು ಬ್ಯಾನರ್ ತೆರವುಗೊಳಿಸುತ್ತಿದ್ದರು. ಈ ವೇಳೆ ಅಲ್ಲಿಗೆ ಮೋಟಾರ್ ಸೈಕಲ್‌ನಲ್ಲಿ ಬಂದ ನಟರಾಜ ಹೊಸೂರು, ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಲ್ಲದೆ, ಕಾರ್ಯದರ್ಶಿ ದಶರಥರಾಜ ಅವರ ಜಾತಿಯನ್ನು ಉಲ್ಲೇಖಿಸಿ ಅತ್ಯಂತ ಕೀಳಾಗಿ ನಿಂದಿಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಶಿರಸಿ | ಪ್ರಯಾಣಿಕರ ಗಮನಕ್ಕೆ: ಮಾರಿಕಾಂಬಾ ಜಾತ್ರೆ ಹಿನ್ನೆಲೆ ಬಸ್ ಸಂಚಾರ ಮಾರ್ಗ ಬದಲಾವಣೆ

“10 ಲಕ್ಷ ರೂಪಾಯಿ ಖರ್ಚಾದರೂ ಪರವಾಗಿಲ್ಲ, ನಿಮ್ಮೆಲ್ಲರ ಹೆಣ ಹೊರುತ್ತೇನೆ” ಎಂದು ಬಹಿರಂಗವಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೇ ಸಂದರ್ಭದಲ್ಲಿ ಪ್ರವೀಣ್ ರಾಮಾಪುರ ಮತ್ತು ಇಮ್ರಾನ್ ಅಲಿಯಾಸ್ ಮಂಡಕ್ಕಿ ಎಂಬುವವರು ಕೂಡ ನಟರಾಜನಿಗೆ ಸಾಥ್ ನೀಡಿ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ ದರ್ಪ ತೋರಿದ್ದಾರೆ ಎಂದು ತಿಳಿದುಬಂದಿದೆ.

ಕಾನೂನು ಕ್ರಮಕ್ಕೆ ಆಗ್ರಹ: ಆರೋಪಿತರು ರಾಜಕೀಯ ಪ್ರಭಾವ ಹೊಂದಿರುವ ವ್ಯಕ್ತಿಗಳಾಗಿದ್ದರಿಂದ ಭಯಭೀತರಾದ ಸಿಬ್ಬಂದಿಗಳು ಘಟನೆಯ ವಿಡಿಯೋ ದಾಖಲಿಸಿ ಪಂಚಾಯತ್‌ಗೆ ಮರಳಿದ್ದಾರೆ. ನಂತರ ಮೇಲಾಧಿಕಾರಿಗಳ ಮಾರ್ಗದರ್ಶನದಂತೆ ಬನವಾಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಸರ್ಕಾರಿ ನೌಕರರ ಮೇಲೆ ಹಲ್ಲೆ ಯತ್ನ, ಜಾತಿ ನಿಂದನೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಪಿಡಿಒ ಪರಸಪ್ಪ ಲಮಾಣಿ ಅವರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...