ಬನವಾಸಿ | ಗೃಹಪ್ರವೇಶದ ಬೆನ್ನಲ್ಲೇ ಹೊಸ ಮನೆಗೆ ಕನ್ನ: ಸ್ವಿಫ್ಟ್ ಕಾರು ಸೇರಿ ₹9.30 ಲಕ್ಷ ಮೌಲ್ಯದ ಸ್ವತ್ತು ಕಳವು

Date:

ಬನವಾಸಿ: ಶಿರಸಿ ತಾಲೂಕಿನ ದಾಸನಕೊಪ್ಪ ರಸ್ತೆಯ ನಿವಾಸಿ ಪ್ರಕಾಶ ಚನ್ನಪ್ಪ ಜಕಲಣ್ಣನವರ (57) ಎಂಬುವವರ ಮನೆಯಲ್ಲಿ ಕಳ್ಳತನ ನಡೆದ ಘಟನೆ ಬೆಳಕಿಗೆ ಬಂದಿದೆ. ಪ್ರಕಾಶ ಅವರು ಇತ್ತೀಚೆಗಷ್ಟೇ, ಅಂದರೆ ನವೆಂಬರ್ 5, 2026 ರಂದು ತಮ್ಮ ಹೊಸ ಮನೆಯ ಗೃಹಪ್ರವೇಶವನ್ನು ನೆರವೇರಿಸಿದ್ದರು.

- Advertisement -

ಇದಾದ ಕೆಲವೇ ದಿನಗಳಲ್ಲಿ ನವೆಂಬರ್ 18, 2026 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಪ್ರಕಾಶ ಅವರು ಮನೆಯ ಮುಂದಿನ ಮತ್ತು ಹಿಂದಿನ ಬಾಗಿಲುಗಳನ್ನು ಭದ್ರವಾಗಿ ಹಾಕಿಕೊಂಡು, ಹತ್ತಿರದ ತಮ್ಮ ತೋಟದ ಕೃಷಿ ಕೆಲಸಕ್ಕೆ ಮೋಟಾರ್ ಸೈಕಲ್‌ನಲ್ಲಿ ತೆರಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಚಳಗೇರಿಯಲ್ಲಿ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ; 103 ಮಂದಿಗೆ ಚಿಕಿತ್ಸೆ

ತೋಟದ ಕೆಲಸವನ್ನು ಮುಗಿಸಿಕೊಂಡು ಮಧ್ಯಾಹ್ನ 2-30 ಗಂಟೆಯ ವೇಳೆಗೆ ಮನೆಗೆ ವಾಪಸಾದಾಗ, ಮನೆಯ ಎದುರಿನ ಶೆಡ್‌ನಲ್ಲಿ ನಿಲ್ಲಿಸಿದ್ದ 2008 ನೇ ಸಾಲಿನ ಮಾರುತಿ ಸ್ವಿಫ್ಟ್ ಕಾರು (ನಂ: ಕೆ.ಎ-53/ಎನ್-3595) ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ. ತಕ್ಷಣ ಮನೆಯ ಮುಂದಿನ ಬಾಗಿಲ ಬೀಗ ತೆಗೆಯಲು ಹೋದಾಗ ಬಾಗಿಲಿಗೆ ಯಾವುದೋ ಗಟ್ಟಿಯಾದ ವಸ್ತುವಿನಿಂದ ಮೀಟಿದ ಗುರುತು ಕಂಡುಬಂದಿದೆ.

ಅನುಮಾನಗೊಂಡು ಹಿಂಬದಿಯ ಬಾಗಿಲ ಕಡೆ ಹೋಗಿ ನೋಡಿದಾಗ, ಆ ಬಾಗಿಲನ್ನು ಸಹ ಗಟ್ಟಿಯಾದ ವಸ್ತುವಿನಿಂದ ಮೀಟಿ ತೆರೆದಿದ್ದು, ಒಳಗಡೆಯಿಂದ ಹಾಕಿದ್ದ ಕೊಂಡಿಗಳು ಮುರಿದಿರುವುದು ಕಂಡುಬಂದಿದೆ. ಬಳಿಕ ಮನೆಯ ಬೆಡ್‌ರೂಂಗೆ ತೆರಳಿ ಪರಿಶೀಲಿಸಿದಾಗ ಕಬ್ಬಿಣದ ಕಪಾಟಿನಲ್ಲಿದ್ದ ವಸ್ತುಗಳು ಮತ್ತು ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

ಮನೆಯಲ್ಲಿದ್ದ ಕಾರಿನ ಕೀ ಹಾಗೂ ಇತರ ಸ್ವತ್ತುಗಳು ಸೇರಿದಂತೆ ಒಟ್ಟು 9.30 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ಯಾರೋ ಅಪರಿಚಿತ ಕಳ್ಳರು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಂಬಂಧಿಕರು ಸ್ಥಳಕ್ಕೆ ಧಾವಿಸಿದ್ದು, ಬನವಾಸಿ ಪೊಲೀಸರು ಶ್ವಾನದಳ ಮತ್ತು ಬೆರಳಚ್ಚು ತಜ್ಞರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 133/2026 ರಡಿ ಬಿಎನ್‌ಎಸ್-2023 ಕಲಂ 331(3) ಮತ್ತು 305(ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳ್ಳಿ ಹಳ್ಳಿಗೂ ನೇಗಿಲಯೋಗಿ ಯೋಜನೆ ತಲುಪಿಸಿ: ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ

ಮುಖ್ಯಮಂತ್ರಿ ನೇಗಿಲಯೋಗಿ ಯೋಜನೆಯ ಪ್ರಯೋಜನ ಜಿಲ್ಲೆಯ ಪ್ರತಿಯೊಂದು ಹಳ್ಳಿಯ ರೈತರಿಗೂ ತಲುಪುವಂತೆ...

ಧಾರವಾಡ |ಸಾರಿಗೆ ಸಂಸ್ಥೆ ಚಾಲಕನ ಮನೆ ಸೇರಿ ಮೂರು ಕಡೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ...

ಉಡುಪಿ | ಮಕ್ಕಳ ರಕ್ಷಣೆ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್

ಮಕ್ಕಳ ಮೇಲಿನ ಶೋಷಣೆ ಹಾಗೂ ದೌರ್ಜನ್ಯಗಳನ್ನು ತಡೆಗಟ್ಟಲು ಜಾರಿಗೊಳಿಸಲಾಗಿರುವ ಮಕ್ಕಳ ರಕ್ಷಣಾ...