ಬನವಾಸಿ | ಗುಡ್ನಾಪುರ ಬಂಗಾರೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳುವು; ಪ್ರಕರಣ ದಾಖಲು

Date:

ಬನವಾಸಿ: ಗುಡ್ನಾಪುರದಲ್ಲಿರುವ ಶ್ರೀ ಬಂಗಾರೇಶ್ವರ ದೇವಸ್ಥಾನದಲ್ಲಿ ದೇವರ ಮುಂದೆ ಇಟ್ಟಿದ್ದ ಎರಡು ಕಾಣಿಕೆ ಹುಂಡಿಗಳನ್ನು ಮೀಟಿ ತೆಗೆದು, ಅದರಲ್ಲಿದ್ದ ಅಂದಾಜು ₹10,000 ಹಣವನ್ನು ಕಳ್ಳರು ದೋಚಿಕೊಂಡು ಹೋಗಿರುವ ಘಟನೆ ವರದಿಯಾಗಿದೆ. ಈ ಸಂಬಂಧ ದೇವಸ್ಥಾನದ ಪ್ರಧಾನ ಕಾರ್ಯದರ್ಶಿಗಳು ಬನವಾಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

ಘಟನೆಯ ವಿವರ: ದೇವಸ್ಥಾನದ ಪ್ರಧಾನ ಕಾರ್ಯದರ್ಶಿಗಳು ದೂರಿನಲ್ಲಿ ತಿಳಿಸಿರುವಂತೆ, ಅವರು ದಿನಾಂಕ 02-12-2025 ರಂದು ರಾತ್ರಿ 7:00 ಗಂಟೆ ಸುಮಾರಿಗೆ ದೇವಸ್ಥಾನಕ್ಕೆ ಬೀಗ ಹಾಕಿ ಮನೆಗೆ ತೆರಳಿದ್ದರು. ಆ ಸಮಯದಲ್ಲಿ ಕಾಣಿಕೆ ಹುಂಡಿಗಳು ಸರಿಯಾದ ಸ್ಥಿತಿಯಲ್ಲಿಯೇ ಇದ್ದವು. ಮರುದಿನ, ಅಂದರೆ ದಿನಾಂಕ 03-12-2025 ರಂದು ಬೆಳಿಗ್ಗೆ 8:00 ಗಂಟೆ ಸುಮಾರಿಗೆ, ದೇವಸ್ಥಾನದ ಪೂಜಾರಿಯವರಾದ ಗಣಪತಿ ಎಮ್ ಶೇಟ್ ಅವರು ಬಂದು ನೋಡಿದಾಗ ಕಾಣಿಕೆ ಡಬ್ಬಿಗಳು ಒಡೆದ ಸ್ಥಿತಿಯಲ್ಲಿ ಇದ್ದಿದ್ದನ್ನು ನೋಡಿ ಪ್ರಧಾನ ಕಾರ್ಯದರ್ಶಿಗಳಿಗೆ ಕರೆ ಮಾಡಿ ವಿಷಯವನ್ನು ತಿಳಿಸಿದ್ದಾರೆ,.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ತಕ್ಷಣವೇ ಕಾರ್ಯದರ್ಶಿಗಳು ಉಳಿದ ಸಮಿತಿಯವರಿಗೆ ತಿಳಿಸಿ ದೇವಸ್ಥಾನಕ್ಕೆ ಭೇಟಿ ನೀಡಿದಾಗ, ಎರಡು ಕಾಣಿಕೆ ಹುಂಡಿಗಳ ಬೀಗಗಳನ್ನು ಒಡೆದು ಹಣ ಕಳವು ಮಾಡಿರುವುದು ದೃಢಪಟ್ಟಿದೆ. ಆ ಎರಡು ಕಾಣಿಕೆ ಹುಂಡಿಗಳಲ್ಲಿ ಸುಮಾರು ₹10,000 (ಹತ್ತು ಸಾವಿರ ರೂಪಾಯಿ) ಇರುತ್ತಿತ್ತು ಎಂದು ದೇವಸ್ಥಾನದ ಸಮಿತಿಯವರು ಅಂದಾಜಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳಾ ಸಿಬ್ಬಂದಿಗೆ ಜಾತಿ ನಿಂದನೆ; ಪ್ರಕರಣ ದಾಖಲು

ಕಳ್ಳರು ಈ ಕೃತ್ಯವನ್ನು ದಿನಾಂಕ 02-12-2025 ರ ರಾತ್ರಿ 7:00 ಗಂಟೆಯಿಂದ ದಿನಾಂಕ 03-12-2025 ರ ಬೆಳಿಗ್ಗೆ 8:00 ಗಂಟೆಯ ನಡುವಿನ ಅವಧಿಯಲ್ಲಿ ಎಸಗಿದ್ದಾರೆ ಎನ್ನಲಾಗಿದೆ. ಈ ಕುರಿತು ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸರಿಗೆ ವಿನಂತಿಸಿದ್ದಾರೆ. ದೂರು ಆಧರಿಸಿ ಬನವಾಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...