ಬಂಡೀಪುರ | ಗಾಯಗೊಂಡ ಸ್ಥಿತಿಯಲ್ಲಿ ಹುಲಿ ಪತ್ತೆ; ರಕ್ಷಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Date:

Advertisements

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಮೀಪದಲ್ಲಿ ಹುಲಿಯೊಂದು ಗಾಯಗೊಂಡಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಕುಂಧಕೆರೆ ಅರಣ್ಯ ವಲಯದಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಯೆಲ್ಚೆಟ್ಟಿ ಎಂಬ ಗ್ರಾಮದ ನಿವಾಸಿ ಮಹದೇವ ಎಂಬುವವರ ಜಮೀನಿನಲ್ಲಿ ಸುಮಾರು 11 ರಿಂದ 12 ವರ್ಷ ಪ್ರಾಯವಿರುವ ಹುಲಿಯೊಂದು ಗಾಯಗೊಂಡು ನರಳಾಡುತ್ತಿತ್ತು. ಇದನ್ನು ಗಮನಿಸಿದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಆ ಬಳಿಕ ತಜ್ಞರೊಂದಿಗೆ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಅರಿವಳಿಕೆ ಮದ್ದು ನೀಡಿ, ರಕ್ಷಿಸಿದ್ದಾರೆ. ಇನ್ನೊಂದು ಹುಲಿಯೊಂದಿಗೆ ಜಗಳವಾಡಿದ ನಂತರ ಗಾಯಗೊಂಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisements
bandipur tiger

ಸದ್ಯ ಗಾಯಗೊಂಡಿದ್ದ ಹುಲಿಗೆ ಸೂಕ್ತ ಚಿಕಿತ್ಸೆ ನೀಡಲು ಮೈಸೂರು ಬಳಿಯ ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಅಧಿಕಾರಿಗಳು ಕಳುಹಿಸಿರುವುದಾಗಿ ತಿಳಿದುಬಂದಿದೆ. ಗಾಯಗೊಂಡಿದ್ದ ಹುಲಿಯೊಂದಿಗೆ ಜಗಳವಾಡಿದ್ದ ಇನ್ನೊಂದು ಹುಲಿಯನ್ನು ಪತ್ತೆ ಹಚ್ಚಿ, ಮತ್ತೆ ಕಾಡಿಗೆ ಓಡಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಶಿಬಿರದ ಎರಡು ಆನೆಗಳನ್ನು ಬಳಸಿಕೊಂಡಿರುವುದಾಗಿ ತಿಳಿದುಬಂದಿದೆ.

ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ಎಸಿಎಫ್ ಸುರೇಶ್ ಹಾಗೂ ಕುಂದಕೆರೆ ಆರ್‌ಎಫ್‌ಒ ನಾಗೇಂದ್ರ ನಾಯಕ್‌ ಸ್ಥಳಕ್ಕೆ ಭೇಟಿ ನೀಡಿದ್ದರು. ವೈದ್ಯ ಡಾ.ವಾಸೀಂ ಮಿರ್ಜಾ ಅರಿವಳಿಕೆ ಲಸಿಕೆ ನೀಡಿದ್ದು, ಬಳಿಕ ಮೈಸೂರಿನ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿದರು.

ಇದನ್ನು ಓದಿದ್ದೀರಾ? ಬೀದರ್‌ | ಈದಿನ ಫಲಶೃತಿ: ವಿಕಲಚೇತನ ಸಹೋದರಿಯರ ಮನೆಗೆ ದೌಡಾಯಿಸಿದ ಅಧಿಕಾರಿಗಳು; ಮಾಸಾಶನದ ಭರವಸೆ

“ಹುಲಿಯೊಂದಿಗೆ ಕಾದಾಡಿದ್ದ ಹುಲಿ ಸೆರೆ ಹಿಡಿಯಬೇಕು. ಅಲ್ಲಿಯವರೆಗೂ ಗಾಯಾಳು ಹುಲಿ ಸಾಗಿಸಬಾರದು” ಎಂದು ರೈತರು ಪಟ್ಟು ಹಿಡಿದಿದ್ದರು. ಅಧಿಕಾರಿಗಳು ಭರವಸೆ ನೀಡಿದ ಬಳಿಕ ಅವಕಾಶ ನೀಡಿದರು. ಇನ್ನೊಂದು ಹುಲಿಯನ್ನು ಸೆರೆ ಹಿಡಿಯಲು ಕುನ್ನಮುಟ್ಟಿ ಗುಡ್ಡದಲ್ಲಿ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X