ಬೆಂಗಳೂರು | ಬನ್ನೇರುಘಟ್ಟ ಉದ್ಯಾನದಲ್ಲಿ 13 ಜಿಂಕೆಗಳು ನಿಗೂಢ ಸಾವು

Date:

ಬೆಂಗಳೂರು ಹೊರವಲಯದಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ 10 ದಿನಗಳಿಂದ 13 ಜಿಂಕೆಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ.

ಜಿಂಕೆಗಳ ಪರಸ್ಪರ ಕಾದಾಟ ಮತ್ತು ಜಂತುಹುಳುಗಳ ಬಾಧೆಯಿಂದ ಕೆಲವು ಜಿಂಕೆಗಳು ಮೃತಪಟ್ಟಿವೆ. ಆದರೂ, ಇನ್ನೂ ಕೆಲವು ಜಿಂಕೆಗಳ ಸಾವಿಎ ಕಾರಣವೇನು ಎಂಬುದು ತಿಳಿದುಬಂದಿದೆ. ಮೃತಪಟ್ಟ ಕೆಲವು ಜಿಂಕೆಗಳ ಹೊಟ್ಟೆಯ ಭಾಗದಲ್ಲಿ ಊತ ಕಾಣಿಸಿಕೊಂಡಿತ್ತು ಎಂದು ಉದ್ಯಾನವನದ ಮೂಲಗಳು ತಿಳಿಸಿವೆ.

ಬೆಂಗಳೂರಿನ ಸೇಂಟ್‌ ಜಾನ್ಸ್ ಆಸ್ಪತ್ರೆಯ ಉದ್ಯಾನದಲ್ಲಿದ್ದ 37 ಜಿಂಕೆಗಳನ್ನು ಸೂಕ್ತ ರಕ್ಷಣೆಯ ಕೊರತೆಯಿಂದಾಗಿ ಬನ್ನೇರುಘಟ್ಟ ಉದ್ಯಾನವನಕ್ಕೆ ಆಗಸ್ಟ್‌ 17ರಂದು ಹಸ್ತಾಂತರಿಸಲಾಗಿತ್ತು. ಆ ಜಿಂಕೆಗಳನ್ನು 10 ದಿನ ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು. ಆ ಸಮಯದಲ್ಲೇ 9 ಜಿಂಕೆಗಳು ಸಾವನ್ನಪ್ಪಿದ್ದವು. ಸೋಮವಾರ ನಾಲ್ಕು ಜಿಂಕೆಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಜಿಂಕೆಗಳು ಅತ್ಯಂತ ಸೂಕ್ಷ್ಮ ಪ್ರಾಣಿಗಳು. ಅವುಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸ್ಥಳಾಂತರಿಸಿದಾಗ, ಹೊಸ ಜಾಗಕ್ಕೆ ಹೊಂದಿಕೊಳ್ಳುವುದು ಕಷ್ಟ” ಎಂದು ಉದ್ಯಾನವನ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್‌ ತಿಳಿಸಿರುವುದಾಗಿ ‘ಪಿವಿ’ ವರದಿ ಮಾಡಿದೆ.

“ಕ್ವಾರಂಟೈನ್‌ ಜಾಗದಲ್ಲಿ ಗಂಡು ಜಿಂಕೆಗಳೇ ಹೆಚ್ಚಾಗಿದ್ದವು. ಇದು ಜಿಂಕೆಗಳ ಮಿಲನದ ಸಮಯವಾದ್ದರಿಂದ ಹೆಣ್ಣು ಜಿಂಕೆಗಾಗಿ ಪರಸ್ಪರ ಕಾದಾಟದಿಂದಾಗಿ ಹೆಚ್ಚಿನ ಗಂಡು ಜಿಂಕೆಗಳು ಮೃತಪಟ್ಟಿವೆ.ಕೆಲವು ಜಿಂಕೆಗಳು ಜಂತುಹುಳು ಬಾಧೆಯಿಂದ ಮೃತಪಟ್ಟಿರುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಉದ್ಯಾನವನದಲ್ಲಿದ್ದ ಏಳು ಚಿರತೆ ಮರಿಗಳು ರಕ್ತಭೇದಿಯಿಂದ ಸಾವನ್ನಪ್ಪಿದ್ದವು. ಇದೀಗ, ಜಿಂಕೆಗಳ ಸರಣಿ ಸಾವು ಎದುರಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ‌-ಕಾಸರಗೋಡು 400 KV ವಿದ್ಯುತ್ ಲೈನ್ ಅಳವಡಿಕೆಗೆ ಗ್ರಾಮಸ್ಥರ ವಿರೋಧ

ಉಡುಪಿ ಮತ್ತು ಕಾಸರಗೋಡು ನಡುವೆ 400 KV ವಿದ್ಯುತ್‌ ಲೈನ್ ಅಳವಡಿಕೆ...

ದಾವಣಗೆರೆ | ಪಾರ್ಕ್‌ನಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಪಾಲಿಕೆ ಚಿಂತನೆ; ನಿವಾಸಿಗಳ ಪ್ರತಿಭಟನೆ

ದಾವಣಗೆರೆ ಮಹಾನಗರ ಪಾಲಿಕೆಯು 41ನೇ ವಾರ್ಡ್‌ನಲ್ಲಿರುವ ಉದ್ಯಾನವನದಲ್ಲಿ ಕಸ ವಿಲೇವಾರಿ ಘಟಕ...

ನೀಟ್ ಹಗರಣ ಖಂಡಿಸಿ ಎಐಡಿಎಸ್‌ಓ ಪ್ರತಿಭಟನೆ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಖಂಡಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿ-ಯುವಜನರು...

ವಿಜಯಪುರ | ಇಂಗಳಗಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ...