ಬೆಂಗಳೂರು | ವೈಟ್‌ಫೀಲ್ಡ್‌ನ ಒಂದು ಬಡಾವಣೆಯಲ್ಲಿ 40 ಅನಧಿಕೃತ ಕಟ್ಟಡ ಪತ್ತೆ

Date:

ರಾಜ್ಯ ರಾಜಧಾನಿ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ನಡೆಯುತ್ತಿರುವ ಅನಧಿಕೃತ ಕಟ್ಟಡ ನಿರ್ಮಾಣಗಳ ವಿರುದ್ಧ ಕಾರ್ಯಾಚರಣೆ ಮುಂದುವರೆದಿದ್ದು, ಒಂದೇ ಬಡಾವಣೆಯಲ್ಲಿ 40 ಅನಧಿಕೃತ ಕಟ್ಟಡಗಳನ್ನು ಗುರುತಿಸಿ 27 ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ಇನ್ನುಳಿದ 13 ಕಟ್ಟಡಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶೀಘ್ರದಲ್ಲೇ ನೋಟಿಸ್ ಜಾರಿ ಮಾಡಲಿದ್ದು, ನಿಯಮಾನುಸಾರ 102 ದಿನಗಳಲ್ಲಿ ಕಟ್ಟಡಗಳನ್ನು ಕೆಡವುವ ಸಾಧ್ಯತೆಯಿದೆ.

- Advertisement -

ನಗರ ಯೋಜನಾ ಜಂಟಿ ನಿರ್ದೇಶಕ (ಜೆಡಿಟಿಪಿ) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎಂಜಿನಿಯರ್‌ಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ನಗರದ ವೈಟ್‌ರೋಸ್ ಲೇಔಟ್‌ನಲ್ಲಿರುವ ಈ ಕಟ್ಟಡಗಳನ್ನು ಹೊರ ರಾಜ್ಯದ ನಿವಾಸಿಗಳು ನಿರ್ಮಿಸಿದ್ದಾರೆ. ಅವರ ಗುರಿ ಕೇವಲ ಲಾಭ ಗಳಿಸುವುದು. ಕಟ್ಟಡಗಳು ಪಾಲಿಕೆಯಿಂದ ಅಗತ್ಯ ಅನುಮತಿಗಳನ್ನು ಪಡೆದಿಲ್ಲ. ಗ್ರೌಂಡ್ ಪ್ಲಸ್-ಎರಡು ಅಂತಸ್ತುಗಳಿರಬೇಕಾದ ಅನೇಕ ಕಟ್ಟಡಗಳು ಕನಿಷ್ಠ ಆರು ಮಹಡಿಗಳನ್ನು ಹೊಂದಿವೆ. ಬೆಳೆಯುತ್ತಿರುವ ಅಕ್ರಮ ‘ಪೇಯಿಂಗ್ ಗೆಸ್ಟ್’ ವಸತಿ ವ್ಯವಹಾರವು ಅವ್ಯಾಹತವಾಗಿ ನಡೆಯುತ್ತಿದೆ” ಎಂದು ವೈಟ್‌ಫೀಲ್ಡ್‌ನ ನಿವಾಸಿಯೊಬ್ಬರು ತಿಳಿಸಿದರು.

“ಸರಿಯಾದ ರಸ್ತೆಗಳಿಲ್ಲ, ಚರಂಡಿಗಳಿಲ್ಲ, ಭೂಗತ ಸಂಪರ್ಕಗಳಿಲ್ಲ ಹಾಗೂ ನೀರು ಸರಬರಾಜಿಗೆ ಸೂಕ್ತವಾದ ಮಾರ್ಗಗಳಿಲ್ಲ. ಅಧಿಕಾರಿಗಳು ಅಂತಹ ಮಾಲೀಕರು ಮತ್ತು ಬಿಲ್ಡರ್‌ಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಬೇಕು. ಇತರ ಪ್ರದೇಶಗಳಲ್ಲಿ ಮತ್ತೆ ಉಲ್ಲಂಘನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕು” ಎಂದರು.

”ರಸ್ತೆಗಳಲ್ಲಿ ಕೊಳಚೆ ನೀರು ಹರಿಯುತ್ತಿದ್ದು, ಅಕ್ಕಪಕ್ಕದ ಎಲ್ಲ ಪ್ರದೇಶಗಳಿಗೂ ಆರೋಗ್ಯದ ಅಪಾಯವಿದೆ. ರಸ್ತೆಗಳು ಸರಿಯಾಗಿಲ್ಲ. ನೀರಿನ ಸಂಪರ್ಕಗಳಿಲ್ಲ, ಒಳಚರಂಡಿ ಸಂಪರ್ಕಗಳಿಲ್ಲ, ಮತ್ತು ಕಟ್ಟಡಗಳು ಸಹ ಕೊಳಚೆ ನೀರನ್ನು ರಸ್ತೆಗಳಿಗೆ ಬಿಡುತ್ತಿವೆ. ಇದು ತೆರೆದ ಕೆರೆಗಳಲ್ಲಿ ಸಂಗ್ರಹವಾಗುತ್ತಿದೆ. ಜನರಲ್ಲಿ ಆರೋಗ್ಯದ ಅಪಾಯವನ್ನು ಸೃಷ್ಟಿಸುತ್ತದೆ. ಅಂತರ್ಜಲವನ್ನು ಕಲುಷಿತಗೊಳಿಸುತ್ತಿದೆ” ಎಂದು ಹೇಳಿದರು.

ಹೈಕೋರ್ಟ್ ಹೊರಡಿಸಿದ ಆದೇಶದಂತೆ ಕ್ರಮ ಕೈಗೊಳ್ಳಬೇಕು ಎಂದು ಮಹದೇವಪುರ ವಲಯದ ಜಂಟಿ ಆಯುಕ್ತೆ ಡಾ.ದಾಕ್ಷಾಯಿಣಿ ಕೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಂವಿಧಾನವನ್ನು ಗೌರವಿಸುವುದಾದರೆ ಜಗದೀಶ್‌ ಗುಡಗಂಟಿಯನ್ನು ಪಕ್ಷದಿಂದ ಉಚ್ಚಾಟಿಸಿ: ಬಿಜೆಪಿಗೆ ಎಎಪಿ ಸವಾಲು

”ಅಕ್ರಮ ನಿರ್ಮಾಣಗಳನ್ನು ತಡೆಯಲು ಕ್ರಮಕೈಗೊಳ್ಳುವಂತೆ ಜೆಡಿಟಿಪಿ ಮತ್ತು ಬಿಬಿಎಂಪಿ ಮಾರ್ಷಲ್‌ಗಳಿಗೆ ಸೂಚನೆ ನೀಡಿದ್ದೇನೆ. ಮಾರತ್ತಹಳ್ಳಿ ಮತ್ತು ಸುತ್ತಮುತ್ತಲಿನ ಕೆಲವು ಮಾಲೀಕರ ದುರಾಸೆ ಮತ್ತು ಹೆಚ್ಚಿನ ಬಾಡಿಗೆ ಹಣಕ್ಕಾಗಿ ಹೊರ ರಾಜ್ಯಗಳಿಂದ ಲಾಬಿ ಮಾಡುವ ಬಿಲ್ಡರ್‌ಗಳು ಕಟ್ಟಡದ ನಿಯಮಗಳನ್ನು ಉಲ್ಲಂಘನೆಗೆ ಕಾರಣವಾಗುತ್ತಿವೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಸ್ಪಷ್ಟ ಸೂಚನೆ ನೀಡಿದ್ದು, ಅಂತಹ ಕಟ್ಟಡಗಳನ್ನು ಗುರುತಿಸಿ ತೆಗೆಯಲು ಹೈಕೋರ್ಟ್ ನಿರ್ದೇಶನವನ್ನು ಪಾಲಿಸುವಂತೆ ಸೂಚಿಸಿದ್ದಾರೆ” ಎಂದು ದಾಕ್ಷಾಯಿಣಿ ಅವರು  ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಅವಘಡದಲ್ಲಿ ರೈತ ಸಾವು: ಕುಟುಂಬಕ್ಕೆ ಬೋಸರಾಜು, ಹಂಪಯ್ಯ ನಾಯಕ್ ಸಾಂತ್ವನ

ಮಾನ್ವಿ ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ಮೋಟಾರ್ ಸ್ಟಾರ್ಟ್ ಮಾಡಲು...

ರಾಯಚೂರು | 12 ತಾಸು ವಿದ್ಯುತ್ ಪೂರೈಕೆಗೆ ಆಗ್ರಹ: ಜೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ರೈತರಿಗೆ 12 ತಾಸು ವಿದ್ಯುತ್ ಪೂರೈಸಬೇಕು, ಬೆಳೆಗಳು ಒಣಗುತ್ತಿವೆ ಎಂದು ಆಕ್ರೋಶ...

ಕಲಬುರಗಿ | ಅವಹೇಳನಕಾರಿ ಪೋಸ್ಟ್, ಜೀವ ಬೆದರಿಕೆ ಆರೋಪ; ಶಿವಸೇನಾ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಕಟಿಸಿ, ಪತ್ರಿಕಾಗೋಷ್ಠಿಯಲ್ಲಿ ನಿಂದನಾತ್ಮಕ...

ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ...