ಬೆಂಗಳೂರು | ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ 42 ನೇಕಾರರು ಆತ್ಮಹತ್ಯೆ

Date:

Advertisements

ಕಚ್ಚಾ ವಸ್ತುಗಳ ಬೆಲೆ ಏರಿಕೆ, ಅನಿಶ್ಚಿತ ಮಾರುಕಟ್ಟೆ, ಆರ್ಥಿಕ ಸಂಕಷ್ಟ ಸೇರಿದಂತೆ ವಿವಿಧ ಕಾರಣಗಳಿಂದ ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ 42 ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜವಳಿ ಇಲಾಖೆ ಮಾಹಿತಿ ನೀಡಿದೆ.

ಬೆಳಗಾವಿ ಜಿಲ್ಲೆಯಲ್ಲಿ 24, ಬಾಗಲಕೋಟೆ 5, ಬೆಂಗಳೂರು ಗ್ರಾಮಾಂತರ 4, ರಾಮನಗರ 3, ತುಮಕೂರು 2, ಬೆಂಗಳೂರು ನಗರ, ಧಾರವಾಡ, ಚಿಕ್ಕಬಳ್ಳಾಪುರ, ವಿಜಯಪುರ ಜಿಲ್ಲೆಯಲ್ಲಿ ತಲಾ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆಯ ಇನ್ನೆರಡು ಪ್ರಕರಣಗಳ ಕುರಿತು ಇನ್ನೂ ಎಫ್‌ಐಆರ್‌ ದಾಖಲಾಗಿಲ್ಲ.

ಆತ್ಮಹತ್ಯೆ ಮಾಡಿಕೊಂಡ 25 ನೇಕಾರರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗಿದೆ.  ಪ್ರಧಾನಮಂತ್ರಿ ಜೀವನ್‌ ಜ್ಯೋತಿ ಬಿಮಾ ಯೋಜನೆಯಡಿ ನೋಂದಾಯಿಸಿಕೊಂಡಿದ್ದ ನಾಲ್ವರಿಗೆ ಯೋಜನೆಯಡಿ ಪರಿಹಾರ ಪಡೆಯಲು ಸೂಚಿಸಲಾಗಿದೆ. ಆರು ಪ್ರಸ್ತಾವಗಳಿಗೆ ಶೀಘ್ರದಲ್ಲಿಯೇ ಪರಿಹಾರ ಬಿಡುಗಡೆ ಮಾಡಲಾಗುವುದು. ಉಳಿದ ಏಳು ಪ್ರಕರಣಗಳಲ್ಲಿ ಸೂಕ್ತ ದಾಖಲೆ ಸಲ್ಲಿಸದ ಕಾರಣ ಪ್ರಸ್ತಾವ ಕೈ ಬಿಡಲಾಗಿದೆ ಎಂದು ಜವಳಿ ಇಲಾಖೆ ಮಾಧ್ಯಮಗಳಿಗೆ ತಿಳಿಸಿದೆ.

Advertisements

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದಡಿ ಗುಂಪು ವಿಮಾ ಯೋಜನೆಯಡಿ ನೋಂದಾಯಿಸಿಕೊಂಡಿದ್ದ 68ನೇಕಾರರ ಕುಟುಂಬದ ಸದಸ್ಯರಿಗೆ ತಲಾ 2 ಲಕ್ಷ ರೂ.ದಂತೆ ಪರಿಹಾರ ಐದು ವರ್ಷಗಳಿಂದ ಬಂದಿಲ್ಲ ಎಂಬ ಆರೋಪವಿದೆ.

ಕಚ್ಚಾ ನೂಲಿನ ಬೆಲೆ, ರೇಷ್ಮೆ ಬೆಲೆ ದುಪ್ಪಟ್ಟಾಗಿದೆ. ಆದರೆ, ಅದಕ್ಕೆ ತಕ್ಕಂತೆ ಸೀರೆಗಳ ಬೆಲೆಯಲ್ಲಿ ಏರಿಕೆಯಾಗಿಲ್ಲ. ಮಧ್ಯವರ್ತಿಗಳಿಂದ ಏಕಾಏಕಿ ಬೆಲೆ ಏರಿಳಿತದ ಪರಿಣಾಮ ನಾವು ಸಂಕಷ್ಟಕ್ಕೆ ಸಿಲುಕಿದ್ದೇವೆ ಎಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ಅಧ್ಯಕ್ಷ ಶಿವಲಿಂಗ ಟಿರಕಿ ಮಾಧ್ಯಮದವರಿಗೆ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X