ಬೆಂಗಳೂರು ನಗರದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಹಮ್ಮಿಕೊಂಡಿದ್ದ “69ನೇ ಕನ್ನಡ ರಾಜ್ಯೋತ್ಸವ ಸಮಾರಂಭ”ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಪಾಲ್ಗೊಂಡ ಸಚಿವ ಮಧು ಬಂಗಾರಪ್ಪನವರು ಭುವನೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು.
ಬಳಿಕ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶಾಲಾ ಮಕ್ಕಳು ನಡೆಸಿಕೊಟ್ಟ ಪಥ ಸಂಚಲನ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿ, ಕಾರ್ಯಕ್ರಮ ಕುರಿತು ಪ್ರಸ್ತಾವಿಕವಾಗಿ ಮಾತನಾಡಿದರು.
ಗಣ್ಯರೊಂದಿಗೆ “ಕನ್ನಡ ದೀವಿಗೆ” ಎಂಬ ಪುಸ್ತಕ ಬಿಡುಗಡೆಗೊಳಿಸಿ, ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿ ಕರ್ನಾಟಕ ಚಿತ್ರಕಲಾ ಶಿಕ್ಷಕರ ಸಂಘದ ಶಿಕ್ಷಕರು ಆಯೋಜಿಸಿದ್ದ ‘ಚಿತ್ರಕಲಾ ಪ್ರದರ್ಶನ’ವನ್ನು ವೀಕ್ಷಿಸಿದರು. ಈ ವೇಳೆ ಮಧು ಬಂಗಾರಪ್ಪನವರ ವರ್ಣಚಿತ್ರವನ್ನು ಉಡುಗೊರೆಯಾಗಿ ನೀಡಿದ ಕಲಾವಿದರಿಗೆ ಧನ್ಯವಾದ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಗದಗ | ನಮ್ಮ ಕನ್ನಡ ಭಾಷೆ ಅನ್ನ ನೀಡುವ ಅಕ್ಷಯ ಪಾತ್ರೆ: ಕೋಲಕಾರ
ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಶಾಸಕ ರಿಜ್ವಾನ್ ಅರ್ಷದ್, ಎನ್ ಎ ಹ್ಯಾರಿಸ್ ಸೇರಿದಂತೆ ಅನೇಕ ಗಣ್ಯರು ಹಾಗೂ ಅಧಿಕಾರಿಗಳು ಇದ್ದರು.