17 ವರ್ಷದ ಬಾಲಕನ ತಲೆಗೆ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಗಂಗಮ್ಮಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ಬಿಗೆರೆ ಬಳಿ ನಡೆದಿದೆ.
ಮಂಜುನಾಥ್ ಮೃತ ಬಾಲಕ. ಕೊಲೆ ಮಾಡಿ ದುಷ್ಕರ್ಮಿಗಳು ಖಾಲಿ ಜಾಗವೊಂದರಲ್ಲಿ ಮೃತದೇಹವನ್ನು ಬಿಸಾಡಿ ಪರಾರಿಯಾಗಿದ್ದಾರೆ. ಕಳೆದ ರಾತ್ರಿ ಬಾಲಕನ ಹತ್ಯೆಯಾಗಿದೆ. ತಲೆಗೆ ರಾಡ್‌ನಿಂದ ತೀವ್ರವಾಗಿ ದಾಳಿ ಮಾಡಿದ ಕಾರಣ ಮಂಜುನಾಥ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಈ ಕೊಲೆ ಪ್ರೀತಿ ವಿಚಾರಕ್ಕೆ ನಡೆದಿರಬಹುದು ಎಂದು ಹೇಳಲಾಗುತ್ತಿದೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು
ಮೃತ ಮಂಜುನಾಥ್ ಅಪ್ಪ-ಅಮ್ಮನ ಕಳೆದುಕೊಂಡು ಅಬ್ಬಿಗೆರೆಯ ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸವಾಗಿದ್ದನು. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದನು. ಅಲ್ಲದೇ, ಗಾಂಜಾ ಸೇವನೆ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.