ಬೆಂಗಳೂರು | 17 ವರ್ಷದ ಬಾಲಕನ ತಲೆಗೆ ರಾಡ್‌ನಿಂದ ಹೊಡೆದು ಕೊಲೆ

Date:

17 ವರ್ಷದ ಬಾಲಕನ ತಲೆಗೆ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಗಂಗಮ್ಮಗುಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಅಬ್ಬಿಗೆರೆ ಬಳಿ ನಡೆದಿದೆ.

- Advertisement -

ಮಂಜುನಾಥ್‌ ಮೃತ ಬಾಲಕ. ಕೊಲೆ ಮಾಡಿ ದುಷ್ಕರ್ಮಿಗಳು ಖಾಲಿ ಜಾಗವೊಂದರಲ್ಲಿ ಮೃತದೇಹವನ್ನು ಬಿಸಾಡಿ ಪರಾರಿಯಾಗಿದ್ದಾರೆ. ಕಳೆದ ರಾತ್ರಿ ಬಾಲಕನ ಹತ್ಯೆಯಾಗಿದೆ. ತಲೆಗೆ ರಾಡ್‌ನಿಂದ ತೀವ್ರವಾಗಿ ದಾಳಿ ಮಾಡಿದ ಕಾರಣ ಮಂಜುನಾಥ್‌ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಕೊಲೆ ಪ್ರೀತಿ ವಿಚಾರಕ್ಕೆ ನಡೆದಿರಬಹುದು ಎಂದು ಹೇಳಲಾಗುತ್ತಿದೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಗಂಗಮ್ಮನ ಗುಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು

ಮೃತ ಮಂಜುನಾಥ್ ಅಪ್ಪ-ಅಮ್ಮನ ಕಳೆದುಕೊಂಡು ಅಬ್ಬಿಗೆರೆಯ ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸವಾಗಿದ್ದನು. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದನು. ಅಲ್ಲದೇ, ಗಾಂಜಾ ಸೇವನೆ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...