ಬೆಂಗಳೂರು | ಬೆಂಕಿ ಅವಘಡ; ಗುಜರಿ ಅಂಗಡಿ ಸೇರಿ 5 ಬೈಕ್‍ಗಳು ಭಸ್ಮ

Date:

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಒಂದಿಲ್ಲೊಂದು ಅಗ್ನಿ ಅವಘಡ, ಸರಣಿ ಅಪಘಾತಗಳು ಶನಿವಾರ ಸಂಭವಿಸಿವೆ. ಇದೀಗ ನಗರದ ಲಗ್ಗೆರೆಯಲ್ಲಿ ಟ್ರಾನ್ಸ್‌ಫಾರ್ಮರ್‌ ಸ್ಪೋಟಗೊಂಡು ಅಗ್ನಿ ಅವಘಡ ಸಂಭವಿಸಿದೆ.

- Advertisement -

ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡ ಪರಿಣಾಮ ಗುಜರಿ ಅಂಗಡಿಗೆ ಬೆಂಕಿ ತಗುಲಿ ಕ್ಷಣಾರ್ಧದಲ್ಲಿ ಅಂಗಡಿ ಹೊತ್ತಿ ಉರಿದಿದೆ. ಗುಜರಿ ಅಂಗಡಿ ಬೆಂಕಿಯಲ್ಲಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಈ ಬೆಂಕಿ ಅಕ್ಕಪಕ್ಕದ ಮೂರರಿಂದ ನಾಲ್ಕು ಮನೆಗಳಿಗೂ ಆವರಿಸಿದ್ದು, ಅಪಾರ ಹಾನಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಘಟನೆಯಲ್ಲಿ ಗುಜರಿ ಅಂಗಡಿ ಪಕ್ಕದಲ್ಲಿದ್ದ ಐದಾರು ಬೈಕ್‍ಗಳು ಭಸ್ಮವಾಗಿವೆ. ಅಲ್ಲದೇ ಭಾರೀ ಪ್ರಮಾಣದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಆದರೂ ಬೆಂಕಿ ಹತೋಟಿಗೆ ಬರುತ್ತಿಲ್ಲ.

ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸಲು ಪ್ರಯತ್ನಪಡುತ್ತಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಟ್ರಾನ್ಸ್‌ಫಾರ್ಮರ್ ಸಿಡಿದಿರುವ ಶಂಕೆ ಇದೆ.

ಈ ಸುದ್ದಿ ಓದಿದ್ದೀರಾ? ಮೈಸೂರು ದಸರಾ | ಕೆಎಸ್‌ಆರ್‌ಟಿಸಿಯಿಂದ ಪ್ರಯಾಣಿಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಮತದಾನದ ಹಕ್ಕು ಕಸಿಯುವ ಯಾವುದೇ ವ್ಯವಸ್ಥೆ ಒಪ್ಪಲಾಗದು-ಪ್ರಕಾಶ್ ರಾಜ್

ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕಾಗಿದ್ದು, ಆ ಹಕ್ಕಿಗೆ...

ಬಳ್ಳಾರಿ | ಜಮೀನು ಕಬಳಿಕೆ: ನಾಲ್ವರ ವಿರುದ್ಧ ಪ್ರಕರಣ

ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದ ಸರ್ವೇ ನಂಬರ್ 619ಎ/2 ರಲ್ಲಿದ್ದ 6...

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...