ಬೆಂಗಳೂರು | ಕೆಲಸದಿಂದ ತೆಗೆದಿದ್ದಕ್ಕೆ ಪ್ರತಿಮಾರನ್ನು ಕೊಲೆಗೈದ ಕಾರು ಚಾಲಕ ಕಿರಣ್

Date:

ಕರ್ನಾಟಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಕೆ ಎಸ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತರ ಮಾಜಿ ಕಾರು ಚಾಲಕ ಕಿರಣ್ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಬೆಂಗಳೂರಿನ ದಕ್ಷಿಣ ವಿಭಾಗದ ಡಿಸಿಪಿ ರಾಹುಲ್‌ಕುಮಾರ್ ಶಹಾಪುರ್‌ವಾಡ್‌​ ಸ್ಪಷ್ಟನೆ ನೀಡಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಿರಣ್ ಸ್ವಭಾವ ಮತ್ತು ಕಚೇರಿಯಲ್ಲಿ ನಡೆಯುತ್ತಿದ್ದ ಅಧಿಕೃತ ಮಾಹಿತಿಯನ್ನು ಬೇರೆಯವರಿಗೆ ನೀಡುತ್ತಿ​ದ್ದ ಹಿನ್ನೆಲೆ ಅಧಿಕಾರಿ ಪ್ರತಿಮಾ ಅವರು ಕಿರಣ್‌ನನ್ನು ಎರಡು ತಿಂಗಳ ಹಿಂದೆ ಕೆಲಸದಿಂದ ತೆಗೆದಿದ್ದರು. ಕೆಲಸ ಕಳೆದುಕೊಂಡ ಬಳಿಕ ಊರು ಬಿಟ್ಟಿದ್ದ ಕಿರಣ್​, 1 ತಿಂಗಳ ಬಳಿಕ ಬೆಂಗಳೂರಿಗೆ ಬಂದು ಪ್ರತಿಮಾರನ್ನು ಕೊಲೆಗೈದಿದ್ದಾನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕಿರಣ್‌ಗೆ ಕೆಲಸ ಹೋದ ಕಾರಣ ಆತನ ಪತ್ನಿ ಅವನನ್ನು ಬಿಟ್ಟು ತವರು ಮನೆಗೆ ಹೋಗಿದ್ದಳು. ಇದರಿಂದ ನೊಂದಿದ್ದ ಕಿರಣ್ ಅಧಿಕಾರಿಯನ್ನು ಕಚೇರಿಯಲ್ಲಿ ಭೇಟಿ ಮಾಡಿ, ಕೆಲಸಕ್ಕೆ ಸೇರಿಸಿಕ್ಕೊಳ್ಳುವಂತೆ ಮನವಿ ಮಾಡಿದ್ದಾನೆ. ಆದರೆ, ಅಧಿಕಾರಿ ಪ್ರತಿಮಾ ಅವರು ಇದಕ್ಕೆ ನಿರಾಕರಿಸಿದ್ದಾರೆ” ಎಂದು ವಿವರಿಸಿದ್ದಾರೆ.

“ಬಳಿಕ ನವೆಂಬರ್‌ 3ರಂದು ಕಿರಣ್ ಅಧಿಕಾರಿ ಪ್ರತಿಮಾ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಲು ಪ್ರಯತ್ನ ಮಾಡಿದ್ದನು. ಆದರೆ, ಅದು ಸಾಧ್ಯವಾಗಿರಲಿಲ್ಲ. ನಂತರ ನವೆಂಬರ್‌ 4ರಂದು ಅಧಿಕಾರಿ ಕೆಲಸದಿಂದ ಮರಳಿ ಮನೆಗೆ ಬರುವಾಗ ಅವರ ಹಿಂದೆಯೇ ಹೋಗಿ ಅವರ ಮನೆಯಲ್ಲಿದ್ದ ಆಯುಧ ಮತ್ತು ಅವರ ವೇಲ್ ಬಳಸಿ ಕೊಲೆ ಮಾಡಿದ್ದಾನೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯ ಕೊಲೆ ಪ್ರಕರಣ; ಓರ್ವ ಪೊಲೀಸ್ ವಶಕ್ಕೆ

“ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಮಲೆಮಹದೇಶ್ವರ ಬೆಟ್ಟದಲ್ಲಿ ಬಂಧಿಸಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಅಲ್ಲದೇ, ಅಧಿಕಾರಿಯ ಕೆಲಸದ ಆಯಾಮದಿಂದಲೂ ತನಿಖೆ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...