ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದಿದ್ದು, ಈ ವೇಳೆ ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ರಾಜಧಾನಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಬಳಿ ಮಂಗಳವಾರ ಬೆಳಗ್ಗೆ 11.45ರ ಸುಮಾರಿಗೆ ನಡೆದಿದೆ.
ಚಾಲಕನ ವಿವರ ಲಭ್ಯವಾಗಿಲ್ಲ. ಚಾಲಕನಿಗೆ ಅಲ್ಪಸ್ವಲ್ಪ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಆತನನ್ನು ಪೊಲೀಸರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಆಸಿಫ್ ಸರಳಿಕಟ್ಟೆ ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.
ಸದಾಶಿವನಗರ ಪೊಲೀಸ್ ಠಾಣೆ ಬಳಿ ಇರುವ ಸಿಗ್ನಲ್‌ನಲ್ಲಿಯೇ ಈ ದುರ್ಘಟನೆ ಸಂಭವಿಸಿದ್ದು, ಟ್ರಾಫಿಕ್ ಜಾಮ್ ಆಗಿರುವುದಾಗಿ ತಿಳಿದುಬಂದಿದೆ.
