ಬೆಂಗಳೂರು | ಟ್ರಿಪಲ್‌ ವೆಸೆಲ್‌ ಕೊರೊನರಿ ಕಾಯಿಲೆಗೆ ತುತ್ತಾಗಿದ್ದ ಮಡಗಾಸ್ಕರ್‌ ದ್ವೀಪದ ವ್ಯಕ್ತಿ; ಶಸ್ತ್ರ ಚಿಕಿತ್ಸೆ ಯಶಸ್ವಿ

Date:

ಟ್ರಿಪಲ್‌ ವೆಸೆಲ್‌ ಕೊರೊನರಿ ಕಾಯಿಲೆಗೆ ತುತ್ತಾಗಿದ್ದ ಮಡಗಾಸ್ಕರ್‌ ದ್ವೀಪದ 64 ವರ್ಷದ ವ್ಯಕ್ತಿಗೆ ಬೆಂಗಳೂರಿನಲ್ಲಿ ಫೋರ್ಟಿಸ್‌ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿ ಹೈಬ್ರಿಡ್ ಶಸ್ತ್ರಚಿಕಿತ್ಸೆ ನಡೆಸಿದೆ.

- Advertisement -

ಈಸ್ಟ್‌ ಆಫ್ರಿಕಾ ಮಡಗಾಸ್ಕರ್‌ ದ್ವೀಪ ದೇಶದ 64 ವರ್ಷದ ವ್ಯಕ್ತಿ ಹೃದಯದ ಟ್ರಿಪಲ್‌ ವೆಸೆಲ್‌ ಕೊರೊನರಿ(ಮೂರು ಪ್ರಮುಖ ಅಪಧಮನಿಗಳ ಬ್ಲಾಕೇಜ್‌) ಕಾಯಿಲೆಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ನಡೆಸಿದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಫೋರ್ಟಿಸ್‌ ಆಸ್ಪತ್ರೆಯ ಕಾರ್ಡಿಯೋ ಥೋರಾಸಿಕ್ ವಾಸ್ಕಲರ್‌ ಸರ್ಜರಿ ಹಿರಿಯ ಸಮಾಲೋಚಕ ಡಾ. ಸುದರ್ಶನ್‌ ಜಿ ಟಿ, ಇಂಟರ್‌ವೆನ್ಷನಲ್‌ ಕಾರ್ಡಿಯಾಲಜಿಸ್ಟ್‌ ಡಾ. ಶ್ರೀನಿವಾಸ್‌ ಪ್ರಸಾದ್‌, ಯೂರೋ ಆಂಕಾಲಜಿ ಯುರೋ-ಗೈನಕಾಲಜಿ, ಆಂಡ್ರಾಲಜಿ, ಕಸಿ ಮತ್ತು ರೋಬೋಟಿಕ್ ಸರ್ಜರಿಯ ಹಿರಿಯ ನಿರ್ದೇಶಕ ಡಾ. ಮೋಹನ್‌ ಕೇಶವ್‌ಮೂರ್ತಿ ಅವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿದೆ.

ಡಾ. ಸುದರ್ಶನ್‌ ಜಿ ಟಿ ಮಾತನಾಡಿ, “ಮಡಗಾಸ್ಕರ್‌ ದ್ವೀಪ ದೇಶದ 64 ವರ್ಷದ ವ್ಯಕ್ತಿಯ ಆರೋಗ್ಯದ ಹಿನ್ನೆಲೆ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿತ್ತು. ಮಧುಮೇಹ, ಮೂತ್ರಪಿಂಡ ವೈಫಲ್ಯ, ಪ್ರಾಸ್ಟೆಟ್‌ ಗ್ರಂಥಿಯ ಸಮಸ್ಯೆ, ಟ್ರಿಪಲ್‌ ವೆಸೆಲ್‌ ಕೊರೊನರಿ ಕಾಯಿಲೆ ಸೇರಿದಂತೆ ಸಾಕಷ್ಟು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇವರ ಮಧುಮೇಹದ ಕಾರಣದಿಂದ ಕೆಲವು ವರ್ಷಗಳ ಹಿಂದೆಯೇ ತನ್ನೆರಡೂ ಕಾಲುಗಳನ್ನು ಕಳೆದುಕೊಂಡು ಅಂಗವೈಕಲ್ಯಕ್ಕೂ ತುತ್ತಾಗಿದ್ದರು. ಇದರ ಮಧ್ಯೆ ಇವರಿಗೆ ಟ್ರಿಪಲ್‌ ವೆಸೆಲ್‌ ಕೊರೊನರಿ ಕಾಯಿಲೆಯಿಂದ ಹೃದಯದ ನೋವು ಕಾಣಿಸಿಕೊಂಡಿದೆ. ಮಡಗಾಸ್ಕರ್‌ ದ್ವೀಪದಲ್ಲಿ ಹೃದಯ ಸಂಬಂಧಿ ಚಿಕಿತ್ಸೆಗೆ ಸುಧಾರಿತ ವೈದ್ಯಕೀಯ ವ್ಯವಸ್ಥೆ ಇಲ್ಲದ ಕಾರಣ ಅವರು ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು” ಎಂದು ತಿಳಿಸಿದ್ದಾರೆ.

“ಈಗಾಗಲೇ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಅವರಿಗೆ ತೆರೆದ ಬೈಪಾಸ್‌ ಸರ್ಜರಿ ಅಸಾಧ್ಯವಾಗಿತ್ತು. ಹಾಗಾಗಿ ಅವರಿಗೆ ರೋಬೋಟ್‌ ನೆರವಿನ “ರೋಬೋಟ್ ಅಸಿಸ್ಟೆಡ್ ಮಿನಿಮಲಿ ಇನ್ವೇಸಿವ್ ಡೈರೆಕ್ಟ್ ಕರೋನರಿ ಆರ್ಟರಿ ಬೈಪಾಸ್ (ಎಂಐಡಿಸಿಎಬಿ) ಎಂಬ ಕನಿಷ್ಠ ಆಕ್ರಮಣಕಾರಿ ವಿಧಾನದ ಹೈಬ್ರಿಡ್‌ ಶಸ್ತ್ರಚಿಕಿತ್ಸೆಯನ್ನು ಮಾಡಲಾಯಿತು. ಇದೊಂದು ನೂತನ ಚಿಕಿತ್ಸೆಯಾಗಿದ್ದು, ಇದು ನೇರ ಪರಿಧಮನಿಯ ಬೈಪಾಸ್‌ ಸರ್ಜರಿ ಮಾಡುವ ಮೂಲಕ ಕಿರಿದಾದ ಅಪಧಮಿಗಳ ರಕ್ತದ ಹರಿವನ್ನು ಸುಧಾರಿಸಬಹುದು” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಆ.18ರಂದು 7ನೇ ಕನ್ನಡ ಅಕ್ಷರ ಜಾತ್ರೆ ಕಾರ್ಯಕ್ರಮ

ಡಾ. ಮೋಹನ್ ಕೇಶವಮೂರ್ತಿ ಮಾತನಾಡಿ, “ಮೂತ್ರಪಿಂಡದ ವೈಫಲ್ಯ ಹಾಗೂ ಪ್ರಾಸ್ಟೇಟ್‌ ಗ್ರಂಥಿಯ ಸಮಸ್ಯೆ ಹೊಂದಿದ್ದ ಅವರಿಗೆ ಯೂರೋಲಿಫ್ಟ್‌ ಮೂಲಕ ಪ್ರಾಸ್ಟೇಟ್‌ ಗ್ರಂಥಿಯ ಸಮಸ್ಯೆಗೆ ಚಿಕಿತ್ಸೆ ನೀಡಿದೆವು. ಪ್ರಸ್ತುತ ರೋಗಿಯು ಚೇತರಿಕೆ ಕಾಣುತ್ತಿದ್ದಾರೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...