ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನ ಯಶವಂತಪುರ ವ್ಯಾಪ್ತಿಯ ಮತ್ತಿಕೆರೆ ಜಂಕ್ಷನ್‌ನಲ್ಲಿ ನಡೆದಿದೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಚಾಲಕ ಕಾರನ್ನು ರಸ್ತೆ ಬದಿಗೆ ತಂದು ನಿಲ್ಲಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು | ಪಿಎಚ್‌ಡಿ ಫೆಲೋಶಿಪ್ ಅನ್ನು ಮೂಲ ಸ್ವರೂಪದಲ್ಲಿಯೇ ಜಾರಿಗೊಳಿಸಿ: ಎಸ್‌ಐಒ ಆಗ್ರಹ
ಟಾಟಾ ಕಂಪನಿಯ ಕಾರು ಬೆಂಕಿಗಾಹುತಿಯಾಗಿದೆ. ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಯಶವಂತಪುರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಘಟನೆಗೆ ನಿಖರ ಕಾರಣ ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
