ಕೈಗೆ ಕೋಳ ಹಾಕಿದ್ದರೂ ಪೊಲೀಸರ ಮುಂದೆ ಸಿಗರೇಟ್ ಸೇದಿ ರೀಲ್ಸ್ ಮಾಡಿದ ರೌಡಿಶೀಟರ್

Date:

ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರು ರೀಲ್ಸ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಶೇರ್ ಮಾಡಲು ಉತ್ಸಾಹಿಗಳಾಗಿದ್ದಾರೆ. ಇಂದಿನ ದಿನಗಳಲ್ಲಿ ಜೈಲು ಎಂಬುವುದು ಗೂಂಡಾಗಳಿಗೆ, ಕಳ್ಳರಿಗೆ, ಕೊಲೆಗಡುಕರಿಗೆ ಮನಃಪರಿವರ್ತನೆಯ ತಾಣವಾಗಿರುವ ಬದಲು ಮೋಜು ಮಸ್ತಿ ಜತೆಗೆ ರೀಲ್ಸ್‌ ಮಾಡುವ ತಾಣವಾಗಿದೆಯೇ ಎಂಬ ಅನುಮಾನ ಮೂಡಿಸುತ್ತಿದೆ. ಹಿಂದಿನ ದಿನಗಳಲ್ಲಿ ಪೊಲೀಸರನ್ನು ಕಂಡರೆ ಭಯ ಪಡುತ್ತಿದ್ದ ಗೂಂಡಾಗಳು ಇದೀಗ ಪೊಲೀಸರ ಎದುರಿಗೆ ಅಂದರೆ ಬಂಧನವಾದಾಗಲೂ ಅವರ ಮುಂದೆ ನಿಂತು ಸಿಗರೇಟ್ ಸೇದುವುದು, ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದು. ಇಂತಹ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.

- Advertisement -

ಬೆಂಗಳೂರಿನಲ್ಲಿ ಸಿದ್ದಾಪುರ ರಾಹುಲ್ ಅಲಿಯಾಸ್ ಸ್ಟಾರ್ ರಾಹುಲ್ ಎಂಬ ರೌಡಿಶೀಟರ್ ಈ ಹಿಂದೆ ಕೊಲೆ ಯತ್ನ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದನು. ತಾಕತ್ ಇದ್ದರೆ, ನನ್ನನ್ನು ಹಿಡಿಯಿರಿ ಎಂದು ಪೊಲೀಸರಿಗೆ ಅವಾಜ್ ಹಾಕಿ ವಿಡಿಯೋ ಮಾಡಿದ್ದನು. ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿ, ಕೆಲ ಪುಂಡು ಪೋಕರಿ ಹುಡುಗರಿಗೆ ಸ್ಟಾರ್ ಆಗಿದ್ದನು. ಇದೀಗ, ಮತ್ತೆ ಅಂತಹದೆ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪೊಲೀಸರ ಎದುರಲ್ಲೆ ಕೈಗೆ ಕೋಳ ಹಾಕಿದ್ದರೂ, ನಾಲ್ಕೈದು ಸಿಗರೇಟ್ ಸೇದಿದ್ದಾನೆ. ಈ ವೇಳೆ ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣಲ್ಲಿ ಅಪ್‌ಲೋಡ್ ಮಾಡಿದ್ದಾನೆ. ಇದನ್ನು ಕಂಡ ಈತನ ಸಹಚರರು ‘ಹೆಂಗೆ ನಮ್ಮಣ್ಣ’ ಎಂದು ಬಿಗುತ್ತಿದ್ದಾರೆ.

ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಿ ಹೊರ ಕರೆತರುವಾಗಲೂ ಸಹ ರೀಲ್ಸ್ ಮಾಡಿದ್ದಾನೆ. ಪೊಲೀಸರ ಎದುರಲ್ಲೇ ಸಿಗರೇಟ್ ಸೇದಿ ವಿಡಿಯೋ ಮಾಡಿಸಿ ‘ನಾನ್ ಕಸ್ಟಡಿಯಲ್ಲಿದ್ದರೂ ರಾಜನೇ, ಪೊಲೀಸರು ನನಗೇನು ಮಾಡಲಾರರು’ ಎಂಬ ಸಂದೇಶವನ್ನು ರವಾನಿಸಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಗಳ ಮೇಲೆ ಅತ್ಯಾಚಾರ ಎಸಗಿದ್ದ ದುರುಳ ತಂದೆಗೆ 20 ವರ್ಷ ಜೈಲು ಶಿಕ್ಷೆ

ಕುಳ್ಳು ರಿಜ್ವಾನ್ ಅತ್ಯಾಪ್ತ ಸಹಚರರಲ್ಲಿ ಒಬ್ಬನಾಗಿದ್ದ ಸ್ಟಾರ್ ರಾಹುಲ್ ಮೇಲೆ ನಗರದ ನಾನಾ ಪೊಲೀಸ್ ಠಾಣೆಗಳಲ್ಲಿ 960ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರಗೂರು | ಕಾಡಾನೆ ದಾಳಿಗೆ ಬೈಕ್ ಸವಾರ ಬಲಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ...

ಹಾವೇರಿ‌ | ಈ ಬಾರಿ ಕಬ್ಬಿಗೆ ಟನ್‌ಗೆ ₹ 5,500 ದರ ನಿಗದಿಗೆ ರೈತ ಸಂಘದ ಅಧ್ಯಕ್ಷ ಚೂನಪ್ಪ‌ಪೂಜಾರಿ ಆಗ್ರಹ

"ಮಳೆ‌ ಕೊರತೆಯಿಂದ‌ ಎಲ್ಲ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಈ ಬಾರಿ...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...