ಬೆಂಗಳೂರು | 1 ಕೆ.ಜಿ 262 ಗ್ರಾಂ ಚಿನ್ನದ ಆಭರಣ ಕದ್ದಿದ್ದ ಸೇಲ್ಸ್‌ ಮ್ಯಾನ್; ಬಂಧನ

Date:

ಚಿನ್ನದ ಅಂಗಡಿಯಲ್ಲಿ ಕೆಲಸಕ್ಕೆ ಸೇರಿಕೊಂಡು ಸುಮಾರು 1 ಕೆ.ಜಿ 262 ಗ್ರಾಂ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿದ್ದ ಕಳ್ಳರನ್ನು ಬೆಂಗಳೂರಿನ ಹಲಸೂರು ಗೇಟ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಹಲಸೂರು ಗೇಟ್ ಠಾಣಾ ವ್ಯಾಪ್ತಿಯಲ್ಲಿರುವ ಜುವೆಲ್ಲರಿ ಶಾಪ್ ಮಾಲೀಕ ಅಭಿಷೇಕ್ ಎಂಬುವರು ನೀಡಿದ ದೂರಿನ ಮೇರೆಗೆ ಇದೇ ಅಂಗಡಿಯಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ರಾಜಸ್ತಾನ ಮೂಲದ ಲಾಲ್ ಸಿಂಗ್ ಹಾಗೂ ಈತನಿಗೆ ಸಹಕರಿಸಿದ ಮತ್ತೋರ್ವ ಆರೋಪಿ ರಾಜ್ ಪಾಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 1.262 ಕೆ.ಜಿ. ಮೌಲ್ಯದ ಚಿನ್ನದೊಡವೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಏನಿದು ಪ್ರಕರಣ?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಳೆದ ಏಳು ತಿಂಗಳಿಂದ ಅಭಿಷೇಕ್ ಜುವೆಲ್ಲರಿ ಶಾಪ್‌ನಲ್ಲಿ ಸೇಲ್ಸ್ ಮ್ಯಾನ್ ಆಗಿ ಲಾಲ್ ಸಿಂಗ್ ಕೆಲಸ ಮಾಡುತ್ತಿದ್ದನು. ಮಾಲೀಕರ ವಿಶ್ವಾಸಗಳಿಸಿಕೊಂಡಿದ್ದರಿಂದ ಕಳೆದ ತಿಂಗಳು 28ರಂದು ಆತನಿಗೆ ಜುವೆಲ್ಲರಿ ಮಾಲೀಕರು ಆಂಧ್ರದ ನಲ್ಲೂರಿನಲ್ಲಿರುವ ಮುಖೇಶ್ ಹಾಗೂ ಶುಭಂ ಗೋಲ್ಡ್ ಜುವೆಲ್ಲರಿ ಶಾಪ್‌ಗಳ ಮಾಲೀಕರಿಗೆ 1.262 ಕೆ.ಜಿ ಚಿನ್ನಾಭರಣ ಕೊಟ್ಟು ಬರುವಂತೆ ಹೇಳಿದ್ದರು.

ಚಿನ್ನಾಭರಣ ಬ್ಯಾಗ್ ಪಡೆಯುತ್ತಿದ್ದಂತೆ ಆರೋಪಿಯು ದುರಾಸೆಗೆ ಬಿದ್ದು, ಬೆಂಗಳೂರಿನಲ್ಲಿರುವ ಸಹಚರರಿಗೆ ವಿಷಯ ತಿಳಿಸಿ ಚಿನ್ನವನ್ನು ಕದಿಯುವ ಉಪಾಯ ಮಾಡಿದ್ದಾನೆ.

ಉಪಾಯದಂತೆ, ಆತ ನೆಲ್ಲೂರು ತಲುಪಿದ ನಂತರ ತನ್ನ ಮಾಲೀಕರಿಗೆ ಕರೆ ಮಾಡಿ, ನೆಲ್ಲೂರಿನಲ್ಲಿ ಅಪರಿಚಿತರು ತನಗೆ ಗನ್‌ಪಾಯಿಂಟ್ ಇಟ್ಟು, ಚಾಕುವಿನಿಂದ ಹಲ್ಲೆ ಮಾಡಿ, ಚಿನ್ನವಿರುವ ಬ್ಯಾಗ್‌ ಅನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ತಿಳಿಸಿದ್ದಾನೆ.

ನಂತರ ಶಾಪ್ ಮಾಲೀಕ ಸೇಲ್ಸ್‌ ಮ್ಯಾನ್‌ನನ್ನು ನೆಲ್ಲೂರಿನಿಂದ ವಾಪಸ್ ಕರೆದುಕೊಂಡು ಬಂದಿದ್ದಾರೆ. ಅಕ್ಟೋಬರ್ 2ರಂದು ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಾಗಿ ತನಿಖೆ ಆರಂಭಿಸಿದ ಇನ್ಸ್‌ಪೆಕ್ಟರ್ ಹನುಮಂತ್ರ ಭಜಂತ್ರಿ, ಚಾಕುವಿನಿಂದ ಕೈಗಳ ಮೇಲೆ ಹಲ್ಲೆ ಮಾಡಿರುವುದಾಗಿ ನೀಡಿದ ಹೇಳಿಕೆಗೂ ಕೈ ಮೇಲೆ ಆಗಿರುವ ಗಾಯಕ್ಕೆ ಸಾಮ್ಯತೆ ಬರದ ಹಿನ್ನೆಲೆಯಲ್ಲಿ 10 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಅಪರಾಧ ಕೃತ್ಯದ ಬಗ್ಗೆ ಸತ್ಯ ಬಾಯಿಬಿಟ್ಟಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿಯಲ್ಲಿ ಮಾರ್ಷಲ್‌ ನೌಕರಿ ಕೊಡಿಸುವುದಾಗಿ ವಂಚಿಸಿದ್ದ ಆರೋಪಿಯ ಬಂಧನ

ಬಳಿಕ, ಕದ್ದ ಚಿನ್ನಾಭರಣಗಳನ್ನು ರಾಜಸ್ಥಾನಕ್ಕೆ ತನ್ನ ಸಹಚರರ ಮೂಲಕ ಕಳುಹಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಸಹಚರ ರಾಜ್ ಆಲಿಯಾಸ್ ರಾಜಪಾಲ್ ವಶಕ್ಕೆ ಪಡೆದು ₹75 ಲಕ್ಷ ಮೌಲ್ಯದ 1.262 ಕೆ.ಜಿ.ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನಲ್ಲಿ ನೀರು ಸೋರಿಕೆ ಪತ್ತೆ ಹಚ್ಚಲಿವೆ ರೊಬೋಟ್‌ಗಳು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ನೀರಿನ ಸಮಸ್ಯೆ ತಲೆದೂರಿದೆ. ಈ ಹಿನ್ನೆಲೆ,...

ದಾವಣಗೆರೆ | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಆಗ್ರಹ

ದಾವಣಗೆರೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಹಲವಾರು ವರ್ಷಗಳಿಂದ ಬೇಡಿಕೆ ಇಡಲಾಗಿದೆ. ಸರ್ಕಾರ...

ಕಲಬುರಗಿ | ‘ಅಂಬೇಡ್ಕರ್ ಮತ್ತು ಗಾಂಧೀಜಿ – ಒಂದು ನದಿಯ ಎರಡು ದಡಗಳು’

ಬಾಬಾ ಸಾಹೇಬ್ ಅವರ 133ನೇ ಜಯಂತಿಯ ದಿನದಂದ ನಾವು ಹೆಚ್ಚೆಚ್ಚು ಎಷ್ಟೇ...

ಗದಗ | ದೊಡ್ಡೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್...