ಬೆಂಗಳೂರು | 30 ವರ್ಷದ ಸಂವಾದ ಸಂಭ್ರಮ; ‘ಯುವನಡೆ’ ವಿಶೇಷ ಕಾರ್ಯಕ್ರಮ

Date:

ಯುವಜನರಲ್ಲಿ ಸಾಮಾಜಿಕ ಅರಿವು, ಸರ್ವತೋಮುಖ ಸಬಲೀಕರಣಕ್ಕೆ ತೊಡಗಿಸಿಕೊಂಡಿರುವ ಸಂವಾದ ಸಂಸ್ಥೆ ಸ್ಥಾಪನೆಗೊಂಡು 30 ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ಸಂವಾದ ಬಳಗದಿಂದ ಸೆಪ್ಟೆಂಬರ್‌ 15ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯ ಭಾರತ್ ಸೈಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ 30 ವರ್ಷದ ಸಂವಾದ ಸಂಭ್ರಮಾಚರಣೆಯ, ‘ಯುವನಡೆ’ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.

- Advertisement -

ಸಂವಾದವು 1992ರಲ್ಲಿ ಟ್ರಸ್ಟ್ ಆಗಿ ನೋಂದಣಿಯಾಗಿ ಹಲವು ಕಾರ್ಯಕ್ರಮಗಳ ಮೂಲಕ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆಯು ಯುವಜನರಲ್ಲಿ ಸಾಮಾಜಿಕ ಸಂವೇದನಾಶೀಲತೆಯನ್ನು ಬೆಳೆಸಿ, ಅವರನ್ನು ಸಾಮಾಜಿಕ ಬದಲಾವಣೆಯ ಕಡೆಗೆ ಕ್ರಿಯಾಶೀಲರನ್ನಾಗಿಸುತ್ತಿರುವ, ಯುವ ಸಬಲೀಕರಣದಲ್ಲಿ ತೊಡಗಿಸಿಕೊಂಡಿರುವ ಹಾಗೂ ಸ್ವಯಂ ಸೇವಾ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಯಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಕಾರ್ಯಕ್ರಮದಲ್ಲಿ ಯುವಜನ ಸಬಲೀಕರಣ ಸಚಿವ ಬಿ ನಾಗೇಂದ್ರ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ ಉಮಾಮಹಾದೇವನ್, ಮಾನವ ಹಕ್ಕುಗಳ ಹೋರಾಟಗಾರ ಬೆಜವಾಡ ವಿಲ್ಸನ್, ಡಾ ಸಬೀಹಾ ಭೂಮಿಗೌಡ, ಅಂಬಣ್ಣ ಅರೋಲಿಕರ್, ಶಾರದಾ ಗೋಪಾಲ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಯುವಜನ ಹಕ್ಕುಗಳು ಮತ್ತು ಜೀವನೋಪಾಯ ವಿಚಾರಗಳ ಬಗ್ಗೆ ಯುವಾಧಿವೇಶನ, ಗಣ್ಯರಿಂದ ಸ್ಪಂದನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ‘ಯುವಜನ ಆಯೋಗ ಸ್ಥಾಪನೆ, ರಾಜ್ಯ ಯುವನೀತಿ ಪರಿಷ್ಕರಣೆ- ಅನುಷ್ಠಾನ, ಉದ್ಯೋಗ ಸೃಷ್ಟಿ ವಿಚಾರಗಳನ್ನು ಸಂವಾದ-ಯುವ ಮುನ್ನಡೆಯ ಕಾರ್ಯಕರ್ತರು ಮುನ್ನೆಲೆಗೆ ತರಲಿದ್ದಾರೆ” ಎಂದು ಸಂವಾದ ಬಳಗ ತಿಳಿಸಿದೆ.

ಸಂಸ್ಥೆ ಹಿನ್ನೆಲೆ:  ರಾಜ್ಯದ 5 ಜಿಲ್ಲೆಗಳಲ್ಲಿ ಯುವ ಸಂಪನ್ಮೂಲ ಕೇಂದ್ರಗಳ ಮೂಲಕ ಯುವ ಸಬಲೀಕರಣಕ್ಕೆ ಕೊಡುಗೆ ನೀಡುತ್ತಿದೆ. ಕನಕಪುರ ರಸ್ತೆಯ ಬಂಜಾರಪಾಳ್ಯದಲ್ಲಿರುವ ಸಂವಾದ-ಬದುಕು ಕ್ಯಾಂಪಸ್‌ನಲ್ಲಿ ಜೀವನೋಪಾಯ ಕಲಿಕಾ ಕೇಂದ್ರದ ಮೂಲಕ ರಾಜ್ಯ ಮತ್ತು ಹೊರ ರಾಜ್ಯಗಳ ಯುವಜನರಿಗೆ, ಯುವಜನ ಕಾರ್ಯಕರ್ತರಿಗೆ ಅರಿವು, ತರಬೇತಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ.

ಸಹಯಾನ: ಇದು ಕರ್ನಾಟಕದ ಐದು ಜಿಲ್ಲೆಗಳಲ್ಲಿರುವ ಯುವ ಸಂಪನ್ಮೂಲ ಕೇಂದ್ರಗಳ ಮೂಲಕ ಯುವಜನ ಅರಿವು ಮತ್ತು ನಾಯಕತ್ವ ತರಬೇತಿ ನೀಡುವ, ಯುವಜನರನ್ನು ನಾಗರಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಡುವ ಸಂವಾದದ ಒಂದು ಕಾರ್ಯಕ್ರಮ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಬಸ್‌ ಮಾಲೀಕರಿಂದ ಜಾಗೃತಿ ಅಭಿಯಾನ; ಮೆಟ್ಟಿಲುಗಳ ಮೇಲೆ ನಿಲ್ಲದಂತೆ ಸಲಹೆ

ಬದುಕು ಸೆಂಟರ್ ಫಾರ್ ಲೈವ್ಲಿಹುಡ್ಸ್ ಲರ್ನಿಂಗ್: ಸಾಮಾಜಿಕ ಅಗತ್ಯತೆಗಳನ್ನು ಮತ್ತು ಸುಸ್ಥಿರತೆಯನ್ನು ಗಮನದಲ್ಲಿರಿಸಿಕೊಂಡು ನಾನಾ ಕೋರ್ಸುಗಳ ಮುಖೇನ ಪರಿಸರ ಮತ್ತು ಜನಪರವಾದ ವೃತ್ತಿ-ಜೀವನೋಪಾಯ ಕೌಶಲ್ಯಗಳನ್ನು ಕಲಿಸುತ್ತಿರುವ ಸಂವಾದದ ಜೀವನೋಪಾಯ ಕಲಿಕಾ ಕೇಂದ್ರ. ಕಣಜ ಸಂಶೋಧನೆ ಮತ್ತು ಯುವಜನ ಹಕ್ಕುಗಳ ವಕಾಲತ್ತಿನ ಕೇಂದ್ರವು ಯುವಜನ ಸಂಬಂಧಿತ ಸಂಶೋಧನೆ ಕೈಗೊಳ್ಳುವ ಹಾಗೂ ಯುವಜನ ಹಕ್ಕುಗಳ ಅರಿವು ಮೂಡಿಸಿ ವಕಾಲತ್ತು ವಹಿಸುವ ಕಾರ್ಯದಲ್ಲಿ ನಿರತವಾಗಿದೆ.

ಯುವ್ಯಾನ್ ಕೇಂದ್ರ: ಕರ್ನಾಟಕ ಮತ್ತು ಭಾರತದ ಯುವಜನ ಕೇಂದ್ರಿತ ಸಂಸ್ಥೆಗಳು ಮತ್ತು ಕಾರ್ಯಕರ್ತರಿಗೆ ವೃತ್ತಿಪರ ಯುವಜನ ಕಾರ್ಯದ ತರಬೇತಿ ಕೋರ್ಸ್‌ಗಳ ಮೂಲಕ ತರಬೇತಿ ನೀಡಿ ಯುವಜನ ಕಾರ್ಯ ಸಹಯೋಗದ ಮೂಲಕ ಯುವಜನ ಕಾರ್ಯ ವಿಸ್ತರಣೆಗಾಗಿ ಕೆಲಸ ಮಾಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...