ಬೆಂಗಳೂರು | 3 ದಿನಗಳ ನಂತರ ಬಲೆಗೆ ಬಿದ್ದ ಚಿರತೆ

Date:

ಬೆಂಗಳೂರಿನ ಹೊರ ವಲಯದಲ್ಲಿರುವ ಬೊಮ್ಮನಹಳ್ಳಿಯ ಕೂಡ್ಲು, ಸಿಂಗಸಂದ್ರ ಬಳಿ ಕಳೆದ ಮೂರು ದಿನಗಳ ಹಿಂದೆ ಕಾಣಿಸಿಕೊಂಡ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಸದ್ಯ ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ಹೆಚ್.ಎಸ್.ಆರ್ ಲೇಔಟ್ ಸೇರಿದಂತೆ ಸುತಮುತ್ತಲ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಬೊಮ್ಮನಹಳ್ಳಿಯ ಕೈಗಾರಿಕಾ ಪ್ರದೇಶ ವಲಯದಲ್ಲಿ ಚಿರತೆ ಸೆರೆಯಾಗಿದೆ. ಮೈಸೂರು ಲ್ಯಾಪರ್ಡ್‌ ಟಾಸ್ಕ್‌ ಫೋರ್ಸ್‌ನ ಕಾರ್ಯಾಚರಣೆ ಯಶಸ್ವಿಯಾಗಿದೆ. ಕೂಡ್ಲು ಗೇಟ್ ಬಳಿಯ ಪಾಳು ಬಿದ್ದ ಕಟ್ಟಡದಲ್ಲಿ ಚಿರತೆಯನ್ನು ಸೆರೆಹಿಡಿಯಲಾಗಿದೆ.

ಬೆಂಗಳೂರಿನ ಹೊರ ವಲಯದಲ್ಲಿರುವ ಬೊಮ್ಮನಹಳ್ಳಿಯ ಕೂಡ್ಲು, ಸಿಂಗಸಂದ್ರ ಬಳಿ ಅ.29ರ ರಾತ್ರಿ ಕಾಣಿಸಿಕೊಂಡಿದ್ದ ಚಿರತೆ, ನಗರಕ್ಕೆ ಬಂದು ಮೂರು ದಿನ ಕಳೆದರೂ ಬೋನಿಗೆ ಬಿದ್ದಿರಲಿಲ್ಲ. ಇದರಿಂದ ಸುತ್ತಮುತ್ತಲಿನ ನಿವಾಸಿಗಳು ಆತಂಕಗೊಂಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೂರು ದಿನವಾದರೂ ಬೋನಿಗೆ ಬೀಳದ ಚಿರತೆ; ವೈದ್ಯ ಸೇರಿದಂತೆ ಮೂವರ ಮೇಲೆ ದಾಳಿ

ಬೊಮ್ಮನಹಳ್ಳಿ ಭಾಗದ ಕೂಡ್ಲು ಸಮೀಪ ಕಾಣಿಸಿಕೊಂಡಿದ್ದ ಚಿರತೆ ಮತ್ತೆ ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಪತ್ತೆಯಾಗಿತ್ತು. ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಸತತವಾಗಿ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸಿದ್ದರೂ ಕೂಡಾ ಚಿರತೆಯ ಕುರುಹು ಪತ್ತೆಯಾಗಿರಲಿಲ್ಲ. ನವೆಂಬರ್ 1 ರಂದು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಚಿರತೆ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ ಪ್ರಗತಿಪರ ಸಂಘಟನೆಗಳ ಒತ್ತಾಯ

ಸರ್ಕಾರ, ನಿರ್ಲಕ್ಷ್ಯ ಧೋರಣೆ ಬಿಟ್ಟು ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ...

ಕಲಬುರಗಿ | ಸಿಮೆಂಟ್‌ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು; 2 ತಿಂಗಳಲ್ಲಿ 4ನೇ ದುರಂತ

ಸಿಮೆಂಟ್‌ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ,...

ಬೀದರ್‌ | ವಿದ್ಯುತ್‌ ಸ್ಪರ್ಶ: ಸ್ಥಳದಲ್ಲೇ ವ್ಯಕ್ತಿ ಸಾವು

ವಿದ್ಯುತ್‌ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ಲಾಡವಂತಿ...

ವಿಜಯಪುರ | ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆ ಅವ್ಯವಸ್ಥೆ ಸರಿಪಡಿಸುವಂತೆ ಡಿಎಸ್‌ಎಸ್‌ ಮನವಿ 

ವಿಜಯಪುರ ಜಿಲ್ಲೆಯ ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆಯ ಅವ್ಯವಸ್ಥೆಗೆ ಕಾರಣರಾಗಿರುವ ಅಧಿಕಾರಿಗಳ...