ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ಹೊರವಲಯದಲ್ಲಿ ಕಳೆದ ಮೂರು ದಿನಗಳಿಂದ ಸುತ್ತಾಡುತ್ತಿದ್ದ ಚಿರತೆಯನ್ನು ಅರಣ್ಯ ಸಿಬ್ಬಂದಿ ಸೆರೆಹಿಡಿದಿದ್ದಾರೆ. ಆದರೆ, ಚಿರತೆ ಹಿಡಿಯಲು ಅರಣ್ಯ ಅಧಿಕಾರಿಗಳು ಅರವಳಿಕೆ ಚುಚ್ಚು ಮದ್ದನ್ನು ಶೂಟ್ ಮಾಡಿದ್ದರು. ಇದರಿಂದ, ನಿತ್ರಾಣಗೊಂಡಿದ್ದ ಚಿರತೆ ಕೊನೆಯುಸಿರೆಳೆದಿದೆ.
ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆ, ನಗರದ ನಿವಾಸಿಗಳಲ್ಲಿ ಆತಂಕ ಮೂಡಿಸಿತ್ತು. ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯ ಅಧಿಕಾರಿಗಳು ಹರಸಾಹಸ ಪಡುತ್ತಿದ್ದರು. ಚಿರತೆ ಸೆರೆಗಾಗಿ ಬೋನುಗಳನ್ನು ಇರಿಸಿದ್ದರು. ಆದರೆ, ಚಿರತೆ ಬೋನಿಗೆ ಬಿದ್ದಿರಲಿಲ್ಲ.
ಮೂರು ದಿನಗಳಲ್ಲಿ ಮೂವರ ಮೇಲೆ ಚಿರತೆ ದಾಳಿ ಮಾಡಿತ್ತು. ಹೀಗಾಗಿ, ಅರಣ್ಯ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಅಸಮಾಧಾನ ಹೊರ ಹಾಕಿದ್ದರು. ಚಿರತೆಯನ್ನು ಹೇಗಾದರೂ ಹಿಡಿಯಲೇಬೇಕೆಂಬ ಒತ್ತಡ ಅಧಿಕಾರಿಗಳ ಮೇಲಿತ್ತು.
Heart breaking 💔🥺😐
The Leopard 🐆 that was caught in #Bengaluru is dead. It is being speculated that a strong tranquiliser was shot into the animal, thereby rendering it absolutely debilitated
The big cat hasn’t eaten anything for the last 4 days
Tragic ending 😔 RIP 🙏 https://t.co/2u0vNWdvVw pic.twitter.com/iT5GxcK2XE
— Karnataka Weather (@Bnglrweatherman) November 1, 2023
ಹಳೆಯ ಕಟ್ಟಡಗಳು ಹಾಗೂ ಖಾಲಿ ಜಾಗಗಳಲ್ಲಿ ಬೆಳದಿದ್ದ ಪೊದೆಗಳಲ್ಲಿ ಚಿರತೆ ಅವಿತುಕೊಂಡಿತ್ತು. ಜೆಸಿಬಿಯಿಂದ ಪೊದೆಗಳನ್ನು ತೆರವುಗೊಳಿಸಿದ್ದ ಅಧಿಕಾರಿಗಳು ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಲು ಶೂಟ್ ಮಾಡಿದ್ದರು.
ಬಳಿಕ, ಚರತೆಯನ್ನು ಸೆರೆಹಿಡಿದು ಜೈವಿಕ ಉದ್ಯಾನವನಕ್ಕೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿತ್ತು. ಆದರೆ, ಅರವಳಿಕೆ ನೀಡಲು ಶೂಟ್ ಮಾಡಿದ್ದರಿಂದ ಗಾಯಗೊಂಡಿದ್ದ ಚಿರತೆ ಸಾವನ್ನಪ್ಪಿದೆ. ಬನ್ನೇರುಘಟ್ಟ ಪಾರ್ಕ್ ಆಸ್ಪತ್ರೆಯಲ್ಲಿ ಚಿರತೆಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕನ್ನಡ ಹಾಡು ಹಾಕಿದ್ದಕ್ಕೆ ಪಬ್ ಮ್ಯಾನೇಜರ್ ಮೇಲೆ ಹಲ್ಲೆ
“ಈ ಹಿಂದಿನ ಕಾರ್ಯಾಚರಣೆಯಲ್ಲಿ ಚಿರತೆ ಸೆರೆ ಹಿಡಿಯುವ ವೇಳೆ ಮೂವರ ಮೇಲೆ ದಾಳಿ ಮಾಡಿತ್ತು. ಈಗ ಕಾರ್ಯಾಚರಣೆ ಮಾಡುವ ಸಂದರ್ಭದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ ಮಾಡಲು ಬಂದಿದ್ದು, ಶೂಟ್ ಮಾಡಲಾಗಿದೆ” ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
“ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಚಿರತೆ ಸಾವನ್ನಪ್ಪಿದೆ. ಚಿರತೆಯ ಸಾವು ತುಂಬಾ ನೋವುಂಟು ಮಾಡಿದೆ. ಪ್ರಾಣಿಗೆ ಬಲವಾದ ಟ್ರ್ಯಾಂಕ್ವಿಲೈಸರ್ ಮೂಲಕ ಗುಂಡು ಹಾರಿಸಲಾಗಿದೆ ಎನ್ನಲಾಗಿದೆ. ಇದರಿಂದಾಗಿ ಅದು ಸಂಪೂರ್ಣವಾಗಿ ದುರ್ಬಲಗೊಳ್ಳುತ್ತದೆ. ಚಿರತೆ ಕಳೆದ 4 ದಿನಗಳಿಂದ ಏನನ್ನೂ ತಿಂದಿಲ್ಲ. ಇದು ದುರಂತ ಅಂತ್ಯ” ಎಂದು ನೆಟ್ಟಿಗರು ಕಂಬನಿ ಮಿಡಿದಿದ್ದಾರೆ.