ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್(ಎಂಇಐ) ಸಂಸ್ಥೆಯ ವತಿಯಿಂದ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ಜಯಂತಿ ಆಚರಣೆ ಕಾರ್ಯಕ್ರಮವನ್ನು ಬೆಂಗಳೂರು ನಗರದಲ್ಲಿರುವ ಕಂಪನಿಯ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿ ಮತ್ತು ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು ಎಂಇಐ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಕ್ಷೇಮಾಭಿವೃದ್ಧಿ ಸಂಘ (ರಿ) ಮತ್ತು ಎಂಇಐ ಕನ್ನಡ ಹಿತರಕ್ಷಣಾ ಸಮಿತಿ ಕಟ್ಟಡದ ಉದ್ಘಾಟನೆಯನ್ನು ನೇರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಎಲ್ಲಾ ಅಧಿಕಾರಿ, ನೌಕರರಿಗೆ ಸಂವಿಧಾನ ಓದು ಪುಸ್ತಕವನ್ನು ವಿತರಿಸಲಾಯಿತು ಮತ್ತು ಕರ್ನಾಟಕ ಅಂಧರ ಕ್ಷೇಮಾಭಿವೃದ್ಧಿ ಸಂಸ್ಥೆಯ ಅಂಧ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಮತ್ತು ಪುಸ್ತಕವನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸದ್ಗುರು ಶ್ರೀ ಬಸವಯೋಗಿ ಸ್ವಾಮೀಜಿ, ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ. ಶಿವರಾಂ, ಖ್ಯಾತ ಸಾಹಿತಿ ಎಲ್.ಎನ್ ಮುಕುಂದರಾಜ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷರಾದ ಎಸ್. ಮನೋಹರ್, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಡಿ.ಪದ್ಮಾವತಿ, ಕೆಪಿಟಿಸಿಎಲ್ ಮುಖ್ಯ ಅಭಿಯಂತರರಾದ ರಮೇಶ್ ಹಾಗೂ ಕಂಪನಿಯ ಎಲ್ಲಾ ಅಧಿಕಾರಿ-ನೌಕರರು ಸೇರಿದಂತೆ ಹಲವರು ಉಪಸ್ಥಿತರಿದ್ದರು.