ಬೆಂಗಳೂರು | ಪಿಇಎಸ್ ಕ್ಯಾಂಪಸ್‌ ಕಟ್ಟಡದಿಂದ ಜಿಗಿದು ಮತ್ತೊಬ್ಬ ವಿದ್ಯಾರ್ಥಿ ಸಾವು

Date:

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಕ್ಯಾಂಪಸ್‌ನಲ್ಲಿರುವ ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಮತ್ತೊಬ್ಬ ವಿದ್ಯಾರ್ಥಿ ಮೃತಪಟ್ಟಿದ್ದು, ಒಂದು ವರ್ಷದೊಳಗೆ ವಿಶ್ವವಿದ್ಯಾಲಯದಲ್ಲಿ ನಾಲ್ಕನೇ ವಿದ್ಯಾರ್ಥಿಯ ಸಾವು ಪ್ರಕರಣವಾಗಿದೆ.

ಪಿಇಎಸ್ ವಿಶ್ವವಿದ್ಯಾಲಯದ ಕಟ್ಟಡದ ಆರನೇ ಮಹಡಿಯಿಂದ ಬಿದ್ದು 21 ವರ್ಷದ ವಿದ್ಯಾರ್ಥಿ ಮಂಗಳವಾರ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತರನ್ನು ಆಂಧ್ರಪ್ರದೇಶದ ಕರ್ನೂಲ್ ಮೂಲದ ಕೆ ರಾಹುಲ್ ಎಂದು ಗುರುತಿಸಲಾಗಿದೆ. ಅವರು ಕಂಪ್ಯೂಟರ್ ಸೈನ್ಸ್‌ನಲ್ಲಿ ಮೂರನೇ ವರ್ಷದ ಎಂಜಿನಿಯರಿಂಗ್‌ ಸ್ನಾತಕೋತ್ತರ ಪದವಿ ಓದುತ್ತಿದ್ದರು. ಮಂಗಳವಾರ ಬೆಳಿಗ್ಗೆ 10:30ರ ಸುಮಾರಿಗೆ ಶವವಾಗಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ.

“ವಿಶ್ವವಿದ್ಯಾಲಯದಲ್ಲಿ ಪರೀಕ್ಷೆಗಳು ನಡೆಯುತ್ತಿದ್ದವು. ವಿದ್ಯಾರ್ಥಿ ಮಂಗಳವಾರ ಪರೀಕ್ಷೆ ತೆಗೆದುಕೊಂಡಿಲ್ಲ. ಮೇ 14 ರ ಮಂಗಳವಾರ ಬೆಳಿಗ್ಗೆ ಈ ಘಟನೆ ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿಯೂ ಯಾವುದೇ ದುರುದ್ದೇಶ ಕಂಡುಬಂದಿಲ್ಲ. ಯಾವುದೇ ಡೆತ್ ನೋಟ್ ಕೂಡಾ ಸಿಕ್ಕಿಲ್ಲ” ಎಂದು ತನಿಖೆಯಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇನ್ಸ್‌ಟಾಗ್ರಾಮ್ ಖಾತೆ @nammabengaluroo ಹಂಚಿಕೊಂಡಿರುವ ಚಾಟ್‌ನ ಸ್ಕ್ರೀನ್‌ಶಾಟ್‌ನಲ್ಲಿ “ನಾನು ಕೇವಲ ಅನಾಮಧೇಯ ಟಿಪ್ಪರ್ ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಪಿಇಎಸ್ ಎಲೆಕ್ಟ್ರಾನಿಕ್ ಸಿಟಿ ಕ್ಯಾಂಪಸ್‌ನಲ್ಲಿ ಮತ್ತೊಂದು ಆತ್ಮಹತ್ಯೆ ನಡೆದಿದೆ. ವಿದ್ಯಾರ್ಥಿ ಮೂರನೇ ವರ್ಷದಲ್ಲಿ ಓದುತ್ತಿದ್ದರು. ಆದರೆ ಅವನ ಸಾವಿನ ಬಗ್ಗೆ ಮಾಹಿತಿ ಇನ್ನೂ ಹೊರಬಂದಿಲ್ಲ. ಘಟನೆ ನಡೆದ ಕೂಡಲೇ ಸಿಬ್ಬಂದಿ ಘಟನಾ ಸ್ಥಳವನ್ನು ಮುಚ್ಚಿಹಾಕುವಲ್ಲಿ ಯಶಸ್ವಿಯಾದರು. ಅವರು ವಿದ್ಯಾರ್ಥಿ ಬಿದ್ದಿದ್ದ ಸ್ಥಳವನ್ನು ಸ್ವಚ್ಛಗೊಳಿಸಿದರು. ಬಳಿಕ ಪೊಲೀಸರಿಗೆ ಕರೆ ಮಾಡಿದರು. ಆದರೆ ಅದನ್ನು ಮುಚ್ಚಿಡಲು ಕಾಳಜಿ ವಹಿಸುತ್ತಾರೆಂದು ನಾನು ಭಾವಿಸುವುದಿಲ್ಲ. ಇದು ಈ ಕ್ಯಾಂಪಸ್‌ನಲ್ಲಿ ನಡೆದ ಮೂರನೇ ಆತ್ಮಹತ್ಯೆ ಪ್ರಕರಣವಾಗಿದೆ ಮತ್ತು ನಿಜವಾಗಿಯೂ ಇವುಗಳನ್ನು ಯಾರೂ ನೋಡುವುದಿಲ್ಲ” ಎಂದು ಟ್ವೀಟ್‌ ಮಾಡಿದ್ದಾರೆ.

ಈ ಹಿಂದೆ ಪರೀಕ್ಷೆಯ ಸಮಯದಲ್ಲಿ ಅನ್ಯಾಯದ ವಿಧಾನಗಳನ್ನು ಬಳಸಿದ ಆರೋಪದ ಮೇಲೆ ಆದಿತ್ಯ ಪ್ರಭು(19) ಎಂಬುವವರು ಪಿಇಎಸ್‌ ಕ್ಯಾಂಪಸ್ ಕಟ್ಟಡವೊಂದರ ಎಂಟನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರ ನಂತರ ಜುಲೈ 2023ರಿಂದ ಈವರೆಗೆ ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಮೂರು ಆತ್ಮಹತ್ಯೆಗಳು ವರದಿಯಾಗಿವೆ.

ಮೂರನೇ ವರ್ಷದ ಬಿಟೆಕ್ ವಿದ್ಯಾರ್ಥಿ ಸೂರ್ಯ ಎಂ ಆಚಾರ್ ಎಂಬುವವರು 2023ರ ಡಿಸೆಂಬರ್ 27ರಂದು ಆತ್ಮಹತ್ಯೆ ಮಾಡಿಕೊಂಡರು. ಬಿಬಿಎ ವಿದ್ಯಾರ್ಥಿ ವಿಘ್ನೇಶ್ ಕೆ 2024ರ ಜನವರಿ 30ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗ, ವಿದ್ಯಾರ್ಥಿಯ ಸಾವಿನ ನಾಲ್ಕನೇ ಪ್ರಕರಣ ದೃಢಪಟ್ಟಿದ್ದು, ಈ ವಿದ್ಯಾರ್ಥಿಯ ಸಾವಿನ ಹಿಂದಿನ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ.

(ತೊಂದರೆಯಲ್ಲಿರುವವರು ಅಥವಾ ಆತ್ಮಹತ್ಯೆಯ ಪ್ರವೃತ್ತಿ ಹೊಂದಿರುವವರು ಸಹಾಯಕ್ಕಾಗಿ ಆರೋಗ್ಯ ಸಹಾಯವಾಣಿ ದೂರವಾಣಿ: 104 ಗೆ ಕರೆ ಮಾಡಿ)

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಳೆಗಾಲ ಶುರು: ಹಾವುಗಳ ಬಗ್ಗೆ ಎಚ್ಚರಿಕೆ ವಹಿಸಲು ಬಿಬಿಎಂಪಿ ಮನವಿ

ಪೂರ್ವ ಮುಂಗಾರು ಮಳೆ ಶುರುವಾದ ಬೆನ್ನಲ್ಲೇ ಈಗ ಬೆಂಗಳೂರಿನ ಜನ ವಸತಿ...

ಕೊಪ್ಪಳ | ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ : ಕೆ.ಫಣಿರಾಜ್

ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ...

ರಾಯಚೂರು | ಕುರಿಗೆ ನೀರು ಕುಡಿಸಲು ನದಿಗೆ ತೆರಳಿದ್ದ ಬಾಲಕನ್ನು ಹೊತ್ತೊಯ್ದ ಮೊಸಳೆ

ಕೃಷ್ಣ ನದಿಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಬಾಲಕನ ಮೇಲೆ...

ಕೊಪ್ಪಳ | ಬಂಡವಾಳಶಾಹಿಗಳಿಂದ ಭೂಮಿ ಉಳಿಸಬೇಕಿದೆ: ರಾಕೇಶ್ ಟಿಕಾಯತ್

ಉದ್ಯಮಿಗಳಿಗೆ ರೈತರ ಜಮೀನು ಕಡಿಮೆ ದರದಲ್ಲಿ ಖರೀದಿಸಿ ಬಡಜನರ ಹೊಟ್ಟೆಗೆ ಬಟ್ಟೆ...